ಇಂದು ಜಿರಳೆ ಪಾರ್ಟಿ ಸ್ಥಾಪಕ ದೀಪ್ಕೆ ಭಾರತಕ್ಕೆ

KannadaprabhaNewsNetwork |  
Published : Jun 06, 2026, 03:00 AM IST
Cockroach

ಸಾರಾಂಶ

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿದ್ದ ಕಾಕ್ರೋಚ್‌ ಜನತಾ ಪಾರ್ಟಿಯ ಸ್ಥಾಪಕ ಅಭಿಜಿತ್ ದೀಪ್ಕೆ ಶನಿವಾರ ಅಮೆರಿಕದಿಂದ ದೆಹಲಿಗೆ ಆಗಮಿಸಲಿದ್ದಾರೆ. ಆ ಬಳಿಕ ಜಂತರ್‌ ಮಂತರ್‌ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.

 ನವದೆಹಲಿ: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿದ್ದ ಕಾಕ್ರೋಚ್‌ ಜನತಾ ಪಾರ್ಟಿಯ (ಸಿಜೆಪಿ) ಸ್ಥಾಪಕ ಅಭಿಜಿತ್ ದೀಪ್ಕೆ ಶನಿವಾರ ಅಮೆರಿಕದಿಂದ ದೆಹಲಿಗೆ ಆಗಮಿಸಲಿದ್ದಾರೆ. ಆ ಬಳಿಕ ಜಂತರ್‌ ಮಂತರ್‌ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.

ಸಿಜೆಪಿ ಸ್ಥಾಪನೆಯ ಬಳಿಕ ದೀಪ್ಕೆ ಭಾರತಕ್ಕೆ ಮೊದಲ ಭೇಟಿ

ಇದು ಸಿಜೆಪಿ ಸ್ಥಾಪನೆಯ ಬಳಿಕ ದೀಪ್ಕೆ ಭಾರತಕ್ಕೆ ನೀಡುತ್ತಿರುವ ಮೊದಲ ಭೇಟಿ. ಅವರು ಸದ್ಯ ಅಮೆರಿಕದ ಬಾಸ್ಟನ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ‘ದೀಪ್ಕೆ ದೆಹಲಿಗೆ ಬಂದ ಬಳಿಕ ಪೊಲೀಸ್‌ ಠಾಣೆಗೆ ತೆರಳಿ ಪ್ರತಿಭಟನೆಗೆ ಅನುಮತಿ ಕೋರಲಾಗುವುದು.  

ಅನುಮತಿ ಸಿಗದಿದ್ದರೂ ನಾವು ಜಂತರ್‌ ಮಂತರ್‌ನಲ್ಲಿ ಶಾಂತಿಯುತ ಪ್ರತಿಭಟನೆ

ಒಂದು ವೇಳೆ ಅನುಮತಿ ಸಿಗದಿದ್ದರೂ ನಾವು ಜಂತರ್‌ ಮಂತರ್‌ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಿಯೇ ತೀರುತ್ತೇವೆ’ ಎಂದು ಸಿಜೆಪಿ ಮುಖ್ಯ ವಕ್ತಾರ ಸೌರವ್‌ ದಾಸ್‌ ಶುಕ್ರವಾರ ತಿಳಿಸಿದ್ದಾರೆ. 

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹೇಳಿಕೆ ಹಾಗೂ ದೇಶದ ಆಡಳಿತ ವ್ಯವಸ್ಥೆ ವಿರುದ್ಧ ಆಕ್ರೋಶ ಹೊರಹಾಕಲು ಸಿಜೆಪಿ ಸ್ಥಾಪಿಸಲಾಗಿದೆ. ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸುವುದು ಪ್ರತಿಭಟನೆಯ ಮುಖ್ಯ ಉದ್ದೇಶ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಆರ್‌ಎಸ್‌ಎಸ್‌ ಮುಖ್ಯಸ್ಥ ಭಾಗ್ವತ್‌ ಸಂಚರಿಸುತ್ತಿದ್ದ ರೈಲಿನ ಮೇಲೆ ಕಲ್ಲೆಸೆತ
ಟಿಎಂಸಿಯಿಂದ ಮಮತಾ ಔಟ್‌?