ಬಾಬಾ ಸಿದ್ದಿಕಿ ರೀತಿ ಹತ್ಯೆ : ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಅವರಿಗೆ ಬೆದರಿಕೆ

KannadaprabhaNewsNetwork |  
Published : Nov 04, 2024, 12:27 AM ISTUpdated : Nov 04, 2024, 05:56 AM IST
ಯೋಗಿ | Kannada Prabha

ಸಾರಾಂಶ

‘10 ದಿನಗಳೊಳಗಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದಲ್ಲಿ ಬಾಬಾ ಸಿದ್ದಿಕಿಯ ರೀತಿಯಲ್ಲಿ ಹತ್ಯೆ ಮಾಡಲಾಗುವುದು’ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಅವರಿಗೆ ಬೆದರಿಕೆ ಬಂದಿದೆ.

ಮುಂಬೈ: ‘10 ದಿನಗಳೊಳಗಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದಲ್ಲಿ ಬಾಬಾ ಸಿದ್ದಿಕಿಯ ರೀತಿಯಲ್ಲಿ ಹತ್ಯೆ ಮಾಡಲಾಗುವುದು’ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಅವರಿಗೆ ಬೆದರಿಕೆ ಬಂದಿದೆ. ಇದರ ಬೆನ್ನಲ್ಲೇ ಬೆದರಕೆ ಹಾಕಿದ್ದ ಮಹಿಳೆಯನ್ನು ಮುಂಬೈ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಮಹಿಳೆಯನ್ನು ಥಾಣೆ ಜಿಲ್ಲೆಯ ಸಮೀಪದ ಉಲ್ಲಾಸನಗರ ನಿವಾಸಿ ಫಾತಿಮಾ ಖಾನ್‌ ಎಂದು ಗುರುತಿಸಲಾಗಿದೆ.

‘ಯೋಗಿ ಆದಿತ್ಯನಾಥ್‌ ಮುಂದಿನ 10 ದಿನಗಳ ಒಳಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡದಿದ್ದರೆ ಅವರನ್ನು ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿಯವರನ್ನು ಕೊಂದಂತೆ ಹತ್ಯೆ ಮಾಡಲಾಗುತ್ತದೆ’ ಎಂಬ ಸಂದೇಶವನ್ನು ಅಪರಿಚಿತ ಸಂಖ್ಯೆಯಿಂದ ಮುಂಬೈ ಸಂಚಾರ ಪೊಲೀಸರಿಗೆ ಶನಿವಾರ ಕಳಿಸಲಾಗಿತ್ತು. ತನಿಖೆ ವೇಳೆ ಇದನ್ನು ಕಳಿಸಿದಾಕೆ ಫಾತಿಮಾ ಎಂಬುದು ಪತ್ತೆಯಾಗಿದೆ. ಉಲ್ಲಾಸನಗರದ ಪೊಲೀಸರು ಹಾಗೂ ಮುಂಬೈನ ಭಯೋತ್ಪಾದನಾ ನಿಗ್ರಹ ದಳ ಒಟ್ಟಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಆಕೆಯನ್ನು ಬಂಧಿಸಲಾಗಿದೆ.

ಮಾನಸಿಕ ಅಸ್ವಸ್ಥೆ- ಪೊಲೀಸ್‌:

ಫಾತಿಮಾ ಮಾಹಿತಿ ತಂತ್ರಜ್ಞಾನದಲ್ಲಿ ಬಿಎಸ್‌ಸಿ ಪದವೀಧರೆಯಾಗಿದ್ದು, ಮಾನಸಿಕವಾಗಿ ಅಸ್ವಸ್ಥಳಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಪ್ರಚಾರಕ್ಕಾಗಿ ಯೋಗಿ ನ.20ರಂದು ರಾಜ್ಯಕ್ಕೆ ಆಗಮಿಸಲಿದ್ದು, ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅವರ ಭದ್ರತೆಗೆ ಹೆಚ್ಚಿನ ನಿಗಾ ವಹಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ರಶ್ಮಿಕಾ-ವಿಜಯ್‌ ಮದುವೆ ಪ್ರಸಾರಕ್ಕೆ ₹60 ಕೋಟಿ ಆಫರ್‌!
ಬ್ರಹ್ಮಪುತ್ರಾ ನದಿ ಮೇಲೆ ಅತ್ಯಾಧುನಿಕ 6 ಪಥದ ಸೇತುವೆ