ಪಶ್ಚಿಮ ಬಂಗಾಳದಲ್ಲಿ ವಕ್ಫ್ ಕಾಯ್ದೆ ಜಾರಿ ಮಾಡಲ್ಲ : ಸಿಎಂ ಮಮತಾ ಬ್ಯಾನರ್ಜಿ ಪುನರುಚ್ಚಾರ

KannadaprabhaNewsNetwork |  
Published : Apr 13, 2025, 02:00 AM ISTUpdated : Apr 13, 2025, 06:40 AM IST
ಮಮತಾ | Kannada Prabha

ಸಾರಾಂಶ

ಇತ್ತೀಚೆಗಷ್ಟೇ ಜಾರಿಗೆ ಬಂದಿರುವ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಬಂಗಾಳದಲ್ಲಿ ಜಾರಿಗೆ ತರುವುದಿಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪುನರುಚ್ಚರಿಸಿದ್ದಾರೆ.

  ಕೋಲ್ಕತಾ : ಇತ್ತೀಚೆಗಷ್ಟೇ ಜಾರಿಗೆ ಬಂದಿರುವ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಬಂಗಾಳದಲ್ಲಿ ಜಾರಿಗೆ ತರುವುದಿಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪುನರುಚ್ಚರಿಸಿದ್ದಾರೆ.ವಕ್ಫ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ಬಂಗಾಳದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾತ್ಮಕ ಸ್ವರೂಪಕ್ಕೆ ತಿರುಗಿದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ದೀದಿ ಜನರಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.  

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಬರೆದಿರುವ ಅವರು, ‘ಶಾಂತವಾಗಿರಿ, ಸಂಯಮದ ಇರಿ ಎನ್ನುವುದು ಎಲ್ಲ ಧರ್ಮದವರಿಗೆ ನನ್ನ ಮನವಿ. ಧರ್ಮದ ಹೆಸರಿನಲ್ಲಿ ಯಾವುದೇ ಅಧರ್ಮೀಯ ವರ್ತನೆಯಲ್ಲಿ ತೊಡಗಬೇಡಿ. ಪ್ರತಿಯೊಬ್ಬ ಮಾನವ ಜೀವವೂ ಅಮೂಲ್ಯ, ರಾಜಕೀಯಕ್ಕಾಗಿ ಗಲಭೆಗಳನ್ನು ಪ್ರಚೋದಿಸಬೇಡಿ. ಗಲಭೆಗಳನ್ನು ಪ್ರಚೋದಿಸುವವರು ಸಮಾಜಕ್ಕೆ ಹಾನಿ ಮಾಡುತ್ತಿದ್ದಾರೆ’ ಎಂದಿದ್ದಾರೆ.

ಇದೇ ವೇಳೆ ವಕ್ಫ್‌ ಕಾಯ್ದೆ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟ ಎಂದಿರುವ ಅವರು, ‘ಹಲವರ ಆಕ್ರೋಶಕ್ಕೆ ಕಾರಣವಾಗಿರುವ ಕಾನೂನನ್ನು ನಾವು ರಚಿಸಿಲ್ಲ. ಕೇಂದ್ರ ಸರ್ಕಾರ ಮಾಡಿದೆ. ಆದ್ದರಿಂದ ನಿಮಗೆ ಬೇಕಾದ ಉತ್ತರವನ್ನು ಕೇಂದ್ರ ಸರ್ಕಾರದಿಂದ ಪಡೆಯಬೇಕು. ನಾವು ಈ ವಿಷಯದ ಬಗ್ಗೆ ನಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದೇವೆ. ನಾವು ಈ ಕಾನೂನನ್ನು ಬೆಂಬಲಿಸುವುದಿಲ್ಲ. ಈ ಕಾನೂನನ್ನು ನಮ್ಮ ರಾಜ್ಯದಲ್ಲಿ ಜಾರಿಗೆ ತರಲಾಗುವುದಿಲ್ಲ’ ಎಂದಿದ್ದಾರೆ.

ಜೊತೆಗೆ ಬಂಗಾಳದಲ್ಲಿ ಗಲಭೆಗೆ ವಿರುದ್ಧ ಕಾರಣರಾದವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.

ಕೇಂದ್ರದ ವಿರುದ್ಧ ದೀದಿ ಸಡ್ಡು ಮೊದಲಲ್ಲ

ಕೇಂದ್ರದ ನಿಯಮಗಳಿಗೆ ಮಮತಾ ಬ್ಯಾನರ್ಜಿ ಸಡ್ಡು ಹೊಡೆದಿದ್ದು ಇದು ಮೊದಲೇನಲ್ಲ. ಈ ಹಿಂದೆ ಕೇಂದ್ರ ಸರ್ಕಾರ ಆಯುಷ್ಮಾನ್‌ ಭಾರತ ಯೋಜನೆಯನ್ನು ಜಾರಿಗೆ ತಂದರೂ ಅದನ್ನು ಈವರೆಗೂ ಮಮತಾ ಬಂಗಾಳದಲ್ಲಿ ಜಾರಿ ಮಾಡಿಲ್ಲ. ಇನ್ನು ಕೇಂದ್ರ ಸರ್ಕಾರದ ರಾಷ್ಟ್ರೀಯ ನಾಗರಿಕ ನೋಂದಣಿ (ಎನ್‌ಆರ್‌ಸಿ) ಜಾರಿ ಮಾಡಲು ನಾವು ಅವಕಾಶ ನೀಡಲ್ಲ ಎಂದು ಮಮತಾ ಗುಡುಗಿದ್ದರು.

PREV

Recommended Stories

15 ವರ್ಷ ಬಳಿಕ ಗುಜರಿ ವ್ಯಾಪ್ತಿಗೆಎಲೆಕ್ಟ್ರಿಕ್‌ ವಾಹನಗಳು ಬರಲ್ಲ?
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ