ಹರಾರೆ: ಭೀಕರ ಬರಗಾಲ ಎದುರಿಸುತ್ತಿರುವ ಜಿಂಬಾಬ್ವೆಯಲ್ಲಿ ಜನರಿಗೆ ಆಹಾರ ಒದಗಿಸುವ ಸಲುವಾಗಿ ಆನೆಗಳನ್ನು ಕೊಲ್ಲಲು ಅಲ್ಲಿನ ಅಧಿಕಾರಿಗಳು ನಿರ್ಧರಿಸಿದ್ದಾರೆ. ‘ದೇಶದ ಅರ್ಧ ಜನಸಂಖ್ಯೆ ಹಸಿವಿನಿಂದ ಬಳಲುತ್ತಿದ್ದು, ಅವರ ಹಸಿವನ್ನು ನೀಗಿಸುವ ಉದ್ದೇಶದಿಂದ 200 ಆನೆಗಳನ್ನು ಕೊಲ್ಲಲು ನಿರ್ಧರಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಜೊತೆಗೆ 45,000 ಆನೆಗಳಿಗೆ ಆಶ್ರಯ ಒದಗಿಸಬಲ್ಲ ನಮ್ಮ ದೇಶದಲ್ಲಿ ಪಸ್ತುತ 84,000 ಆನೆಗಳಿದ್ದು, ಆನೆಗಳ ಸಂಖ್ಯೆಯಲ್ಲಿ ಜಿಂಬಾಬ್ವೆ ವಿಶ್ವದಲ್ಲೇ ಎರಡನೇ ಸ್ಥಾನದಲ್ಲಿದೆ ಎನ್ನುವ ಮೂಲಕ ಆನೆ ಹತ್ಯೆ ಸಮರ್ಥಿಸಿಕೊಂಡಿದ್ದಾರೆ.
ಇತ್ತೀಚೆಗೆ ನಮೀಬಿಯಾ ಕೂಡ ಜನರಿಗೆ ಆಹಾರ ಭದ್ರತೆ ಒದಗಿಸುಲು ಆನೆ ಸೇರಿದಂತೆ ವಿವಿಧ ಅರಣ್ಯಜೀವಿಗಳನ್ನು ಕೊಲ್ಲಲು ನಿರ್ಧರಿಸಿತ್ತು. ಇದಕ್ಕೆ ಪ್ರಾಣಿ ಹಕ್ಕುಗಳ ಕಾರ್ಯಕರ್ತರು ಮತ್ತು ಸಂರಕ್ಷಣಾವಾದಿಗಳಿಂದ ಭಾರೀ ಟೀಕೆ ಕೇಳಿಬಂದಿತ್ತು.