ಬ್ರಹ್ಮಾವರ: ಇಲ್ಲಿನ ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ ಸಂಸ್ಥೆ (ರುಡ್ ಸೆಟ್) ಆಶ್ರಯದಲ್ಲಿ ಒಂದು ತಿಂಗಳ ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ತರಬೇತಿ ಆರಂಭವಾಗಿದೆ.
ಬ್ರಹ್ಮಾವರ: ಇಲ್ಲಿನ ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ ಸಂಸ್ಥೆ (ರುಡ್ ಸೆಟ್) ಆಶ್ರಯದಲ್ಲಿ ಒಂದು ತಿಂಗಳ ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ತರಬೇತಿ ಆರಂಭವಾಗಿದೆ.
ತರಬೇತಿಯನ್ನು ಉದ್ಘಾಟಿಸಿದ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ಎಂ. ಬಾಬು ಅವರು, ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ತರಬೇತಿಯು ಬಹಳ ಬೇಡಿಕೆ ಇರುವ ಕ್ಷೇತ್ರವಾಗಿದ್ದು, ಸ್ವದ್ಯೋಗಕ್ಕೆ ವಿಫುಲ ಅವಕಾಶಗಳಿವೆ ಎಂದರು. ಜೀವನದಲ್ಲಿ ಯಶಸ್ಸು ಕಾಣಬೇಕಾದರೆ ಯಾವುದಾದರೂ ಒಂದು ಕ್ಷೇತ್ರದಲ್ಲಿ ಕೌಶಲ್ಯವನ್ನು ಕಲಿತು, ಪಕ್ವತೆ ಪಡೆದುಕೊಳ್ಳುವುದು ಬಹಳ ಮುಖ್ಯ. ನಾವು ಅರಸಿಕೊಂಡು ಹೋಗುವ ಉದ್ಯೋಗ ಕೈಗೆ ಸಿಗದಿದ್ದರೂ ನಮ್ಮಲ್ಲಿರುವ ಕೌಶಲ್ಯದಿಂದ ಬದುಕು ಕಟ್ಟಿಕೊಳ್ಳಬಹುದು. ಈ ನಿಟ್ಟಿನಲ್ಲಿ ಆಸಕ್ತಿಯಿಂದ ಈ ತರಬೇತಿಯನ್ನು ಉತ್ತಮ ರೀತಿಯಲ್ಲಿ ಪಡೆದು ಯಶಸ್ವಿ ಉದ್ಯಮಿಗಳಾಗಿ ಎಂದು ಹಾರೈಸಿದರು.
ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ರುಡ್ ಸೆಟ್ ಸಂಸ್ಥೆಯ ನಿರ್ದೇಶಕ ಡಾ. ಬೊಮ್ಮಯ್ಯ ಎಂ., ಶಿಬಿರಾರ್ಥಿಗಳನ್ನುದ್ದೇಶಿಸಿ, ಕಲಿತ ವಿದ್ಯೆ ಎಂದಿಗೂ ನಿಮ್ಮ ಕೈ ಬಿಡುವುದಿಲ್ಲ, ಶ್ರದ್ಧೆಯಿಂದ ಈ ತರಬೇತಿಯನ್ನು ಪಡೆದು ಸ್ಪದ್ಯೋಗಿಗಳಾಗಿ ಅರ್ಥಿಕ ಪ್ರಗತಿ ಸಾಧಿಸಿ ಎಂದರು.
ಕಾರ್ಯಕ್ರಮವನ್ನು ಸಂಸ್ಥೆಯ ಉಪನ್ಯಾಸಕಿ ಚೈತ್ರ ಕೆ. ನಿರೂಪಿಸಿದರು. ಹಿರಿಯ ಸಹಾಯಕ ಉಪನ್ಯಾಸಕ ಸಂತೋಷ್ ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.