ಕನ್ನಡಪ್ರಭ ವಾರ್ತೆ ಗೋಕಾಕ
ಭಾವನೆ ಶುದ್ಧವಾಗಿದ್ದರೆ ಭಾಗ್ಯಕ್ಕೆ ಕೊರತೆ ಇರುವುದಿಲ್ಲ. ವಿದ್ಯಾರ್ಥಿಗಳು ಶ್ರದ್ಧೆ, ಲವಲವಿಕೆಯಿಂದ ನಿರಂತರ ಅಧ್ಯಯನಶೀಲರಾಗಿ ತಮ್ಮ ಜ್ಞಾನಮಟ್ಟ ಹೆಚ್ಚಿಸಿಕೊಂಡು ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಿ. ಇಂದು ಕಾನೂನು ಶಿಕ್ಷಣಕ್ಕೆ ಹೆಚ್ಚಿನ ಮಹತ್ವವಿದೆ. ಈ ಶಿಕ್ಷಣ ಪಡೆದವರು ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸೌಲಭ್ಯಗಳ ಹಾಗೂ ಅವಕಾಶಗಳ ಸದುಪಯೋಗದಿಂದ ಉತ್ತಮ ವಕೀಲರಾಗಿ ತಮ್ಮ ಬದುಕನ್ನು ರೂಪಿಸಿಕೊಳ್ಳಿ ಎಂದು ಸಲಹೆ ನೀಡಿದರು. ಶಿಕ್ಷಣವೇ ಶಕ್ತಿ ಎಂದು ನಂಬಿ ಜಾರಕಿಹೊಳಿ ಕುಟುಂಬದವರು ಪ್ರಾರಂಭಿಸಿದ ಈ ಮಹಾವಿದ್ಯಾಲಯದಲ್ಲಿ ಕಲಿತವರು ನ್ಯಾಯಾಂಗ ವ್ಯವಸ್ಥೆಯಲ್ಲಿ ಉನ್ನತ ಸ್ಥಾನ ಅಲಂಕರಿಸಿದ್ದಾರೆ. ವಿದ್ಯಾರ್ಥಿಗಳ ಉನ್ನತ ಕನಸುಗಳನ್ನು ನನಸಾಗಿಸಿ ಸಮಾಜದಲ್ಲಿ ಉತ್ತಮ ನಾಗರಿಕರನ್ನಾಗಿ ಮಾಡಲು ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ಮಾದರಿಯಾಗಿ ಕಾರ್ಯನಿರ್ವಹಿಸುತ್ತದೆ. ನ್ಯಾಯಾಂಗದಲ್ಲಿ ಸೇವೆ ಸಲ್ಲಿಸುವ ನನ್ನ ಕನಸು ಈ ಮಹಾವಿದ್ಯಾಲಯದಲ್ಲಿ ಪ್ರಾಚಾರ್ಯರಾಗಿ ಸಲ್ಲಿಸಿದ ಸೇವೆ ಅನುಭವದಿಂದ ನನಸಾಗಿದೆ. ನೀವು ಈ ಸಂಸ್ಥೆಯ ಸಹಕಾರದಿಂದ ಉನ್ನತ ವ್ಯಕ್ತಿಗಳಾಗಿ ಎಂದು ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸನತ್ ಜಾರಕಿಹೊಳಿ ವಹಿಸಿದ್ದರು. ಆಡಳಿತಾಧಿಕಾರಿ ಬಿ.ಕೆ.ಕುಲಕರ್ಣಿ, ಪ್ರಾಚಾರ್ಯ ಜಿ.ಆರ್. ನಿಡೋಣಿ ವೇದಿಕೆಯಲ್ಲಿ ಇದ್ದರು.