ಪೌರಾಯುಕ್ತರನ್ನು ಮಾತೃ ಇಲಾಖೆಗೆ ವರ್ಗ ಮಾಡಿ

KannadaprabhaNewsNetwork |  
Published : Sep 12, 2024, 01:45 AM IST
11ಸಿಎಚ್‌ಎನ್‌55ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ದಲಿತ ಮುಖಂಡ ಭಾನುಪ್ರಕಾಶ್ ಸುದ್ದಿಗೋಷ್ಠಿ ನಡೆಸಿದರು. | Kannada Prabha

ಸಾರಾಂಶ

ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ದಲಿತ ಮುಖಂಡ ಭಾನುಪ್ರಕಾಶ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಇಲ್ಲಿನ ನಗರಸಭೆ ಪೌರಾಯುಕ್ತ ರಾಮದಾಸ್ ಅವರನ್ನು ಮಾತೃ ಇಲಾಖೆಗೆ ವರ್ಗಾವಣೆ ಮಾಡಿ ಪೌರಾಡಳಿತ ಇಲಾಖೆಯ ನುರಿತ ಅಧಿಕಾರಿಯನ್ನು ನೇಮಿಸಬೇಕು ಎಂದು ದಲಿತ ಮುಖಂಡ ಭಾನುಪ್ರಕಾಶ್ ಆಗ್ರಹಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಜು.5ರಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಬೈರತಿ ಸುರೇಶ್ ಅವರು ನಗರಸಭೆಯ ಪೌರಾಯುಕ್ತ ರಾಮದಾಸ್ ಅವರನ್ನು ವರ್ಗಾವಣೆ ಮಾಡುವಂತೆ ಸೂಚನೆ ನೀಡಿದ್ದರು. ಇಲ್ಲಿಯ ತನಕ ವರ್ಗಾವಣೆ ಮಾಡದೇ ರಕ್ಷಣೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಸಚಿವರ ವರ್ಗಾವಣೆಯ ಸೂಚನೆ ಕೇವಲ ಪ್ರಚಾರಕ್ಕೆ ಸೀಮಿತವಾಗಿದೆ. ಪೌರಾಯುಕ್ತರ ಬಗ್ಗೆ ಸತತವಾಗಿ ದೂರುಗಳು ಬಂದರೂ ಅವರ ಮೇಲೆ ಕ್ರಮ ಕೈಗೊಳ್ಳುತ್ತಿಲ್ಲ. ನಗರಸಭೆಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು ಹಣ ನೀಡಿದರೆ ಮಾತ್ರ ಕೆಲಸವಾಗುತ್ತದೆ. ಪೌರಾಯುಕ್ತ ರಾಮದಾಸ್ ತೋಟಗಾರಿಕೆ ಇಲಾಖೆಯಲ್ಲಿದ್ದರು. ಇವರಿಗೆ ಪೌರಾಡಳಿತ ಇಲಾಖೆಯ ಬಗ್ಗೆ ಮಾಹಿತಿ ಇಲ್ಲ. ಇವರ ಕಾರ್ಯವೈಖರಿಯ ಬಗ್ಗೆ ನಿರಂತರವಾಗಿ ದೂರುಗಳು ಬಂದರೂ ಸಂಬಂಧಪಟ್ಟ ಜಿಲ್ಲಾಧಿಕಾರಿ ಅವರ ವಿರುದ್ಧ ಸೂಕ್ತ ಕ್ರಮ ವಹಿಸದೇ ನಿರ್ಲಕ್ಷ್ಯ ಮಾಡಿದ್ದಾರೆ. ನಗರದ ವಾರ್ಡ್‌ಗಳಲ್ಲಿ ರಸ್ತೆ, ಚರಂಡಿ, ವಿದ್ಯುತ್ ದೀಪ ಇಲ್ಲದೇ ತೊಂದರೆಯಾಗಿದೆ. ಅಲ್ಲದೇ ಬೀದಿ ನಾಯಿಗಳು, ಕೋತಿಗಳ ಹಾವಳಿ ಹೆಚ್ಚಾಗಿದ್ದು ಇವುಗಳ ಹತೋಟಿಗೆ ಅಧಿಕಾರಿಗಳು ಮುಂದಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ನಗರದ ಹಲವು ಬಡಾವಣೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಸರ್ಕಾರ ಕೂಡಲೇ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಇಲ್ಲಿನ ಶಾಸಕರು, ಅಧಿಕಾರಿಗಳು ಚಾಮರಾಜನಗರದ ಅಭಿವೃದ್ಧಿಗೆ ಕ್ರಮವಹಿಸಬೇಕು. ಅಲ್ಲದೆ ನಗರಸಭೆಗೆ ಪೌರಾಡಳಿತ ಇಲಾಖೆಯು ಉತ್ತಮ ಅಧಿಕಾರಿಯನ್ನು ಪೌರಾಯುಕ್ತರನ್ನಾಗಿ ನೇಮಕ ಮಾಡಬೇಕು ಎಂದು ಆಗ್ರಹಿಸಿದರು. ಮುಖಂಡರಾದ ಎಂ.ಎನ್.ಸಂಪತ್ ಕುಮಾರ್, ಅನಿಲ್‌ಕುಮಾರ್, ರಮೇಶ್ ಹಾಜರಿದ್ದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ