ಬಿಎಸ್‌ವೈ ಅಭಿಮಾನೋತ್ಸವಕ್ಕೆ ಹೊರಟ ಕಾರ್ಯಕರ್ತರು

KannadaprabhaNewsNetwork |  
Published : May 10, 2026, 01:30 AM IST
9ಎಚ್ಎಸ್ಎನ್9 :  | Kannada Prabha

ಸಾರಾಂಶ

ಪಕ್ಷಾತೀತ ಹಾಗೂ ಜಾತ್ಯತೀತವಾಗಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಮಠಾಧೀಶರು, ಶಾಸಕರು, ಸಂಸದರು ಹಾಗೂ ಪಕ್ಷದ ಮುಖಂಡರು ಭಾಗವಹಿಸುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದರು. ಕಾರ್ಯಕ್ರಮದ ಉಸ್ತುವಾರಿಯನ್ನು ಬೇಲೂರು ಶಾಸಕ ಹೆಚ್ ಕೆ ಸುರೇಶ್ ಅವರು ಈಗಾಗಲೇ ವಹಿಸಿಕೊಂಡಿದ್ದು, ಈಗಾಗಲೇ ಚಿತ್ರದುರ್ಗಕ್ಕೆ ತೆರಳಿದ್ದಾರೆ. ಎಲ್ಲಾ ಕಾರ್ಯಕರ್ತರು ಹಾಗೂ ಮುಖಂಡರು ಅಭಿಮಾನೋತ್ಸವವನ್ನು ಯಶಸ್ವಿಗೊಳಿಸಲು ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಬೇಲೂರು

ಮಾಜಿ ಮುಖ್ಯಮಂತ್ರಿ ಹಾಗೂ ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ಸುದೀರ್ಘ ರಾಜಕೀಯ ಸೇವೆಯನ್ನು ಗೌರವಿಸಿ ಚಿತ್ರದುರ್ಗದಲ್ಲಿ ಹಮ್ಮಿಕೊಳ್ಳಲಾಗಿರುವ ‘ಅಭಿಮಾನೋತ್ಸವ’ ಕಾರ್ಯಕ್ರಮಕ್ಕೆ ವಿಧಾನಸಭಾ ಕ್ಷೇತ್ರದಿಂದ ಭಾರೀ ಪ್ರಮಾಣದಲ್ಲಿ ಬಿಜೆಪಿ ಕಾರ್ಯಕರ್ತರು ಕಾರ್ಯಕ್ರಮಕ್ಕೆ ತೆರಳಿದರು.ಈ ವೇಳೆ ಬಿಜೆಪಿ ತಾಲೂಕು ಅಧ್ಯಕ್ಷ ಸಂಜುಕೌರಿ ಮಾತನಾಡಿ, ಬೇಲೂರಿನಿಂದ 60ಕ್ಕೂ ಹೆಚ್ಚು ಬಸ್ಸುಗಳು ಹಾಗೂ ಅನೇಕ ಖಾಸಗಿ ವಾಹನಗಳಲ್ಲಿ ಸುಮಾರು ಸಾವಿರಾರು ಕಾರ್ಯಕರ್ತರು ಮತ್ತು ಅಭಿಮಾನಿಗಳು ಸ್ವಯಂಪ್ರೇರಿತರಾಗಿ ಚಿತ್ರದುರ್ಗದತ್ತ ಪ್ರಯಾಣ ಬೆಳೆಸಿದ್ದಾರೆ. ಪಕ್ಷಾತೀತ ಹಾಗೂ ಜಾತ್ಯತೀತವಾಗಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಮಠಾಧೀಶರು, ಶಾಸಕರು, ಸಂಸದರು ಹಾಗೂ ಪಕ್ಷದ ಮುಖಂಡರು ಭಾಗವಹಿಸುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದರು. ಕಾರ್ಯಕ್ರಮದ ಉಸ್ತುವಾರಿಯನ್ನು ಬೇಲೂರು ಶಾಸಕ ಹೆಚ್ ಕೆ ಸುರೇಶ್ ಅವರು ಈಗಾಗಲೇ ವಹಿಸಿಕೊಂಡಿದ್ದು, ಈಗಾಗಲೇ ಚಿತ್ರದುರ್ಗಕ್ಕೆ ತೆರಳಿದ್ದಾರೆ. ಎಲ್ಲಾ ಕಾರ್ಯಕರ್ತರು ಹಾಗೂ ಮುಖಂಡರು ಅಭಿಮಾನೋತ್ಸವವನ್ನು ಯಶಸ್ವಿಗೊಳಿಸಲು ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.ನಗರಾಧ್ಯಕ್ಷ ಮೆಡಿಕಲ್ ಮೋಹನ್ ಮಾತನಾಡಿ, ತಾಲೂಕು ಅಧ್ಯಕ್ಷರು ತಿಳಿಸಿದಂತೆ ಬೇಲೂರು ತಾಲೂಕಿನಿಂದ 60ಕ್ಕೂ ಹೆಚ್ಚು ಬಸ್ಸುಗಳಲ್ಲಿ ಬಿಜೆಪಿ ಕಾರ್ಯಕರ್ತರು ಉತ್ಸಾಹದಿಂದ ತೆರಳುತ್ತಿದ್ದು, ಎಲ್ಲರೂ ಖುಷಿಯಿಂದ ಮತ್ತು ಸ್ವಯಂಪ್ರೇರಿತರಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ರಾಘವೇಂದ್ರ, ಶ್ರೀನಿವಾಸ್, ವಿಜಯಕುಮಾರ್, ತೆಂಡೇಕೆರೆ ರಮೇಶ್, ಕೊಗೋಡು ಮಹೇಶ್, ಮೋಹನ್, ಇತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭ್ರಷ್ಟಾಚಾರದ ವಿರುದ್ಧ ವಾಟಾಳ್ ಪಕ್ಷದಿಂದ ರಾಜ್ಯಾದ್ಯಂತ ಹೋರಾಟ: ವಾಟಾಳ್ ನಾಗರಾಜ್
ಮಳೆಗಾಗಿ ಪ್ರಾರ್ಥಿಸಿ ಮಳೆರಾಯನ ಹಬ್ಬ ಆಚರಿಸಿದ ಅರಕೆರೆ ಗ್ರಾಮಸ್ಥರು