ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣ, ನಿರುದ್ಯೋಗ ಸಮಸ್ಯೆ, ಬೆಲೆ ಏರಿಕೆ ಕಂಡಿಸಿ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ನೇತೃತ್ವದಲ್ಲಿ ಬುಧವಾರ ಬಿಹಾರದ ರಾಜಧಾನಿ ಪಟನಾದಲ್ಲಿನ ವಿಧಾನಸಭಾ ಕಟ್ಟಡದ ಎದುರು ಪ್ರತಿಭಟನೆ ನಡೆಸಲಾಯಿತು
ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣ, ನಿರುದ್ಯೋಗ ಸಮಸ್ಯೆ, ಬೆಲೆ ಏರಿಕೆ ಕಂಡಿಸಿ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ನೇತೃತ್ವದಲ್ಲಿ ಬುಧವಾರ ಬಿಹಾರದ ರಾಜಧಾನಿ ಪಟನಾದಲ್ಲಿನ ವಿಧಾನಸಭಾ ಕಟ್ಟಡದ ಎದುರು ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಲಾಠಿ ಪ್ರಹಾರ ನಡೆಸಿದ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದರು.
ಪಠಾಣ್‌ಕೋಟ್‌ನಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಚಲನವಲನ: ಸೇನೆಯಿಂದ ಶೋಧಪಠಾಣ್‌ಕೋಟ್: ಭಾರತೀಯ ವಾಯುನೆಲೆ ಇರುವ ಪಂಜಾಬ್‌ನ ಪಠಾಣ್‌ಕೋಟ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಮಹಿಳೆಯೊಬ್ಬರು ಏಳು ಅನುಮಾನಾಸ್ಪದ ವ್ಯಕ್ತಿಗಳನ್ನು ಕಂಡ ಬೆನ್ನಲ್ಲೇ ಪಂಜಾಬ್ ಪೊಲೀಸರು ಹಾಗೂ ಸೇನಾ ಸಿಬ್ಬಂದಿಗಳು ಬುಧವಾರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಫಂಗ್ತೋಲಿಯಲ್ಲಿರುವ ತನ್ನ ಮನೆಗೆ ಬಂದ ಏಳು ಜನ ಅಪರಿಚಿತರು ನೀರು ಕೇಳಿದರು ಎಂದು ಮಹಿಳೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅವರಲ್ಲಿ ಒಬ್ಬನ ಚಿತ್ರವನ್ನು ಬಿಡುಗಡೆ ಮಾಡಲಾಗಿದೆ ಹಾಗೂ ಸೇನೆಯೊಂದಿಗೆ ಸೇರಿ ಅವರಿಗಾಗಿ ಶೋಧ ನಡೆಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಸುಹೇಲ್ ಖಾಸಿಮ್ ಮಿರ್ ಹೇಳಿದ್ದಾರೆ.ಇಲ್ಲಿನ ವಾಯುನೆಲೆಯ ಮೇಲೆ 2016ರಲ್ಲಿ ಉಗ್ರ ದಾಳಿ ನಡೆದಿತ್ತು.
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.