ಫೆ.2ಕ್ಕೆ ಉತ್ತರಾಖಂಡ ಏಕರೂಪ ಸಂಹಿತೆ ವರದಿ ಸರ್ಕಾರಕ್ಕೆ ಸಲ್ಲಿಕೆ

KannadaprabhaNewsNetwork |  
Published : Jan 30, 2024, 02:09 AM ISTUpdated : Jan 30, 2024, 07:59 AM IST
ಯುಸಿಸಿ | Kannada Prabha

ಸಾರಾಂಶ

ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಸಮಿತಿಯು ತನ್ನ ಕಾರ್ಯ ಪೂರ್ಣಗೊಳಿಸಿದ್ದು, ಅದರ ವರದಿಯನ್ನು ಫೆ. 2 ರಂದು ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.

ಡೆಹ್ರಾಡೂನ್: ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಸಮಿತಿಯು ತನ್ನ ಕಾರ್ಯ ಪೂರ್ಣಗೊಳಿಸಿದ್ದು, ಅದರ ವರದಿಯನ್ನು ಫೆ. 2 ರಂದು ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.

ಅಲ್ಲದೆ, ವರದಿ ಬಂದ ನಂತರ ಅದನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ. ಬಳಿಕ ರಾಜ್ಯ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಕಾಯ್ದೆ ಜಾರಿಗೆ ತರಲು ಕ್ರಮ ಕೈಗೊಳ್ಳಲಾಗುವುದು ಎಂದೂ ಹೇಳಿದ್ದಾರೆ.

ಇದು ಜಾರಿಯಾದರೆ ಏಕರೂಪ ಸಂಹಿತೆ ಜಾರಿ ಮಾಡಿದ ದೇಶದ ಮೊದಲ ರಾಜ್ಯ ಎಂಬ ಖ್ಯಾತಿಗೆ ಉತ್ತರಾಖಂಡ ಭಾಜನವಾಗುತ್ತದೆ

2022ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆಗೆ ಬಿಜೆಪಿ, ಏಕರೂಪ ಸಂಹಿತೆ ಜಾರಿ ಭರವಸೆ ನೀಡಿತ್ತು. 

ಆ ಪ್ರಕಅರ ಸರ್ಕಾರವು ಮೇ 27, 2022 ರಂದು ನ್ಯಾ। ರಂಜನಾ ಪ್ರಕಾಶ್ ದೇಸಾಯಿ ಅವರ ನೇತೃತ್ವದಲ್ಲಿ ಸಂಹಿತೆಯ ಅಧ್ಯಯನಕ್ಕೆ ಸಮಿತಿ ರಚಿಸಿತ್ತು.

ಸಂವಿಧಾನದ 44ನೇ ವಿಧಿಯು ಸರ್ಕಾರಕ್ಕೆ ಭಾರತದ ದೇಶದಾದ್ಯಂತ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸುವ ಅಧಿಕಾರ ನೀಡುತ್ತದೆ.

 ಇದು ಮದುವೆ, ಉತ್ತರಾಧಿಕಾರ, ದತ್ತು ಮತ್ತು ಇತರ ವಿಷಯಗಳ ಬಗ್ಗೆ ಎಲ್ಲ ಧರ್ಮಗಳಿಗೂ ಒಂದೇ ಕಾನೂನು ತರುತ್ತದೆ.

PREV

Recommended Stories

15 ವರ್ಷ ಬಳಿಕ ಗುಜರಿ ವ್ಯಾಪ್ತಿಗೆಎಲೆಕ್ಟ್ರಿಕ್‌ ವಾಹನಗಳು ಬರಲ್ಲ?
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ