ಕನ್ನಡಪ್ರಭ ವಾರ್ತೆ ಬಾಗಲಕೋಟೆಬಾಗಲಕೋಟೆ ಕ್ಷೇತ್ರದ ಲೋಕಸಭೆಯ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ್ ಅವರು ಗುರುವಾರ ಮಹಿಳೆಯರ ಜೊತೆಗೂಡಿ ಎರಡನೇ ಬಾರಿ ನಾಮಪತ್ರ ಸಲ್ಲಿಸಿದರು. ಸೋಮವಾರ ತಮ್ಮ ಮೊದಲ ಉಮೇದುವಾರಿಕೆ ಸಲ್ಲಿಸಿದ್ದರು. ಏ.19 ರಂದು ಬೃಹತ್ ಜಾಥಾ ಮೂಲಕ, ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದರು.
ನಾಮಪತ್ರ ಸಲ್ಲಿಕೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಯುಕ್ತಾ ಪಾಟೀಲ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡ ಕುಟುಂಬಗಳಿಗೆ ಆಸರೆಯಾಗಿವೆ. ಎಲ್ಲೆಡೆ ಮಹಿಳೆಯರು ಕಾಂಗ್ರೆಸ್‌ಗೆ ಮತ ನೀಡಲಿದ್ದಾರೆ. ಪ್ರಚಾರಕ್ಕೆ ಹೋದಲ್ಲೆಲ್ಲ ಮಹಿಳೆಯರು ಸಿಎಂ, ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿದರು.