ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲಾಡಳಿತದ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ಜನವರಿ 26 ರಂದು ಜರುಗಲಿರುವ ಗಣರಾಜ್ಯೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ತಿಳಿಸಿದರು.ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಈ ಕುರಿತು ಜರುಗಿದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಡಳಿತ ಭವನದ ಕಟ್ಟಡದ ಮೇಲೆ ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ, 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ಹಾಗೂ ಸಚಿವರಿಂದ ಗಣರಾಜ್ಯೋತ್ಸವದ ಸಂದೇಶದ ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಪಥಸಂಚಲನ ಕಾರ್ಯಕ್ರಮದಲ್ಲಿ ಪೊಲೀಸ್, ಗೃಹರಕ್ಷಕ ದಳ, ಸೇವಾದಳ, ಸ್ಕೌಟ್ ಆ್ಯಂಡ್ ಗೈಡ್ಸ್, ಎನ್.ಸಿ.ಸಿ. ಕೆಡೆಟ್‌ಗಳನ್ನು ಆಹ್ವಾನಿಸಲು ಸೂಚಿಸಲಾಯಿತು. ಧ್ವಜಾರೋಹಣ ವ್ಯವಸ್ಥೆ ಮಾಡಲು ಭಾರತ ಸೇವಾದಳ, ಪೊಲೀಸ್ ಇಲಾಖೆ, ತಹಸೀಲ್ದಾರ್ ಹಾಗೂ ಯುವಜನ ಸೇವಾ ಹಾಗೂ ಕ್ರೀಡಾಧಿಕಾರಿಗಳಿಗೆ ವಹಿಸಲಾಯಿತು. ಕಾರ್ಯಕ್ರಮಗಳ ಸಿದ್ಧತೆಗೆ ಸಮಿತಿಗಳನ್ನು ರಚಿಸಲಾಗಿದ್ದು, ಪೂರ್ವ ತಯಾರಿಗಾಗಿ ಉಪ ಸಮಿತಿಗಳ ಸಭೆ ಕರೆದು ಬೇಕಾಗುವ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚಿಸಿದರು.ಸಂಪೂರ್ಣವಾಗಿ ಪ್ಲಾಸ್ಟಿಕ್ ಧ್ವಜ ಬಳಸುವುದನ್ನು ಹಾಗೂ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದ್ದು, ಶಾಲಾ ಮಕ್ಕಳಿಗೆ ಪ್ಲಾಸ್ಟಿಕ್ ಧ್ವಜಗಳನ್ನು ತರುವುದನ್ನು ನಿರ್ಭಂದಿಸುವ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕ್ರಮಕೈಗೊಳ್ಳುವಂತೆ ಸಭೆಯಲ್ಲಿ ತಿಳಿಸಲಾಯಿತು. ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಾಣ, ಗಣ್ಯರಿಗೆ ಶಾಸಕರಿಗೆ, ಸಂಸದರುಗಳಿಗೆ ಹಾಗೂ ಪತ್ರಕರ್ತರಿಗೆ ಸೂಕ್ತ ಆಸನಗಳ ವ್ಯವಸ್ಥೆ, ಧ್ವನಿವರ್ಧಕ ಹಾಗೂ ಜನರೇಟರ್ ವ್ಯವಸ್ಥೆಯನ್ನು ಕೈಗೊಳ್ಳಲು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ ಭವನ ಹಾಗೂ ತಾಲೂಕು ಭವನಕ್ಕೆ ವಿದ್ಯುತ್ ಅಲಂಕಾರ ಮಾಡುವಂತೆ ತಿಳಿಸಲಾಯಿತು.
ಸದರಿ ದಿನದಂದು ಪೊಲೀಸ್ ಬಂದೂಬಸ್ತ್ ವ್ಯವಸ್ಥೆ ಮಾಡುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಯಿತು. ರಾಷ್ಟ್ರೀಯ ಕಾರ್ಯಕ್ರಮವಾಗಿರುವದರಿಂದ ಜಿಲ್ಲೆಯ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಹಾಜರಾಗಿ ಕಾರ್ಯಕ್ರಮ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿಗಳು ಕರೆ ನೀಡಿದರು.ಸಭೆಯಲ್ಲಿ ಯುಕೆಪಿ ಡಿಜಿಎಂ ಎಸ್.ಪಿ.ಘಂಟಿ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಚನಬಸಪ್ಪ ಕೊಡ್ಲಿ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜಶೇಖರ ಪಟ್ಟಣಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ ಜೈನಾಪೂರ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ, ತಹಸೀಲ್ದಾರ್ ಅಮರೇಶ ಪಮ್ಮಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.
---ಬಾಕ್ಸ್‌ವಿವಿಧ ಕ್ಷೇತ್ರ ಸಾಧಕರಿಗೆ ಸನ್ಮಾನವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿಗಳಿಗೆ ಸನ್ಮಾನಿಸಲು ತೀರ್ಮಾನಿಸಲಾಯಿತು. ರಾಷ್ಟ್ರಕವಿ ಕುವೆಂಪುರವರ ವಿರಚಿತ ನೇಗಿಲಯೋಗಿ ಹಾಡನ್ನು ರಾಷ್ಟ್ರಗೀತೆ ನಂತರ ಪರಿಣಿತ ಕಲಾವಿದರಿಂದ ಹಾಡಿಸಲು ತಳಿಸಲಾಯಿತು. ಶಾಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಣೆ ಮಾಡುವುದು, ಗಣರಾಜ್ಯೋತ್ಸವ ದಿನದಂದು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ರಿಯರ್ಸಲ್ ದಿನದಂದು ಕ್ರೀಡಾಂಗಣಕ್ಕೆ ಹೋಗಿ ಬರಲು ರಿಯಾಯಿತಿ ದರದಲ್ಲಿ ವಾಹನ ವ್ಯವಸ್ಥೆಯನ್ನು ಮಾಡುವಂತೆ ವಾಯವ್ಯ ರಾಜ್ಯ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಡಿಸಿ ತಿಳಿಸಿದರು.\--(ಫೋಟೋ 4ಬಿಕೆಟಿ7,