ಗುಣಮಟ್ಟದ ಶಿಕ್ಷಣಕ್ಕೆ ಸಹಕಾರ ನೀಡಿ

KannadaprabhaNewsNetwork | Published : Apr 2, 2024 1:03 AM

ಸಾರಾಂಶ

ಗುಣಮಟ್ಟದ ಶಿಕ್ಷಣಕ್ಕಾಗಿ ನಮ್ಮ ಭಾಗದಿಂದ ಮೂಡಬಿದರಿ, ಉಡುಪಿ, ಮಂಗಳೂರು ವಿದ್ಯಾಕೇಂದ್ರಗಳಿಗೆ ಪ್ರತೀ ವರ್ಷ ನೂರಾರು ವಿದ್ಯಾರ್ಥಿಗಳು ಹೋಗುತ್ತಾರೆ.

ಕನ್ನಡಪ್ರಭ ವಾರ್ತೆ ಮಹಾಲಿಂಗಪುರ

ನಮ್ಮ ಮಕ್ಕಳಿಗೆ ಕಡಿಮೆ ಶುಲ್ಕದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಪ್ರಭುಲಿಂಗೇಶ್ವರ ಇಂಟರ್‌ನ್ಯಾಷನಲ್ ಸ್ಕೂಲ್ಪ್ರಾರಂಭಿಸಲಾಗಿದೆ. ಈ ಶಿಕ್ಷಣ ಸಂಸ್ಥೆಗೆ ಈ ಭಾಗದ ರೈತರು, ಶಿಕ್ಷಣ ಪ್ರೇಮಿಗಳು, ಪಾಲಕರು ಸಹಕಾರ ನೀಡಬೇಕಿದೆ ಎಂದು ಶಾಸಕ ಸಿದ್ದು ಸವದಿ ಹೇಳಿದರು.ಚಿಮ್ಮಡಗ್ರಾಮದ ಶ್ರೀ ಪ್ರಭುಲಿಂಗೇಶ್ವರ ಇಂಟರನ್ಯಾಷನಲ್ ಸ್ಕೂಲ್ ಆವರಣದಲ್ಲಿ ಭಾನುವಾರ ನಡೆದ ಬೇಸಿಗೆ ಶಿಬಿರ ಪ್ರಾರಂಭೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗುಣಮಟ್ಟದ ಶಿಕ್ಷಣಕ್ಕಾಗಿ ನಮ್ಮ ಭಾಗದಿಂದ ಮೂಡಬಿದರಿ, ಉಡುಪಿ, ಮಂಗಳೂರು ವಿದ್ಯಾಕೇಂದ್ರಗಳಿಗೆ ಪ್ರತೀ ವರ್ಷ ನೂರಾರು ವಿದ್ಯಾರ್ಥಿಗಳು ಹೋಗುತ್ತಾರೆ. ಆದ್ದರಿಂದ ನಮ್ಮ ಭಾಗದ ವಿದ್ಯಾರ್ಥಿಗಳ ಜೊತೆಗೆ ಆ ಭಾಗದವರೂ ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ಪಡೆಯುವಂಥಹ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶ ಈ ಶಿಕ್ಷಣ ಸಂಸ್ಥೆ ಹೊಂದಿದೆ. ಇದೇ ಶೈಕ್ಷಣಿಕ ವರ್ಷದಲ್ಲಿ ಶಾಲಾ ಪ್ರವೇಶಾತಿಗಳು ಪ್ರಾರಂಭವಾಗಲಿವೆ ಎಂದರು.

ನಿವೃತ್ತ ಪ್ರಾಂಶುಪಾಲ ಎಸ್.ಎಸ್. ಹೂಲಿ ಮಾತನಾಡಿ, ಪ್ರತಿಯೊಬ್ಬ ಪಾಲಕರು ತಾವು ಎಷ್ಟೆ ತೊಂದರೆಯಲ್ಲಿದ್ದರು ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸುತ್ತಾರೆ. ಅವರ ಶಿಕ್ಷಣ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ ಶಿಕ್ಷಣ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ.ಅವರ ನಿರೀಕ್ಷೆಗೆ ತಕ್ಕ ಮೌಲ್ಯಯುತ ಶಿಕ್ಷಣವನ್ನು ಶಿಕ್ಷಣ ಸಂಸ್ಥೆಗಳು ನೀಡಬೇಕಿದೆ ಎಂದು ಹೇಳಿದರು.

ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ವಿದ್ಯಾಧರ ಸವದಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಬಾಬಾಗೌಡ ಪಾಟೀಲ, ಪುಂಡಲಿಕಪ್ಪ ಪಾಲಭಾವಿ, ಮಹಾಂತೇಶ ಹಿಟ್ಟಿನಮಠ, ಧರೆಪ್ಪಾ ಉಳ್ಳಾಗಡ್ಡಿ, ಮಹಾದೇವ ಧುಪದಾಳ, ಪರಶುರಾಮ ಬಸವ್ವಗೋಳ, ಮಾದುಗೌಡ ಪಾಟೀಲ, ಪರಪ್ಪಾ ಬ್ಯಾಕೋಡ, ಗಣಪತರಾವ್ ಹಜಾರೆ, ಶ್ರೀಶೈಲ ಬೀಳಗಿ, ರಾಮಣ್ಣ ಬಗನಾಳ, ಪುಂಡಲಿಕಪ್ಪ ಪೂಜಾರಿ, ಬಾಳಪ್ಪಾ ಹಳಿಂಗಳಿ, ಪರಪ್ಪಾ ಪಾಲಭಾವಿ ಸೇರಿದಂತೆ ಹಲವಾರು ಜನ ಪ್ರಮುಖರು ವೇದಿಕೆಯಲ್ಲಿದ್ದರು.

Share this article