ಕನ್ನಡಪ್ರಭ ವಾರ್ತೆ ಮುಧೋಳ
ಭಾರತ ಭಾಗ್ಯ ವಿದಾತ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮ ಜಯಂತಿಯನ್ನು ಮುಧೋಳ ತಾಲೂಕಾ ಆಡಳಿತದ ವತಿಯಿಂದ ಲೋಕಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಯಿತು. ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ವಿಶೇಷ ಪೂಜೆ ನೆರವೇರಿಸಿ, ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ನಂತರ ತಹಸೀಲ್ದಾರ್ ಕಚೇರಿಯಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರ ಜನ್ಮ ದಿನವನ್ನು ಆಚರಿಸಲಾಯಿತು.ಜಯಂತಿ ಉತ್ಸವ ಸಮಿತಿ ಅಧ್ಯಕ್ಷ ತಹಸೀಲ್ದಾರ್ ವಿನೋದ ಹತ್ತಳ್ಳಿ, ತಾಪಂ ಇಒ ವಿ.ಪಿ.ಏಗನಗೌಡರ, ಪೊಲೀಸ್ ವೃತ್ತ ನಿರೀಕ್ಷಕ ಆರ್.ಆರ್.ಪಾಟೀಲ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ ಕೋರಡ್ಡಿ, ನಗರಸಭೆ ಪೌರಾಯುಕ್ತ ಗೋಪಾಲ ಕಾಸೇ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಂ.ಮುಲ್ಲಾ, ತಾಲೂಕು ಆರೋಗ್ಯಾಧಿಕಾರಿ ವೆಂಕಟೇಶ ಮಲಘಾನ, ತಾಲೂಕು ನೌಕರರ ಸಂಘದ ಅಧ್ಯಕ್ಷ ರಮೇಶ ನೀಡೋಣಿ, ನೀರಾವರಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಆರ್.ಮಹಾರಡ್ಡಿ, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ರಾಘವೇಂದ್ರ ಕಳ್ಳೀಮನಿ, ಸಿಡಿಪಿಒ ಕಾಶೀಬಾಯಿ ಕೋರೆಗೋಳ, ವಲಯ ಅರಣ್ಯಾಧಿಕಾರಿ ಶಿವಪುತ್ರಪ್ಪ ತಳವಾರ, ಎಂ.ಐ.ಅಂಬಿಗೇರ, ಸಾಮಾಜಿಕ ವಲಯ ಅರಣ್ಯಾಧಿಕಾರಿ ಕಿರಣ ದಾಸರಡ್ಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಂಗಡಿ, ಹೆಸ್ಕಾಂ ಅಧಿಕಾರಿ ವೀರಣ್ಣ ಮರಕಟ್ಟಿ, ಪ್ರಕಾಶ ದಾಸರ, ಎನ್.ಎಸ್.ಮೀಶಿ ಸೇರಿದಂತೆ ಇತರೆ ತಾಲೂಕಾ ಮಟ್ಟದ ಅಧಿಕಾರಿಗಳು ಮತ್ತು ಸಮುದಾಯದ ಮುಖಂಡರು ಹಾಗೂ ನಗರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.