ಪಹಲ್ಗಾಂ ಉಗ್ರರ ಹುಡುಕಿ ಹುಡುಕಿ ಹೊಡಿತೀವಿ - ಒಬ್ಬ ಉಗ್ರನನ್ನೂ ಬಿಡಲ್ಲ: ಗೃಹ ಸಚಿವ ಶಾ

ಸಾರಾಂಶ

‘ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಂನಲ್ಲಿ 26 ಪ್ರವಾಸಿಗರ ನರಮೇಧಗೈದ ಎಲ್ಲಾ ಉಗ್ರರನ್ನು ಹುಡುಕಿ ಹುಡುಕಿ ಬೇಟೆಯಾಡುತ್ತೇವೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗುಡುಗಿದ್ದಾರೆ.

ಗುವಾಹಟಿ: ‘ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಂನಲ್ಲಿ 26 ಪ್ರವಾಸಿಗರ ನರಮೇಧಗೈದ ಎಲ್ಲಾ ಉಗ್ರರನ್ನು ಹುಡುಕಿ ಹುಡುಕಿ ಬೇಟೆಯಾಡುತ್ತೇವೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗುಡುಗಿದ್ದಾರೆ. ಏ.23ರಂದು ನಡೆದ ಹತ್ಯಾಕಾಂಡದ ಬಳಿಕ ಇದೇ ಮೊದಲ ಬಾರಿಗೆ ಈ ಕುರಿತು ಬಹಿರಂಗ ಪ್ರತಿಕ್ರಿಯೆ ನೀಡಿರುವ ಶಾ, ದೇಶದ ಜನತೆಗೆ ಈ ಭರವಸೆ ನೀಡಿದ್ದಾರೆ.

ಅಸ್ಸಾಂನಲ್ಲಿ ಗುರುವಾರ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮಾತನಾಡಿದ ಅವರು, ‘ಪಹಲ್ಗಾಂ ಉಗ್ರದಾಳಿಯಲ್ಲಿ ಭಾಗಿಯಾಗಿದ್ದ ಎಲ್ಲಾ ಉಗ್ರರನ್ನು ಹುಡುಕಿ ಹುಡುಕಿ ಬೇಟಿಯಾಡುವುದು ಖಚಿತ. ಆ ಹೇಯ ಕೃತ್ಯಕ್ಕೆ ಅವರೆಲ್ಲರನ್ನೂ ಉತ್ತರದಾಯಿಗಳನ್ನಾಗಿಸಲಾಗುವುದು’ ಎಂದು ಭರವಸೆ ನೀಡಿದರು.

ಜೊತೆಗೆ, ‘ಪ್ರಧಾನಿ ಮೋದಿ ಸರ್ಕಾರ ಉಗ್ರರ ವಿಷಯದಲ್ಲಿ ಶೂನ್ಯ ಸಹಿಷ್ಣುವಾಗಿದೆ. ಉಗ್ರರನ್ನು ಸುಮ್ಮನೆ ಬಿಡೆವು. ಉಗ್ರವಾದ ಸಂಪೂರ್ಣವಾಗಿ ನಿರ್ಮೂಲನೆಯಾಗುವವರೆಗೂ ಸರ್ಕಾರದ ಭಯೋತ್ಪಾದನಾ ವಿರುದ್ಧದ ಹೋರಾಟ ಮುಂದುವರಿಯುತ್ತದೆ’ ಎಂದು ಹೇಳಿದರು.

Share this article