ಕನ್ನಡಪ್ರಭ ವಾರ್ತೆ ಹಾಸನ
ಇತ್ತೀಚೆಗೆ ಮುಖ್ಯಮಂತ್ರಿ ಅವರು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ನೀಡಿದ ನಿರ್ದೇಶನದಂತೆ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿಯವರು, ಪ್ರತಿ ಸರ್ಕಾರಿ ಕಚೇರಿಗಳಲ್ಲಿ ‘ಲಂಚ ಮುಕ್ತ ಕಚೇರಿ’ ಎಂದು ಫಲಕ ಅಳವಡಿಸುವುದರ ಜೊತೆಗೆ ನೋಡಲ್ ಅಧಿಕಾರಿ ನೇಮಕ ಮಾಡಬೇಕು ಮೊಬೈಲ್ ನಂಬರ್ ಹಾಕಬೇಕು ಎಂದರು. ಯಾವುದೇ ದೂರು ಬಂದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದರು. ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರತಿ ಮಾಹೆಯ ಮೊದಲ ಶನಿವಾರ ತಾಲೂಕು ಮಟ್ಟದಲ್ಲಿ, ಮೂರನೇ ಶನಿವಾರ ಜಿಲ್ಲಾ ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಲಾಗುತ್ತಿದೆ ಇನ್ನೂ ಮುಂದೆ ಪ್ರತಿ ಮಾಹೆಯಲ್ಲಿ ಒಂದು ದಿನ ಗ್ರಾಮ ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸುವ ಮೂಲಕ ಸಮಸ್ಯೆಗಳನ್ನು ಅವಲೋಕಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರು ನಿರ್ದೇಶನ ನೀಡಿದ್ದಾರೆ ಎಂದು ತಿಳಿಸಿದರು.
ಸರ್ಕಾರಿ ಕಚೇರಿಗಳಲ್ಲಿ ಲಂಚ ಮುಕ್ತ ಕಚೇರಿ ಎಂದು ಫಲಕ ಅಳವಡಿಸುವುದರ ಜೊತೆಗೆ ನೋಡಲ್ ಅಧಿಕಾರಿ ನೇಮಕ ಮಾಡಬೇಕು ಮೊಬೈಲ್ ನಂಬರ್ ಹಾಕಬೇಕು. ಯಾವುದೇ ದೂರು ಬಂದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದರು. ಸರ್ಕಾರಿ ಕಚೇರಿಗಳಲ್ಲಿ ಗುಟ್ಕಾ, ಮದ್ಯಪಾನ, ಉಗುಳುವುದನ್ನು ನಿಷೇಧಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಲಾಗಿದ್ದು, ಧೂಮಪಾನ ಮಾಡುವುದು ಕಂಡುಬಂದಲ್ಲಿ ದಂಡ ವಿಧಿಸುವಂತೆ ತಿಳಿಸಿದರು. ಸರ್ಕಾರಿ ಕಚೇರಿಗಳಲ್ಲಿ ಧೂಮಪಾನ ಮುಕ್ತ ಕಚೇರಿ ಎಂದು ಫಲಕ ಅಳವಡಿಸಲು ಸೂಚಿಸಿದರು.ಕೆ.ಪಿ.ಟಿ.ಸಿ.ಎಲ್ ಅಧಿಕಾರಿಗಳು ನಿರಂತರವಾಗಿ ವಿದ್ಯುತ್ ಸರಬರಾಜು ಮಾಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಹಸಿರು ಹಾಸನ ಕಾರ್ಯಕ್ರಮದಡಿಯಲ್ಲಿ ಎಲ್ಲಾ ಇಲಾಖಾ ಅಧಿಕಾರಿಗಳು ಜೂನ್‌ನಿಂದ ಆಗಸ್ಟ್‌ವರೆಗೆ ಗಿಡ ನೆಟ್ಟು ಪೋಷಣೆ ಮಾಡಲು ಪ್ರತಿ ಇಲಾಖೆ ಅಧಿಕಾರಿಗಳು ಕ್ರಮವಹಿಸಲು ಸೂಚನೆ ನೀಡಿದರು. ಸರ್ಕಾರಿ ಕಟ್ಟಡಗಳು ವಾಸಿಸಲು ಯೋಗ್ಯವಾಗಿಲ್ಲದಿರುವುದನ್ನು ಗುರುತಿಸಿ ತಾಂತ್ರಿಕವಾಗಿ ಎಂಜಿನಿಯರ್‌ಗಳು ಪರಿಶೀಲನೆ ಮಾಡಿ ನೆಲಸಮ ಮಾಡಲು ಕ್ರಮವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಮೈಕ್ರೋ ಫೈನಾನ್ಸ್, ಚೈನ್ ಲಿಂಕ್ ಹಣಕಾಸು ವ್ಯವಹಾರ ನಡೆಸುವ ಕಂಪನಿಗಳನ್ನು ಗುರುತಿಸಿ ಅವರೊಂದಿಗೆ ಸಭೆ ನಡೆಸಿ ಜೊತೆಗೆ ಸಾರ್ವಜನಿಕರು ತೊಂದರೆಗೆ ಸಿಲುಕದಂತೆ ಅರಿವು ಮೂಡಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸೂಚನಾ ಮತ್ತು ಎಚ್ಚರಿಕೆ ಫಲಕ ಅಳವಡಿಸುವುದು, ರಿಫ್ಲೆಕ್ಟರ್ ಬಿಳಿ ಬಣ್ಣದ ಪಟ್ಟೆ ಹಾಕಿಸಲು ಕ್ರಮಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಜವಾಬ್ದಾರಿಯುತವಾಗಿ ಬಸ್ ಚಾಲನೆ ಮಾಡುವಂತೆ ಬಸ್ ಚಾಲಕರಿಗೆ ತರಬೇತಿ ನೀಡಿ ನಗರ ಪ್ರದೇಶಗಳಲ್ಲಿ ವೇಗದ ಮಿತಿ ೪೦ಕ್ಕೆ ನಿಗದಿ ಪಡಿಸುವಂತೆ ಹಾಗೂ ವೃತ್ತಗಳಲ್ಲಿ ಎಚ್ಚರಿಕೆವಹಿಸಿ ಚಾಲನೆ ಮಾಡುವಂತೆ ಜೊತೆಗೆ ನಿಗದಿತ ಸ್ಥಳಗಳಲ್ಲಿ ಮಾತ್ರ ಬಸ್ ನಿಲುಗಡೆ ಮಾಡಲು ಚಾಲಕರಿಗೆ ಸೂಚಿಸುವಂತೆ ಕೆ.ಎಸ್.ಆರ್.ಟಿಸಿ ವಿಭಾಗಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅಪಘಾತಗಳನ್ನು ತಡೆಗಟ್ಟಿ ಮರಣ ಪ್ರಮಾಣ ಕಡಿಮೆ ಮಾಡುವ ನಿಟ್ಟಿನಲ್ಲಿ ಬ್ಲಾಕ್‌ಸ್ಪಾಟ್‌ಗಳನ್ನು ಗುರುತಿಸಿ ಸರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಆಟೋಗಳನ್ನು ನಿಗದಿತ ಸ್ಥಳದಲ್ಲಿ ನಿಲುಗಡೆಗೆ ನಿಲ್ದಾಣಗಳನ್ನು ಗುರುತಿಸಿ ಎಂದರಲ್ಲದೆ, ಟ್ರ್ಯಾಕ್ ನಿಲುಗಡೆಗೆ ಸ್ಥಳ ಗುರುತಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ರಸ್ತೆ ಸುರಕ್ಷತೆ ಕುರಿತು ಮಕ್ಕಳಿಗೆ ಜಾಗೃತಿ ಮೂಡಿಸಲು ಶಾಲೆಗಳಲ್ಲಿ ಪೋಸ್ಟರ್ ಅಳವಡಿಸಿ ಎಂದು ತಿಳಿಸಿದರು.ರಸ್ತೆ ಒತ್ತುವರಿ ತೆರವಿಗೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಪಾದಚಾರಿ ಮಾರ್ಗದಲ್ಲಿ ವ್ಯಾಪಾರ ವಹಿವಾಟು ನಡೆಸದಂತೆ ತೆರವುಗೊಳಿಸಲು ಸೂಚನೆ ನೀಡಿದರು. ಸುಪ್ರೀಂಕೋರ್ಟ್ ಆದೇಶದಂತೆ ಘನತ್ಯಾಜ್ಯ ವಿಲೇವಾರಿಗೆ ಸ್ಥಳೀಯ ಸಂಸ್ಥೆಗಳು ನಿಗಾ ವಹಿಸಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು, ಅನಧಿಕೃತವಾಗಿ ರಸ್ತೆ ಬದಿಗಳಲ್ಲಿ ಕಸ ಹಾಕುವುದನ್ನು ತಡೆಯಬೇಕು ಕಸವಿದ್ದಲ್ಲಿ ತೆಗೆಸುವುದಕ್ಕೆ ಯಾವ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ರಸ್ತೆಗಳು ಒಳಪಡುತ್ತದೆ ಅವರೇ ಜವಾಬ್ದಾರಿ ವಹಿಸಬೇಕು ಎಂದು ತಿಳಿಸಿದರು.ಪ್ರತಿ ವಾರ್ಡ್‌ನಲ್ಲಿ ಸ್ವಚ್ಛತಾ ಸಮಿತಿಯನ್ನು ರಚಿಸಬೇಕು ಸಾರ್ವಜನಕರು ಮೂಲದಲ್ಲಿಯೇ ಕಸ ವಿಗಂಡಣೆ ಮಾಡಿ ನೀಡಲು ಕ್ರಮವಹಿಸಬೇಕು ಎಂದರು. ಸ್ವಚ್ಛತೆ ಕಾಪಾಡಲು ಪ್ರವಾಸಿ ತಾಣಗಳು ಹಾಗೂ ಧಾರ್ಮಿಕ ಸ್ಥಳಗಳಲ್ಲಿಯೂ ಬೋರ್ಡ್ ಅಳವಡಿಸಿ ಎಂದು ತಿಳಿಸಿದರು. ಕೈಗಾರಿಕೆಗಳಿಂದ ಕೆರೆ, ಕಟ್ಟೆಗಳಿಗೆ ತ್ಯಾಜ್ಯ ನೀರು ಬಿಡುವುದರಿಂದ ನೀರು ಕಲುಷಿತಗೊಂಡು ಬಳಕೆಗೆ ಯೋಗ್ಯವಾಗಿರುವುದಿಲ್ಲ ಇಂತಹದ್ದು ಕಂಡುಬಂದರೆ ಕೂಡಲೇ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಳೆಗಾಲ ಪ್ರಾರಂಭವಾಗಿದ್ದು ಬಿಳುವ ಹಂತದಲ್ಲಿ ಇರುವ ಅಪಾಯಕಾರಿ ಮರಗಳು, ವಿದ್ಯುತ್ ಕಂಬಗಳನ್ನು ತೆರವು ಗೊಳಿಸಲು ಹಾಗೂ ವಿದ್ಯುತ್ ತಂತಿಗಳನ್ನು ಸರಿಪಡಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಉದ್ಯೋಗ ಮಹಿಳೆಯರಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲು ಪ್ರಸ್ತುತ ಲಭ್ಯವಿರುವ ಕಟ್ಟಡದಲ್ಲಿ ಪ್ರಾರಂಭಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿzರು