ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಚರ್ಚಿಗೆ ಭೇಟಿ ನೀಡಿದ್ದ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲರಿಗೆ ಶುಭ ಕೋರಿ ಮಾತನಾಡಿದ ಅವರು, ವಿವಿಧತೆಯಲ್ಲಿ ಏಕತೆ ಕಾಣುವುದು ಭಾರತದ ವಿಶೇಷ. ಎಲ್ಲ ಸಮಾಜಗಳನ್ನು ಒಗ್ಗೂಡಿಸುವ ಕೆಲಸ ಆಗಬೇಕೇ ಹೊರತು, ವಿಘಟನೆ ಪ್ರಯತ್ನ ಮಾಡಬಾರದು. ನಾಯಕತ್ವ ವಹಿಸಿಕೊಂಡವರು ಸಮಾಜ ರಕ್ಷಣೆ ಮಾಡಬೇಕು. ಅಂತಹ ಗುಣ ಸಂಯುಕ್ತಾ ಪಾಟೀಲ ಅವರಲ್ಲಿ ಕಾಣಬಹುದು ಎಂದು ಹೇಳಿದರು.
ಉತ್ತಮ ನಾಯಕರನ್ನು ಆಯ್ಕೆ ಮಾಡುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ. ಈ ಹೊಣೆಗಾರಿಕೆ ಸಮರ್ಥವಾಗಿ ನಿಭಾಯಿಸಿದರೆ ದೇಶಕ್ಕೆ ಉಜ್ವಲ ಭವಿಷ್ಯ ಸಿಗಲಿದೆ. ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ಒಳ್ಳೆಯ ಅಭ್ಯರ್ಥಿ ದೊರಕಿದ್ದಾರೆ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಗುಣಲಕ್ಷಣಗಳು ಅವರಲ್ಲಿವೆ. ಕಿರಿಯ ವಯಸ್ಸಿನಲ್ಲಿಯೇ ಡಿಸಿಸಿ ಬ್ಯಾಂಕ್ ನಿರ್ದೇಶಕಿಯಾಗಿ, ಸ್ಪರ್ಶ ಫೌಂಡೇಶನ್ ಅಧ್ಯಕ್ಷೆಯಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.ಈ ಫೌಂಡೇಶನ್ ಮೂಲಕ ಹಲವು ಕುಟುಂಬಗಳು ಬದುಕು ಕಟ್ಟಿಕೊಳ್ಳಲು ನೆರವಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ನೀವು ಹಾಕುವ ಒಂದು ಮತದಲ್ಲಿ ಈ ದೇಶದ ಭವಿಷ್ಯವೇ ಅಡಗಿದೆ. ಈ ಅವಕಾಶ ಬಳಕೆ ಮಾಡಿಕೊಂಡು ಸಮರ್ಥರನ್ನು ಸಂಸತ್ತಿಗೆ ಕಳುಹಿಸಬೇಕು. ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಹೇಳಿದರು.
ವಯಸ್ಸಿನಲ್ಲಿ ಕಿರಿಯಳು, ಆದರೆ ಕನಸು ದೊಡ್ಡದಿದೆ. ಬಾಗಲಕೋಟೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನನ್ನದೇ ಆದ ಕನಸಿದೆ. ಕುಡಚಿ ಬಾಗಲಕೋಟೆ ರೈಲ್ವೆ ಮಾರ್ಗ ಅನುಷ್ಠಾನ, ಯುಕೆಪಿ ಸಂತ್ರಸ್ತರಿಗೆ ಪರಿಹಾರ, ಯುವಕರಿಗೆ ಉದ್ಯೋಗ ಕಲ್ಪಿಸಲು ಕೈಗಾರಿಕೆಗಳ ಸ್ಥಾಪನೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.
ಜಿಪಂ ಮಾಜಿ ಅಧ್ಯಕ್ಷೆ ಬಾಯಕ್ಕ ಮೇಟಿ, ಯುವ ಮುಖಂಡ ಮಲ್ಲಿಕಾರ್ಜುನ ಚರಂತಿಮಠ, ಸಂತೋಷ ಹೊಕ್ರಾಣಿ ಮತ್ತಿತರರು ಇದ್ದರು.