ಕೊಚ್ಚಿ: ಎರ್ನಾಕುಲಂ ಜಿಲ್ಲೆಯ ಕಲಮಶ್ಶೇರಿಯಲ್ಲಿ ಸ್ಫೋಟ ಸಂಭವಿಸಿದ ಸ್ಥಳಕ್ಕೆ ಸೋಮವಾರ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಭೇಟಿ ಮಾಡಿದರು. ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಸ್ಫೋಟದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು. ಈ ಕುರಿತು ಟ್ವೀಟ್ ಮಾಡಿರುವ ಅವರು,‘ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ನನ್ನ ಸಹೋದ್ಯೋಗಿಗಳ ಪರವಾಗಿ ಇಂದು ಸ್ಫೋಟಗೊಂಡ ಸ್ಥಳಕ್ಕೆ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ ಜನರನ್ನು ವಿಚಾರಿಸಿದೆ. ಸಂತ್ರಸ್ಥರಿಗೆ ಕೂಡಲೇ ಚಿಕಿತ್ಸೆ ಕೊಡುತ್ತಿರುವ ಎಲ್ಲ ವೈದ್ಯಕೀಯ ಸಿಬ್ಬಂದಿ ಹಾಗೂ ಭದ್ರತಾ ಕಾರ್ಯ ನಡೆಸುತ್ತಿರುವ ಎಲ್ಲರಿಗೂ ನಾನು ಗೌರವ ಸಲ್ಲಿಸುತ್ತೇನೆ’ ಎಂದರು.