ಬಿಜೆಪಿ ಕಚೇರಿಯಿಂದ ಕಾಲ್ನಡಿಗೆಯಲ್ಲಿ ತೆರಳಿದ ಕಾರ್ಯಕರ್ತರು
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುರಾಜ್ಯದಲ್ಲಿ ಜನವಿರೋಧಿ ಕಾಂಗ್ರೆಸ್ ಸರ್ಕಾರ ತೊಲಗಬೇಕು ಎಂದು ಜಿಲ್ಲಾ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ನಗರದ ಪ್ರಮುಖ ರಸ್ತೆಯಲ್ಲಿ ಕಾರ್ಯಕರ್ತರು ಕಾಂಗ್ರೆಸ್ ಡೇಂಜರ್ ಎಂಬ ಪೋಸ್ಟರನ್ನು ಅಂಟಿಸುವ ಮೂಲಕ ಅಭಿಯಾನಕ್ಕೆ ಮಂಗಳವಾರ ಚಾಲನೆ ನೀಡಿದರು.
ಬಿಜೆಪಿ ಕಚೇರಿಯಿಂದ ಕಾಲ್ನಡಿಗೆಯಲ್ಲಿ ತೆರಳಿದ ಕಾರ್ಯಕರ್ತರು ಆಜಾದ್ ಪಾರ್ಕ್ ವೃತ್ತ ಹಾಗೂ ಎಂ.ಜಿ. ರಸ್ತೆ ಎರಡು ಬದಿಗಳಲ್ಲಿ ಪೋಸ್ಟರ್ ಅಂಟಿಸುವ ಮೂಲಕ ರಾಜ್ಯದಿಂದ ಕಾಂಗ್ರೆಸ್ ಸರ್ಕಾರ ತೊಲಗಬೇಕು ಎಂಬ ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.ಇದೇ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್ ಶೆಟ್ಟಿ, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಜನತೆಗೆ ಭಾರೀ ಅನ್ಯಾಯವೆಸಗುತ್ತಿರುವುದು ಪೋಸ್ಟರ್ ಮೂಲಕ ತಿಳಿಸುವ ಕೆಲಸ ಮಾಡಲಾಗುತ್ತಿದೆ. ಹಿಂದೂ ಹಾಗೂ ಜನವಿರೋಧಿ ಆಡಳಿತ ಕಾಂಗ್ರೆಸ್ ನಡೆಸುತ್ತಿದೆ ಎಂದು ಆರೋಪಿಸಿದರು.ರಾಮೇಶ್ವರಂ ಕೆಫೆ ಬಾಂಬ್ ಸ್ಟೋಟ, ನೇಹಾ ಹತ್ಯೆ ಪ್ರಕರಣ ಸೇರಿದಂತೆ ಹಿಂದುಗಳ ಮೇಲೆ ನಿರಂತರವಾಗಿ ಹಲ್ಲೆ ನಡೆಸ ಲಾಗುತ್ತಿದೆ. ದೇಶದಾದ್ಯಂತ ಕಾಂಗ್ರೆಸ್ ಧೂಳಿಪಟವಾದಂತೆ ರಾಜ್ಯದಲ್ಲಿಯೂ ಕಾಂಗ್ರೆಸ್ ಧೂಳಿಪಟ ಮಾಡಬೇಕು ಎಂದು ಹೇಳಿದರು.ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಮಾತನಾಡಿ, ಎಂಟು ಮಂದಿ ಹಿಂದೂಗಳ ಹತ್ಯೆಗೆ ಕಾರಣ ರಾಗಿರುವ ರಾಜ್ಯ ಸರ್ಕಾರ ಹಿಟ್ಲರ್ ಆಡಳಿತ ನೀಡುತ್ತಿದೆ. ಅಲ್ಪಸಂಖ್ಯಾತರನ್ನು ಓಲೈಸುವ ನಿಟ್ಟಿನಲ್ಲಿ ಹಿಂದೂಗಳನ್ನು ಕಡೆಗಣಿಸಲಾಗುತ್ತಿದೆ ಎಂದು ದೂರಿದರು.ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಮಾಧ್ಯಮ ಸಮಿತಿ ಸದಸ್ಯ ಡಿ.ಟಿ.ವಿಜೇಂದ್ರ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಕೆ.ಎಸ್. ಪುಷ್ಪರಾಜ್, ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಕುರುವಂಗಿ ವೆಂಕಟೇಶ್, ಓಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಬಿ.ರಾಜಪ್ಪ, ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ಮುಖಂಡರಾದ ಕೋಟೆ ರಂಗನಾಥ್, ಕೇಶವ, ಮುತ್ತಯ್ಯ, ಸೋಮಶೇಖರ್ ಹಾಜರಿದ್ದರು.23 ಕೆಸಿಕೆಎಂ 4
ಚಿಕ್ಕಮಗಳೂರಿನ ಪ್ರಮುಖ ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಕಾಂಗ್ರೆಸ್ ಡೆಂಜರ್ ಪೋಸ್ಟರ್ ಅಂಟಿಸುವ ಮೂಲಕ ಅಭಿಯಾನ ನಡೆಸಿದರು.