ಪುಣೆ ಅವ್ಯವಸ್ಥೆ ಬಗ್ಗೆ ಪವಾರ್ ಕೆಂಡಾಮಂಡಲ
ಪಿಂಪ್ರಿ ಚಿಂಚ್ವಾಡದಲ್ಲಿ ರಸ್ತೆ, ಚರಂಡಿಗಳಲ್ಲಿ ನೀರುನಿಲ್ಲುವಿಕೆ ಸೇರಿದಂತೆ ಮೂಲಸೌಕರ್ಯಗಳ ಸಮಸ್ಯೆ ಪರಿಶೀಲನೆಗೆ ಬೆಳ್ಳಂಬೆಳಗ್ಗೆ ತೆರಳಿದ್ದ ವೇಳೆ ಕೋಪಗೊಂಡ ಅಜಿತ್, ‘ನಾವು ಎಲ್ಲವನ್ನೂ ಕಳೆದುಕೊಳ್ಳುತ್ತಿದ್ದೇವೆ. ಹಿಂಜವಾಡಿ ಐಟಿ ಪಾರ್ಕ್ ಪುಣೆಯಿಂದಷ್ಟೇ ಏಕೆ, ಮಹಾರಾಷ್ಟ್ರದಿಂದಲೇ ಹೊರಹೋಗಿ, ಬೆಂಗಳೂರು, ಹೈದರಾಬಾದ್‌ನಲ್ಲಿ ನೆಲೆಸುತ್ತಿದೆ. ನಿಮಗ್ಯಾರಿಗೂ ಚಿಂತೆಯೇ ಇಲ್ಲವೇ’ ಎಂದು, ಸರಪಂಚ್ ಗಣೇಶ್ ಜಂಭುಲ್ಕರ್ ಅವರೆದುರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಂಜವಾಡಿಯಲ್ಲಿ 2,800 ಎಕರೆ ವ್ಯಾಪ್ತಿಯಲ್ಲಿ ರಾಜೀವ್ ಗಾಂಧಿ ಟೆಕ್ ಪಾರ್ಕ್ ಇದ್ದು, ಅಲ್ಲಿ 800ಕ್ಕೂ ಅಧಿಕ ಕಂಪನಿಗಳ ಕಚೇರಿಗಳಿವೆ. ಅವುಗಳೆಲ್ಲ ಈಗ ಬೇರೆ ರಾಜ್ಯದ ಮಹಾನಗರಗಳಿಗೆ ಸ್ಥಳಾಂತರಗೊಳ್ಳುತ್ತಿರುವುದು ಅಜಿತ್ ಅಸಮಾಧಾನಕ್ಕೆ ಕಾರಣವಾಗಿದೆ.