ವಿವಿ ಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ನಾಲೆಗಳ ಮೂಲಕ ಒಂದು ತಿಂಗಳ ಕಾಲ ಹರಿಸಲು ಶುಕ್ರವಾರ ಜಿಲ್ಲಾಧಿಕಾರಿ ಜಿ.ಆರ್.ಜಿ. ದಿವ್ಯಾಪ್ರಭು ಅಧ್ಯಕ್ಷತೆಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ತೀರ್ಮಾನಿಸಿದೆ. ಈ ಸಭೆಯಲ್ಲಿ ವಿಶೇಷ ಆಹ್ವಾನಿತರಾಗಿ ಯೋಜನಾ ಮತ್ತು ಸಾಂಖ್ಯಿಕ ಹಾಗೂ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಭಾಗಿಯಾಗಿದ್ದರು.
ಈ ತಿಂಗಳ ೧೭ ರಿಂದ ನವೆಂಬರ್ ೧೬ ರವರೆಗೆ ನಾಲೆಗಳಿಗೆ ನೀರು ಕನ್ನಡಪ್ರಭ ವಾರ್ತೆ ಚಿತ್ರದುರ್ಗ ವಿವಿ ಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ನಾಲೆಗಳ ಮೂಲಕ ಒಂದು ತಿಂಗಳ ಕಾಲ ಹರಿಸಲು ಶುಕ್ರವಾರ ಜಿಲ್ಲಾಧಿಕಾರಿ ಜಿ.ಆರ್.ಜಿ. ದಿವ್ಯಾಪ್ರಭು ಅಧ್ಯಕ್ಷತೆಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ತೀರ್ಮಾನಿಸಿದೆ. ಈ ಸಭೆಯಲ್ಲಿ ವಿಶೇಷ ಆಹ್ವಾನಿತರಾಗಿ ಯೋಜನಾ ಮತ್ತು ಸಾಂಖ್ಯಿಕ ಹಾಗೂ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಭಾಗಿಯಾಗಿದ್ದರು. ಸಭೆಯಲ್ಲಿ ತೀರ್ಮಾನವಾಗಿರುವಂತೆ ಇದೇ ತಿಂಗಳ ೧೭ ರಿಂದ ನವೆಂಬರ್ ೧೬ ರವರೆಗೆ ನಾಲೆಗಳಿಗೆ ನೀರು ಹರಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ವಾಡಿಕೆಗಿಂತ ಅತೀ ಕಡಿಮೆ ಮಳೆಯಾಗಿ, ಬರಗಾಲ ಪೀಡಿತವಾಗಿರುವುದರಿಂದ ಅಚ್ಚುಕಟ್ಟು ವ್ಯಾಪ್ತಿಯಲ್ಲಿರುವ ತೋಟಗಾರಿಕೆ ಹಾಗೂ ಇತರೆ ಕೃಷಿ ಬೆಳೆಗಳಿಗೆ ನೀರು ಅವಶ್ಯವಾಗಿರುತ್ತದೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ಸಲಹಾ ಸಮಿತಿ ಸದಸ್ಯರುಗಳು ಹಾಗೂ ಅಧಿಕಾರಿಗಳು ತಿಳಿಸಿದರು. ವಿವಿ.ಸಾಗರ ಜಲಾಶಯದಿಂದ ಒಂದು ಹಂತದ ನೀರನ್ನು ೩೦ ದಿನಗಳ ಕಾಲ ನಾಲೆಗಳಿಗೆ ಹರಿಸುವಂತೆ ಮಾನ್ಯ ಸಚಿವರು ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ನೀರು ನಾಲೆಗಳಲ್ಲಿ ಹರಿಸುವುದರಿಂದ ನಾಲೆಯ ಅಕ್ಕಪಕ್ಕದ ಎಲ್ಲಾ ಗ್ರಾಮಗಳ ಅಂತರ್ಜಲ ಮಟ್ಟ ಹೆಚ್ಚಾಗುತ್ತದೆ, ಅಲ್ಲದೇ ತೋಟಗಾರಿಕೆ ಬೆಳೆಗಳು ಹಾಗೂ ಅಲ್ಪ ಸ್ವಲ್ಪ ಒಣಗಿರುವ ಬೆಳೆಗಳನ್ನು ಉಳಿಸಿಕೊಳ್ಳಬಹುದು ಎಂದು ಸಲಹಾ ಸಮಿತಿ ಸದಸ್ಯರು ತಿಳಿಸಿದರು. ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹಳ್ಳಿಗಳಿಗೆ ನಿರು ಹರಿಸುವ ಪೂರ್ವದಲ್ಲಿ ಮುಂಜಾಗ್ರತಾವಾಗಿ ಜನ ಜಾನುವಾರುಗಳಿಗೆ ಹಾಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರವಹಿಸಲು ವ್ಯಾಪಕವಾಗಿ ಜಾಗೃತಿ ಮೂಡಿಸಲು ಸೂಚಿಸಿದರು. ಅಲ್ಲದೇ ಎಲ್ಲಾ ಇಲಾಖೆಯ ಸಹಯೋಗದೊಂದಿಗೆ ಸಮರ್ಪಕವಾದ ನೀರು ನಿರ್ವಹಣೆ ಮಾಡಲು ಹಾಗೂ ನೀರು ಯಾವುದೇ ಕಾರಣಕ್ಕೆ ಪೋಲಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸಚಿವ ಸುಧಾಕರ್ ನಿರ್ದೇಶನ ನೀಡಿದರು. ಸಭೆಯಲ್ಲಿ ನೀರಾವರಿ ಸಲಹಾ ಸಮಿತಿ ಸದಸ್ಯರು, ನೀರಾವರಿ ಇಲಾಖೆ, ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.