ಹುಕ್ಕೇರಿ ತಾಪಂ ಇಒ ಆಗಿ ಮಲ್ಲಾಡದ ಅಧಿಕಾರ ಸ್ವೀಕಾರ

KannadaprabhaNewsNetwork |  
Published : Feb 18, 2024, 01:37 AM IST
ಫೋಟೊ ಶೀರ್ಷಿಕೆ : 16ಎಚ್‌ಯುಕೆ-1ಹುಕ್ಕೇರಿ ತಾಲೂಕು ಪಂಚಾಯಿತಿಯ ನೂತನ ಇಒ ಟಿ.ಆರ್.ಮಲ್ಲಾಡದ ಅವರನ್ನು ಸಿಬ್ಬಂದಿಗಳು ಹೂಗುಚ್ಚ ನೀಡಿ ಬರಮಾಡಿಕೊಂಡರು. | Kannada Prabha

ಸಾರಾಂಶ

ತಾಲೂಕಿನಲ್ಲಿ ಬೇಸಿಗೆ ಹಾಗೂ ಬರಗಾಲ ದಿನಗಳನ್ನು ಪರಿಣಾಮಕಾರಿಯಾಗಿ ಎದುರಿಸಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲಾ ಯೋಜನೆಗಳನ್ನು ಇತರೆ ಇಲಾಖೆಗಳ ಸಹಕಾರದೊಂದಿಗೆ ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುವುದು ಎಂದರು.

ಕನ್ನಡಪ್ರಭ ವಾರ್ತೆ ಹುಕ್ಕೇರಿ

ತಾ.ಪಂ ನೂತನ ಕಾರ್ಯನಿರ್ವಾಹಕ ಅಧಿಕಾರಿ(ಇಒ)ಯಾಗಿ ಟಿ.ಆರ್.ಮಲ್ಲಾಡದ ಅವರು ಶುಕ್ರವಾರ ತಾಪಂ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು.

ಈ ವೇಳೆ ಮಾತನಾಡಿದ ಅವರು, ತಾಲೂಕಿನಲ್ಲಿ ಬೇಸಿಗೆ ಹಾಗೂ ಬರಗಾಲ ದಿನಗಳನ್ನು ಪರಿಣಾಮಕಾರಿಯಾಗಿ ಎದುರಿಸಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲಾ ಯೋಜನೆಗಳನ್ನು ಇತರೆ ಇಲಾಖೆಗಳ ಸಹಕಾರದೊಂದಿಗೆ ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುವುದು ಎಂದರು. ಲೋಕಸಭೆ ಚುನಾವಣೆ ಪ್ರಯುಕ್ತ ಇಲ್ಲಿ ಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಪ್ರವೀಣ ಕಟ್ಟಿ ಅವರು ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಪಂಗೆ ವರ್ಗಾವಣೆಯಾದ ಪ್ರಯುಕ್ತ ತೆರವಾದ ಈ ಹುದ್ದೆಗೆ ಮಲ್ಲಾಡದ ಅವರನ್ನು ಸರ್ಕಾರ ನಿಯೋಜಿಸಿದೆ.

ಯೋಜನಾಧಿಕಾರಿ ಪ್ರಶಾಂತ ಮುನ್ನೋಳಿ, ಪಂಚಾಯತ್‌ರಾಜ್ ಸಹಾಯಕ ನಿರ್ದೇಶಕ ರಾಜು ಢಾಂಗೆ, ಉದ್ಯೋಗ ಖಾತರಿ ಸಹಾಯಕ ನಿರ್ದೇಶಕ ಪಿ.ಲಕ್ಷ್ಮೀನಾರಾಯಣ, ಪ್ರಭಾರಿ ವ್ಯವಸ್ಥಾಪಕ ಅವಿನಾಶ ಹೊಳೆಪ್ಪಗೋಳ, ಸಿಬ್ಬಂದಿ ಶಂಕರ ಕಾಂಬಳೆ, ಎನ್.ಎಸ್.ಕುಲಕರ್ಣಿ, ಆರ್‌.ಎನ್.ವಂಜಿರೆ, ನಾಗಲಿಂಗ ಮಾಳಗೆ, ಆಶಾರಾಣಿ ಪಾಟೀಲ, ಎಸ್.ಎಸ್.ದುರ್ಗಾಯಿ, ಅರ್ಷದ ನೇರ್ಲಿ, ಶಂಕರ ಶಿರಗುಪ್ಪಿ, ಮಹಾಂತೇಶ ಬಾದವಾನಮಠ, ಶೇಖರ ಢಂಗೆ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್‌ ಗೆಲ್ಲುತ್ತೆ: ಸುರ್ಜೇವಾಲಾ ವಿಶ್ವಾಸ
ದಾವಣಗೆರೆ ಟಿಕೆಟ್‌ ಘೋಷಣೆ ಮುನ್ನವೇ ಕೈ ನಾಮಪತ್ರ