ಆಂಧ್ರ ಪ್ರದೇಶದ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾನಿಲಯದ ಅಟಲ್ ಇನ್‌ಕ್ಯೂಬೇಶನ್ ಕೇಂದ್ರ ನೀಡುವ ‘ಬೆಸ್ಟ್ ಸ್ಟಾರ್ಟಪ್ ಇಕೋಸಿಸ್ಟಮ್’ ಪ್ರಶಸ್ತಿಗೆ ತುಮಕೂರು ವಿಶ್ವವಿದ್ಯಾನಿಲಯ ಭಾಜನವಾಗಿದೆ. ಬೆಂಗಳೂರಿನಲ್ಲಿ ನಡೆದ ಸಮಾರಂಭವೊಂದ ರಲ್ಲಿ ಅಟಲ್ ಇನ್ನೋವೇಶನ್ ಮಿಷನ್ ಸಿಇಒ ರಮಣನ್ ರಾಮನಾಥನ್ ಪ್ರಶಸ್ತಿ ಪ್ರದಾನ ಮಾಡಿದರು. ವಿವಿ ಕುಲಸಚಿವೆ ನಾಹಿದಾ ಜಮ್‌ಜಮ್ ವಿಶ್ವವಿದ್ಯಾನಿಲಯದ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು.
ಕನ್ನಡಪ್ರಭ ವಾರ್ತೆ ತುಮಕೂರು
ಆಂಧ್ರ ಪ್ರದೇಶದ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾನಿಲಯದ ಅಟಲ್ ಇನ್‌ಕ್ಯೂಬೇಶನ್ ಕೇಂದ್ರ ನೀಡುವ ‘ಬೆಸ್ಟ್ ಸ್ಟಾರ್ಟಪ್ ಇಕೋಸಿಸ್ಟಮ್’ ಪ್ರಶಸ್ತಿಗೆ ತುಮಕೂರು ವಿಶ್ವವಿದ್ಯಾನಿಲಯ ಭಾಜನವಾಗಿದೆ. ಬೆಂಗಳೂರಿನಲ್ಲಿ ನಡೆದ ಸಮಾರಂಭವೊಂದ ರಲ್ಲಿ ಅಟಲ್ ಇನ್ನೋವೇಶನ್ ಮಿಷನ್ ಸಿಇಒ ರಮಣನ್ ರಾಮನಾಥನ್ ಪ್ರಶಸ್ತಿ ಪ್ರದಾನ ಮಾಡಿದರು. ವಿವಿ ಕುಲಸಚಿವೆ ನಾಹಿದಾ ಜಮ್‌ಜಮ್ ವಿಶ್ವವಿದ್ಯಾನಿಲಯದ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು.ಕರ್ನಾಟಕದ ವಿವಿಧ ರಂಗಗಳಲ್ಲಿ ಸಾಧನೆ ಮಾಡಿರುವ ಮಹಿಳೆಯರಿಗೆ ನೀಡುವ ರಾಜ್ಯಮಟ್ಟದ ‘ಮಹಿಳಾ ರತ್ನ’ ಪ್ರಶಸ್ತಿ ಯನ್ನು ತುಮಕೂರು ವಿವಿ ಕುಲಸಚಿವೆ ನಾಹಿದಾ ಜಮ್‌ಜಮ್ ಅವರಿಗೆ ನೀಡಿ ಗೌರವಿಸಲಾಗಿದೆ. ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಮಾರಂಭವೊಂದರಲ್ಲಿ ಅವರು ಪ್ರಶಸ್ತಿ ಸ್ವೀಕರಿಸಿದ್ದಾರೆ. ಜಿಲ್ಲೆಯ ಪ್ರಮುಖ ಎರಡು ತಾಲೂಕಿನ ತಹಸೀಲ್ದಾರ್ ಹಾಗೂ ವಿವಿಯ ರಿಜಿಸ್ಟ್ರಾರ್ ಹುದ್ದೆಯಲ್ಲಿನ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇವರು ಜನಸ್ನೇಹಿ ಅಧಿಕಾರಿ ಎಂದೇ ಪ್ರಖ್ಯಾತಿ ಹೊಂದಿದ್ದಾರೆ.ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ವಿವಿಗೆ ಲಭಿಸಿರುವ ಪ್ರಶಸ್ತಿಗೆ ಸಂತಸ ವ್ಯಕ್ತಪಡಿಸಿದರು ಹಾಗೂ ‘ಮಹಿಳಾ ರತ್ನ’ ಪ್ರಶಸ್ತಿಗೆ ಭಾಜನರಾಗಿರುವ ಕುಲಸಚಿವೆ ನಾಹಿದಾ ಜಮ್‌ಜಮ್ ಅವರಿಗೆಅಭಿನಂದನೆ ತಿಳಿಸಿದರು. ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ಕೆ.ಪ್ರಸನ್ನಕುಮಾರ್ ಇದ್ದರು.ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ಕೆ.ಪ್ರಸನ್ನಕುಮಾರ್ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.