ಭವಿಷ್ಯಕ್ಕೆ ಭಾರತ್‌ ಜೋಡೋ ಯುವಕ ಸಂಘ: ಸಚಿವ ಮಧು

KannadaprabhaNewsNetwork |  
Published : Aug 16, 2026, 02:45 AM IST
ಪೋಟೋ: 15ಎಸ್‌ಎಂಜಿಕೆಪಿ02ಶಿವಮೊಗ್ಗ ನಗರದ ನೆಹರೂ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಿದ್ದ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಧ್ವಜರೋಹಣ ನೆರವೇರಿಸಿದರು. | Kannada Prabha

ಸಾರಾಂಶ

ಯುವಜನರಲ್ಲಿ ಕ್ರೀಡೆ, ವೈಜ್ಞಾನಿಕ ಮನೋಭಾವ, ಸಂಸ್ಕೃತಿ, ಸಾಮಾಜಿಕ ಸಾಮರಸ್ಯ, ಸಂವಿಧಾನದ ಮೌಲ್ಯಗಳು ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವ ಸದುದ್ದೇಶದಿಂದ ರಾಜ್ಯಾದ್ಯಂತ ಹತ್ತು ಸಾವಿರ "ಭಾರತ್ ಜೋಡೋ ಯುವಕ ಸಂಘಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಯುವಜನರಲ್ಲಿ ಕ್ರೀಡೆ, ವೈಜ್ಞಾನಿಕ ಮನೋಭಾವ, ಸಂಸ್ಕೃತಿ, ಸಾಮಾಜಿಕ ಸಾಮರಸ್ಯ, ಸಂವಿಧಾನದ ಮೌಲ್ಯಗಳು ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವ ಸದುದ್ದೇಶದಿಂದ ರಾಜ್ಯಾದ್ಯಂತ ಹತ್ತು ಸಾವಿರ "ಭಾರತ್ ಜೋಡೋ ಯುವಕ ಸಂಘಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ನಗರದ ನೆಹರೂ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಿದ್ದ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಯಲ್ಲಿ ಧ್ವಜರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಂಘಗಳನ್ನು ರಚಿಸಲು ಉದ್ದೇಶಿಸಲಾಗಿದ್ದು, ಪ್ರತಿ ಸಂಘದ ಚಟುವಟಿಕೆಗಳಿಗಾಗಿ ವಾರ್ಷಿಕವಾಗಿ 10 ಲಕ್ಷ ರು. ಅನುದಾನವನ್ನು ಮಂಜೂರು ಮಾಡಲಾಗುವುದು ಎಂದರು.

ಅಲ್ಲದೇ ಪ್ರಜಾಸೇವಾ ಇಲಾಖೆಯನ್ನು ಹೊಸದಾಗಿ ರಚಿಸಿ, ವಿವಿಧ ಸರ್ಕಾರಿ ಇಲಾಖೆಗಳ ನಡುವೆ ಸಮನ್ವಯ, ಆಡಳಿತಾತ್ಮಕ ತಪಾಸಣೆ ಮತ್ತು ನೌಕರರ ಹಾಜರಾತಿ ಹಾಗೂ ಆಸ್ತಿ ಹೊಣೆಗಾರಿಕೆ ವಿವರಗಳ ಮೇಲ್ವಿಚಾರಣೆ ನಡೆಸಲಿದೆ. ಅಲ್ಲದೇ ಸರ್ಕಾರ ಮತ್ತು ಸಾರ್ವಜನಿಕರ ನಡುವೆ ಸಂಪರ್ಕ ಸೇತುವೆಯಾಗಿ ಜನಸಾಮಾನ್ಯರ ಕುಂದುಕೊರತೆಗಳಿಗೆ, ಸಮಸ್ಯೆ-ಅಹವಾಲುಗಳಿಗೆ ದನಿಯಾಗಲು ಪ್ರತಿ ಶನಿವಾರಗಳಂದು ಪ್ರಜಾಸೇವಾ ಜನಾಂದೋಲನ ಸಭೆಗಳನ್ನು ಆಯೋಜಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದರು.

ಹೊಸದಾಗಿ 1000 ಕೆ.ಪಿ.ಎಸ್. ಶಾಲೆಗಳನ್ನು ಆರಂಭಿಸಲು ಸರ್ಕಾರ ಬದ್ದವಾಗಿದೆ. ಈ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ಶೀಘ್ರದಲ್ಲೇ ಸಮಾಲೋಚನೆ ನಡೆಸಿ, ಶಿವಮೊಗ್ಗದಲ್ಲಿಯೇ ಭವ್ಯ ಸಮಾರಂಭವನ್ನು ಆಯೋಜಿಸಲಾಗುವುದು ಅಲ್ಲದೇ ಒಂದೇ ಸಂಕೀರ್ಣದಲ್ಲಿ ಜಿಲ್ಲಾಡಳಿತ ಭವನ ನಿರ್ಮಾಣ ಕಾರ್ಯಕ್ಕೂ ಚಾಲನೆ ದೊರೆಯುವ ಆಶಯವಿದೆ ಎಂದರು.

ಮಾಜಿ ಮುಖ್ಯಮಂತ್ರಿಗಳಾಗಿದ್ದ ದಿ.ಎಸ್.ಬಂಗಾರಪ್ಪ ಮತ್ತು ಕಾಗೋಡು ತಿಮ್ಮಪ್ಪನವರ ಆಶಯದಂತೆ ಶರಾವತಿ ಸಂತ್ರಸ್ಥರ ಹಿತಕಾಯುವಲ್ಲಿ ಸರ್ಕಾರ ಬದ್ಧವಾಗಿದೆ. ಅದಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟದ ಪ್ರಕ್ರಿಯೆಗಳು ನಿರಂತರವಾಗಿದ್ದು, ನಮ್ಮ ಪರವಾದ ತೀರ್ಪು ಬರುವ ಆಶಯವಿದೆ. ಇದೇ ಮೊದಲ ಬಾರಿಗೆ ಪ್ರಥಮ ಮತ್ತು ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ನೀಡಲು ತೀರ್ಮಾನಿಸಲಾಗಿದ್ದು, ಯೋಜನೆ ಅನುಷ್ಠಾನ ಕಾರ್ಯ ಪ್ರಗತಿಯಲ್ಲಿದೆ ಎಂದರು.

ನೀಟ್‌ ಪರೀಕ್ಷೆಯಲ್ಲಿ ಅನೇಕ ನ್ಯೂನತೆಗಳಿರುವುದನ್ನು ಗುರುತಿಸಲಾಗಿದ್ದು, ಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ನೀಟ್‌ ಪರೀಕ್ಷೆಯನ್ನು ಅನೂರ್ಜಿತಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ನಂಜಯ್ಯನಮಠ್‌, ವಿಪ ಸದಸ್ಯೆ ಬಲ್ಕೀಸ್‌ಬಾನು, ರಾಜ್ಯ ಜವಳಿ, ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್‌ಗೌಡ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಪಂ ಸಿಇಒ ಎನ್.ಹೇಮಂತ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ನಿಖಿಲ್‌, ಅಪರ ಜಿಲ್ಲಾಧಿಕಾರಿ ಅಭಿಷೇಕ್‌ವಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಇದೇ ಮೊದಲ ಬಾರಿಗೆ ಸ್ವಾತಂತ್ರ್ಯೋತ್ಸವದ ಸಂಭ್ರಮಕ್ಕೆ ನೆಹರೂ ಸ್ಟೇಡಿಯಂನಲ್ಲಿ 18000ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಶಾಲಾ ಸಮವಸ್ತ್ರದೊಂದಿಗೆ ಶಿಸ್ತಿನಿಂದ ಆಗಮಿಸಿದ್ದು, ಕಾರ್ಯಕ್ರಮಕ್ಕೆ ಹೆಚ್ಚಿನ ಮೆರಗು ನೀಡಿತ್ತು. ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾರ್ಗದರ್ಶನದ ಪೆರೇಡ್‌ನಲ್ಲಿ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ವಿದ್ಯಾರ್ಥಿಗಳು, ಸ್ಕೌಟ್‌ ಮತ್ತು ಗೈಡ್ಸ್‌, ಸೇವಾದಳ, ಎನ್.ಎಸ್.ಎಸ್. ವಿದ್ಯಾರ್ಥಿಗಳು ಹಾಗೂ ವಿಶೇಷವಾಗಿ ಪೌರಕಾರ್ಮಿಕರು ಭಾಗವಹಿಸಿದ್ದರು. ಈ ಅತ್ಯಪರೂಪದ ಕಾರ್ಯಕ್ರಮಕ್ಕೆ ಶ್ರಮಿಸಿದ ಎಲ್ಲಾ ಅಧಿಕಾರಿಗಳು ಅಭಿನಂದನಾರ್ಹರು.

-ಮಧು ಬಂಗಾರಪ್ಪ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾತ್ರೋರಾತ್ರಿ ತಮಿಳುನಾಡಿಗೆ ಕಾವೇರಿ ನೀರು ಹರಿಸಿದ ರಾಜ್ಯ ಸರ್ಕಾರ..!
ಯುವಶಕ್ತಿಯನ್ನು ಸರಿದಾರಿಗೆ ಕರೆದೊಯ್ಯುವ ಆದರ್ಶ ಪುರುಷರ ಸಂಖ್ಯೆ ಕಡಿಮೆ: ತಿಮ್ಮರಾಯಿಗೌಡ