ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿ
ಹೋಬಳಿಯ ಹೊನ್ನಮಾರನಹಳ್ಳಿ ಬಳಿ ಇರುವ ಕೋಟಿ ಮನೆ ಇಂಟರ್ನ್ಯಾಷನಲ್ ಸ್ಕೂಲ್ ವತಿಯಿಂದ ತೃತೀಯ ವರ್ಷದ ಕೋಟೆ ಮನೆ ಕಲೋತ್ಸವ 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಭಾಗದ ಮಕ್ಕಳಿಗೆ ಕೋಟೆಮನೆ ಇಂಟರ್‌ನ್ಯಾಷನಲ್ ಸ್ಕೂಲ್ ವತಿಯಿಂದ ಗುಣಮಟ್ಟದ ಆಂಗ್ಲ ಮಾಧ್ಯಮದ ಶಿಕ್ಷಣವನ್ನು ರಿಯಾಯಿತಿ ದರದಲ್ಲಿ ಕೊಡುತ್ತಿರುವುದಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿಯವರು ನಾಯಕತ್ವದಲ್ಲಿ ಭಾರತ ವಿಶ್ವಮಟ್ಟದಲ್ಲಿ ಉತ್ತಮ ಹೆಸರು ಮಾಡಿದೆ 2047ನೇ ಇಸವಿಗೆ ಭಾರತ ಅಭಿವೃದ್ಧಿ ಹೊಂದಿದ ದೇಶಗಳ ಪಟ್ಟಿಯಲ್ಲಿ ಸೇರ್ಪಡೆಗೊಳ್ಳಲಿದೆ ಆಗ ಭಾರತದ ಆರ್ಥಿಕ ಪ್ರಗತಿ ವಿಶ್ವದ ಗಮನ ಸೆಳೆಯಲಿದೆ ಎಂದರು.ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಕೂಡ ಕಲಿಸಬೇಕು. ಆಗಮಾತ್ರ ಅವರು ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ. ಈ ಬಗ್ಗೆ ಪ್ರತಿಯೊಬ್ಬ ಪೋಷಕರು ಚಿಂತಿಸುವ ಅಗತ್ಯವಿದೆ ಎಂದು ಸಲಹೆ ನೀಡಿದರು.
ಶಾಸಕ ಸಿ.ಎನ್. ಬಾಲಕೃಷ್ಣ ಮಾತನಾಡಿ, ಬೆಂಗಳೂರು ಗ್ರಾಮಾಂತರ ಸಂಸದರಾಗಿರುವ ಡಾ. ಮಂಜುನಾಥ್ ಅವರು ಕೇಂದ್ರ ಸರ್ಕಾರದ ಸಿಎಸ್‌ಆರ್ ಫಂಡ್‌ನಿಂದ ತಾಲೂಕಿನ ಸರ್ಕಾರಿ ಶಾಲೆಗಳ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಕೊಡಿಸುವಂತೆ ಮನವಿ ಮಾಡಿದರು. ರಾಜ್ಯವಲ್ಲದೆ ಬೇರೆ ರಾಜ್ಯಗಳ ಬಡವರಿಗೂ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಕಡಿಮೆ ದರದಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆ ಕೊಡಿಸಲು ಡಾ. ಸಿ. ಎನ್. ಮಂಜುನಾಥ್ ಅವರ ಪರಿಶ್ರಮವೇ ಮೂಲ ಕಾರಣವಾಗಿದೆ. ಕೇಂದ್ರ ಸರ್ಕಾರದ ಕ್ಯಾಬಿನೆಟ್‌ನಲ್ಲಿ ತಾಲೂಕಿನ ಮಗನಾದ ಡಾ.ಸಿಎನ್ ಮಂಜುನಾಥ್ ರವರಿಗೆ ಕೇಂದ್ರ ಸಚಿವ ಸ್ಥಾನ ಮೋದಿಯವರ ನೇತೃತ್ವದಲ್ಲಿ ಸಿಗಲಿದೆ ಎಂಬ ಅಚಲವಾದ ನಂಬಿಕೆ ರಾಜ್ಯದ ಜನರಿಗಿದ್ದು, ಅವರು ಕೇಂದ್ರ ಆರೋಗ್ಯ ಸಚಿವರಾದರೆ ಭಾರತದ ಆರೋಗ್ಯ ಕ್ಷೇತ್ರದಲ್ಲೇ ಹೆಚ್ಚು ಬದಲಾವಣೆ ತರಲಿದ್ದಾರೆ ಎಂದರು.
ಕೋಟೆಮನೆ ಇಂಟರ್‌ನ್ಯಾಷನಲ್ ಸ್ಕೂಲ್ ಕಲೋತ್ಸವ ಅಂಗವಾಗಿ ನಡೆದ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ವಿಜೇತಗೊಂಡ ಮಕ್ಕಳಿಗೆ ಹಾಗೂ ಉತ್ತಮ ವಿದ್ಯಾರ್ಥಿ ಪ್ರಶಸ್ತಿಗೆ ಆಯ್ಕೆಗೊಂಡ ಮಕ್ಕಳಿಗೆ ಸಂಸದ ಡಾ. ಸಿ.ಎನ್ ಮಂಜುನಾಥ್ ಹಾಗೂ ಶಾಸಕ ಬಾಲಕೃಷ್ಣ ರವರು ಬಹುಮಾನ ವಿತರಣೆ ಮಾಡಿದರು.
ಹೋಬಳಿ ಕೇಂದ್ರದಲ್ಲಿ ಅದ್ಧೂರಿ ಸ್ವಾಗತ:
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ನಿರ್ದೇಶಕ ರಿಯಲ್ ಪುಟ್ಟಸ್ವಾಮಿಗೌಡ, ಕೋಟೆಮನೆ ಇಂಟರ್‌ನ್ಯಾಷನಲ್ ಸ್ಕೂಲ್ ಅಧ್ಯಕ್ಷ ಗಂಗಾಧರೇಗೌಡ, ಕಾರ್ಯದರ್ಶಿ ಎಚ್. ಜೆ. ಮಧು ಕುಮಾರ್, ಶಾಲಾ ಮುಖ್ಯ ಶಿಕ್ಷಕಿ ಡಿ ಪವಿತ್ರ ಮಧುಕುಮಾರ್, ಬಿಆರ್‌ಸಿ ಅನಿಲ್ ಕುಮಾರ್, ಸಿಆರ್‌ಪಿ ಸಂಘದ ಅಧ್ಯಕ್ಷ ಎಚ್ ಟಿ ಮಂಜೇಗೌಡ, ಬೆಂಗಳೂರು ರಾಜಾಜಿನಗರ ಎಸ್ ಐ ಆಸ್ಪತ್ರೆ ಆಡಳಿತ ಅಧಿಕಾರಿ ಡಾ. ನಾಗೇಶ್, ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಜೆ.ಸೋಮನಾಥ್, ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ದೊರೆಸ್ವಾಮಿ, ಸೇರಿದಂತೆ ಶಾಲಾ ಆಡಳಿತ ಮಂಡಳಿ ಶಿಕ್ಷಕ ವೃಂದ ಹಾಗೂ ಸುತ್ತಮುತ್ತಲ ಎಲ್ಲಾ ಗ್ರಾಮಗಳ ಮಕ್ಕಳ ಪೋಷಕರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಹಾಜರಿದ್ದರು.