ಕ್ರೀಡಾಂಗಣ ನಿರ್ಮಾಣಕ್ಕೆ ₹ ೨ ಕೋಟಿ ಬಿಡುಗಡೆ- ಶಾಸಕ ಪಾಟೀಲ

KannadaprabhaNewsNetwork |  
Published : Aug 29, 2025, 01:00 AM IST
ಗಜೇಂದ್ರಗಡ ಎಸ್.ಎಂ.ಭೂಮರಡ್ಡಿ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಶಾಸಕ ಜಿ.ಎಸ್.ಪಾಟೀಲ ಉದ್ಘಾಟಿಸಿದರು. | Kannada Prabha

ಸಾರಾಂಶ

ಕ್ರೀಡಾಪಟುಗಳಿಗೆ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರ ₹ ೨ ಕೋಟಿ ಮಂಜೂರು ಮಾಡಿದ್ದು ಮುಂದಿನ ದಿನಗಳಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ರಾಜ್ಯ ಖನಿಜ ನಿಗಮದ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ಗಜೇಂದ್ರಗಡ:ಕ್ರೀಡಾಪಟುಗಳಿಗೆ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರ ₹ ೨ ಕೋಟಿ ಮಂಜೂರು ಮಾಡಿದ್ದು ಮುಂದಿನ ದಿನಗಳಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ರಾಜ್ಯ ಖನಿಜ ನಿಗಮದ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಕೆ.ಎಸ್.ಎಸ್ ಪದವಿ ಪೂರ್ವ ಕಾಲೇಜು ವತಿಯಿಂದ ಸ್ಥಳೀಯ ಎಸ್.ಎಂ.ಭೂಮರಡ್ಡಿ ಕಾಲೇಜು ಆವರಣದಲ್ಲಿ ೨೦೨೫-೨೬ನೇ ಸಾಲಿನ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು.ಕ್ರೀಡೆಗಳು ವಿದ್ಯಾರ್ಥಿಗಳನ್ನು ಒಗ್ಗೂಡಿಸುವ ಆಟವಾಗಿದ್ದು, ಕ್ರೀಡಾಪಟುಗಳ ಉದ್ದೇಶವೇ ತಂಡದ ಗೆಲುವು ಆಗಿರುತ್ತದೆ. ಹೀಗಾಗಿ ಎಲ್ಲರೂ ಒಂದು ಎನ್ನುವ ಮನೋಭಾವನೆಯನ್ನು ಬೆಸೆಯುವ ಕ್ರೀಡೆಗಳಲ್ಲಿ ಯುವ ಸಮೂಹ ಭಾಗವಹಿಸುವುದರ ಜತೆಗೆ ಕ್ರೀಡೆಯ ಉದ್ದೇಶವನ್ನು ಮನದಟ್ಟು ಮಾಡಿಕೊಳ್ಳಬೇಕು. ಕ್ರೀಡೆ ಎಂದ ಬಳಿಕ ಗೆಲುವು ಹಾಗೂ ಸೋಲು ಸಹಜ. ಹೀಗಾಗಿ ನಿರ್ಣಾಯಕರು ನೀಡುವ ತೀರ್ಪನ್ನು ಒಪ್ಪಿಕೊಂಡು ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು ಎಂದರು.ಕೆಎಸ್‌ಎಸ್ ಸಮಿತಿ ಅಧ್ಯಕ್ಷ ರವೀಂದ್ರನಾಥ ದಂಡಿನ ಮಾತನಾಡಿ, ಕ್ರೀಡೆಗಳು ಶೈಕ್ಷಣಿಕ ಕ್ಷೇತ್ರದ ಭಾಗವಾಗಿದ್ದು, ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈಯುವ ಮೂಲಕ ಕಾಲೇಜಿಗೆ ಕೀರ್ತಿಯನ್ನು ತನ್ನಿ ಎಂದರು.ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಜಿಲ್ಲಾ ಉಪ ನಿದೇರ್ಶಕ ಸಿದ್ದಲಿಂಗ ಬಂಡು ಮಸಾನಾಯಕ ಮಾತನಾಡಿದರು.ಪುರಸಭೆ ಅಧ್ಯಕ್ಷ ಸುಭಾಸ ಮ್ಯಾಗೇರಿ, ಸ್ಥಾಯಿ ಸಮಿತಿ ಚೇರ್ಮನ್ ಮುದಿಯಪ್ಪ ಮುಧೋಳ, ಮುಖಂಡರಾದ ಶಿವರಾಜ ಘೋರ್ಪಡೆ, ಸಿದ್ದಣ್ಣ ಬಂಡಿ, ರಫೀಕ್ ತೋರಗಲ್, ಮಾರುತಿ ಕಲ್ಲೊಡ್ಡರ, ರಾಜು ಸಾಂಗ್ಲಿಕರ, ಶರಣಪ್ಪ ಚಳಗೇರಿ, ಶ್ರೀಧರ ಬಿದರಳ್ಳಿ, ಅರಿಹಂತ ಬಾಗಮಾರ, ಯಲ್ಲಪ್ಪ ಬಂಕದ, ತಾರಾಸಿಂಗ್ ರಾಠೋಡ, ಪ್ರಾಚಾರ್ಯರಾದ ಎಚ್.ಎನ್. ಗೌಡರ, ಜಿ.ಬಿ. ಗುಡಿಮನಿ, ರಮೇಶ ಮರಾಠಿ ಹಾಗೂ ಶರಣಪ್ಪ ರೇವಡಿ, ಪ್ರಭು ಚವಡಿ, ಶರಣು ಪೂಜಾರ, ಬಸು ಚನ್ನಿ, ಯೂಸುಫ್ ಇಟಗಿ, ಶ್ರೀಧರ ಬಿದರಳ್ಳಿ, ಮುತ್ತಣ್ಣ ಮ್ಯಾಗೇರಿ, ಸಿದ್ದು ಗೊಂಗಡಶೆಟ್ಟಿಮಠ ಸೇರಿ ಇತರರು ಇದ್ದರು.

PREV

Recommended Stories

ನೀಲಿ ಮೊಟ್ಟೆ ಇಟ್ಟ ಚನ್ನಗಿರಿಯ ನಾಟಿ ಕೋಳಿ: ಸ್ಥಳೀಯರಲ್ಲಿ ತೀವ್ರ ಕುತೂಹಲ
ಸಿಗಂದೂರಿನಲ್ಲಿ ವಾಟರ್ ಏರೋಡ್ರೋಮ್: ವಿಮಾನ ಟೇಕಾಫ್‌, ಲ್ಯಾಂಡಿಂಗ್‌! ಪ್ರವಾಸೋದ್ಯಮಕ್ಕೆ ಹೊಸ ಹೆಜ್ಜೆ?