ಕನ್ನಡಪ್ರಭ ವಾರ್ತೆ ಮಂಗಳೂರು ಇಸ್ರೇಲ್‌ನಲ್ಲಿ ಯುದ್ಧದ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಅಲ್ಲಿರುವ ದ.ಕ.ಜಿಲ್ಲೆಯ ಕನ್ನಡಿಗರ ನೆರವಿಗೆ ಜಿಲ್ಲಾಡಳಿತ ಕಂಟ್ರೋಲ್ ರೂಂ ತೆರೆದಿದೆ. ಇಸ್ರೇಲ್‌ನಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರೆ ಉದ್ದೇಶಗಳಿಗೆ ತೆರಳಿರುವ ಮತ್ತು ಅಲ್ಲಿ ವಾಸವಿರುವ ದ.ಕ.ಜಿಲ್ಲೆಗೆ ಸಂಬಂಧಿಸಿದ ನಾಗರಿಕರು ಇದ್ದಲ್ಲಿ ಅವರ ಬಗ್ಗೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ತೆರೆದಿರುವ ಕಂಟ್ರೋಲ್ ರೂಂಗೆ ಮಾಹಿತಿ ನೀಡುವಂತೆ ಕೋರಲಾಗಿದೆ. ಕಂಟ್ರೋಲ್ ರೂಂ ಸಂಖ್ಯೆ-1077, 0824-2442590ಗೆ ಕರೆ ಮಾಡಿ ಕೂಡಲೇ ಮಾಹಿತಿ ನೀಡುವಂತೆ ತಿಳಿಸಲಾಗಿದೆ. ಅಥವಾ ರಾಜ್ಯ ಸರ್ಕಾರದ ತುರ್ತು ಸಂಪರ್ಕ ಸಂಖ್ಯೆ 080-22340676, 22253707 ಮಾಹಿತಿ ನೀಡುವಂತೆ ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.