ಮಕ್ಕಳ ಜತೆ ಟ್ರಾಫಿಕ್ ನಿಯಮ ಉಲ್ಲಂಘನೆಗೆ ದುಪ್ಪಟ್ಟು ದಂಡ!

KannadaprabhaNewsNetwork |  
Published : Jul 21, 2025, 12:00 AM ISTUpdated : Jul 21, 2025, 05:51 AM IST
ಬೈಕ್‌  | Kannada Prabha

ಸಾರಾಂಶ

ಪುಟ್ಟ ಮಕ್ಕಳನ್ನು ವಾಹನದಲ್ಲಿ ಕರೆದೊಯ್ಯುವವರು ಸಂಚಾರ ನಿಯಮ ಉಲ್ಲಂಘಿಸಿ ಅಪಘಾತಕ್ಕೊಳಗಾಗುವುದನ್ನು ತಪ್ಪಿಸುವ ಉದ್ದೇಶದಿಂದ, ಸಂಚಾರ ನಿಯಮಗಳನ್ನು ಉಲ್ಲಂಘಿಸುವ ಅಂಥ ವಾಹನ ಚಾಲಕರಿಗೆ ದುಪ್ಪಟ್ಟು ದಂಡ ವಿಧಿಸುವ ಬಗ್ಗೆ ರಸ್ತೆ ಸಾರಿಗೆ ಸಚಿವಾಲಯ ಚಿಂತನೆ ನಡೆಸಿದೆ.

 ನವದೆಹಲಿ: ಪುಟ್ಟ ಮಕ್ಕಳನ್ನು ವಾಹನದಲ್ಲಿ ಕರೆದೊಯ್ಯುವವರು ಸಂಚಾರ ನಿಯಮ ಉಲ್ಲಂಘಿಸಿ ಅಪಘಾತಕ್ಕೊಳಗಾಗುವುದನ್ನು ತಪ್ಪಿಸುವ ಉದ್ದೇಶದಿಂದ, ಸಂಚಾರ ನಿಯಮಗಳನ್ನು ಉಲ್ಲಂಘಿಸುವ ಅಂಥ ವಾಹನ ಚಾಲಕರಿಗೆ ದುಪ್ಪಟ್ಟು ದಂಡ ವಿಧಿಸುವ ಬಗ್ಗೆ ರಸ್ತೆ ಸಾರಿಗೆ ಸಚಿವಾಲಯ ಚಿಂತನೆ ನಡೆಸಿದೆ. ಇದರ ಜತೆಗೆ ಎಲ್ಲ ಚಾಲಕರಿಗೆ ಸಂಚಾರ ನಿಯಮಗಳ ಅನುಸರಣೆ ಅಥವಾ ಉಲ್ಲಂಘನೆಯ ಆಧಾರದಲ್ಲಿ ಧನಾತ್ಮಕ ಮತ್ತು ಋಣಾತ್ಮಕ ಅಂಕ ಪದ್ಧತಿ ಆರಂಭಿಸಲು ಕೂಡಾ ಉದ್ದೇಶಿಸಲಾಗಿದೆ.

ಈ ಸಂಬಂಧ ಮೋಟಾರ್ ವಾಹನಗಳ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದು, ಅಭಿಪ್ರಾಯ ಸಂಗ್ರಹಕ್ಕಾಗಿ ವಿವಿಧ ಸಚಿವಾಲಯಗಳಿಗೆ ಕಳಿಸಲಾಗಿದೆ ಎಂದು ತಿಳಿದುಬಂದಿದೆ.

ಮಕ್ಕಳನ್ನು ಕರೆದುಕೊಂಡು ವಾಹನ ಚಲಾಯಿಸುವ ಪಾಲಕರು, ಕುಟುಂಬಸ್ಥರು ಹಾಗೂ ಶಾಲಾ ಬಸ್‌ಗಳು ರಸ್ತೆ ನಿಯಮಗಳನ್ನು ಉಲ್ಲಂಘಿಸುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ. ನಿರ್ದಿಷ್ಟ ಸಂಖ್ಯೆಗಿಂತ ಹೆಚ್ಚು ಸಲ ನಿಯಮ ಉಲ್ಲಂಘಿಸಿದವರಿಗೆ ಪರವಾನಗಿ ರದ್ದತಿ, ವಿಮಾ ಮೊತ್ತದಲ್ಲಿ ಕಡಿತದಂಥ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಧನಾತ್ಮಕ ಅಂಕ ಪಡೆದವರಿಗೆ ವಿಮಾ ಪ್ರೀಮಿಯಂ ಕಡಿಮೆ ಮಾಡುವ ಪ್ರಸ್ತಾವ ಮಾಡಲಾಗಿದೆ. ಚಾಲನಾ ಪರವಾನಗಿ ನವೀಕರಣ ಮಾಡುವಾಗಲೂ ಪರೀಕ್ಷೆ ಕಡ್ಡಾಯಗೊಳಿಸುವ ಬಗ್ಗೆಯೂ ಚಿಂತನೆ ನಡೆಯುತ್ತಿದೆ ಎನ್ನಲಾಗಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಮುಸ್ಲಿಮರು ಸೂರ್‍ಯನಮಸ್ಕಾರ ಮಾಡ್ಬೇಕು : ಹೊಸಬಾಳೆ ಕರೆ
ಮರುಭೂಮಿ ಸೌದಿಯಲ್ಲಿ ಹಿಮಪಾತ, ಮಳೆ!