;Resize=(412,232))
ನವದೆಹಲಿ: ಆಫ್ರಿಕಾದ ಇಥಿಯೋಪಿಯಾದಲ್ಲಿ 12,000 ವರ್ಷಗಳಲ್ಲಿ ಜ್ವಾಲಾಮುಖಿಯೊಂದು ಸ್ಫೋಟಗೊಂಡಿದ್ದು, ಇದರ ಬೂದಿ ಮಿಶ್ರಿತ ಹೊಗೆಯು ಉತ್ತರ ಭಾರತದವನ್ನು ಕ್ರಮಿಸುವ ಆತಂಕ ಎದುರಾಗಿದೆ. ಹೈಲಿ ಗುಬ್ಬಿ ಎಂಬ ಜ್ವಾಲಾಮುಖಿಯ ಬೂದಿ ಮಿಶ್ರಿತ ಹೊಗೆಯು ನ.24ರಿಂದ 25ರವೆರೆಗೆ ಭೂತಾನ್‌ಗೂ ವ್ಯಾಪಿಸಲಿದ್ದು, ಹಿಮಾಲಯದವರೆಗೆ ಹೋಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈಗಾಗಲೇ ಹದಗೆಟ್ಟಿರುವ ದೆಹಲಿ ಮತ್ತು ಎನ್‌ಸಿಆರ್ ಗಾಳಿ ಗುಣಮಟ್ಟ ಇನ್ನಷ್ಟು ಕುಸಿವ ಭೀತಿ ಎದುರಾಗಿದೆ.
ಇದರ ಬೆನ್ನಲ್ಲೇ ಭಾರತದ ಹಲವು ವಿಮಾನಗಳು ಕೊಲ್ಲಿ ರಾಷ್ಟ್ರಗಳಿಗೆ ಸೇವೆಯನ್ನು ರದ್ದುಗೊಳಿಸಿವೆ.
ಹೈಲಿ ಗುಬ್ಬಿ ಎಂಬ ಹೆಸರಿನ ಜ್ವಾಲಾಮುಖಿಯು ಇಥಿಯೋಪಿಯಾದ ಅಫಾರ್ ಪ್ರಾಂತ್ಯದಲ್ಲಿ ಸಿಡಿದಿದೆ. ಇದರ ಸ್ಫೋಟದ ತೀವ್ರತೆಗೆ ಆಸುಪಾಸಿನ ಊರುಗಳಲ್ಲಿ ಕಂಪನದ ಅನುಭವವಾಗಿದೆ. ಹೊಗೆಯು ಸಂಪೂರ್ಣ ಗ್ರಾಮವನ್ನೇ ಆಹುತಿ ಪಡೆದುಕೊಂಡಿದೆ. ಮುಂದುವರಿದು ಕೆಂಪು ಸಮುದ್ರ ದಾಟಿ, ಪಕ್ಕದ ಯೆಮೆನ್, ಒಮಾನ್ ಮತ್ತು ಅರಬ್ಬಿ ಸಮುದ್ರವನ್ನು ಕ್ರಮಿಸಲಿದೆ. ಹಾಗೆ ಕರಾಚಿ, ಗುಜರಾತ್ ಮೂಲಕ ಭಾರತಕ್ಕೆ ಪ್ರವೇಶಿಸಲಿದೆ. ಬಳಿಕ ದೆಹಲಿ ಹರ್ಯಾಣ, ಉತ್ತರ ಪ್ರದೇಶ ಮೂಲಕ ಬಿಹಾರ, ಭೂತಾನ್ ಪ್ರವೇಶಿಸಿ ಅಸ್ಸಾಂ ಮೂಲಕ ಹಿಮಾಲಯದವರೆಗೆ ಹೋಗಲಿದೆ ಎಂದು ಅಂದಾಜಿಸಲಾಗಿದೆ.
ಬೂದಿ ಹೊಗೆಯ ಸಂಬಂಧ ವಿಮಾನಯಾನ ಕಂಪನಿಗಳು ಕೊಲ್ಲಿ ದೇಶಗಳಿಗೆ ವಿಮಾನ ರದ್ದುಗೊಳಿಸಿವೆ. ಜೊತೆಗೆ ಡಿಜಿಸಿಎ ವಿಮಾನ/ ನಿಲ್ದಾಣದ ಆಡಳಿತಕ್ಕೆ ಪ್ರತಿಯೊಂದು ಘಟನೆ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಎಂದು ಸೂಚಿಸಿದೆ.