ಕನ್ನಡಪ್ರಭ ವಾರ್ತೆ ಮುಳಬಾಗಿಲುಬಾಂಗ್ಲಾ ದೇಶದಲ್ಲಿ ಹಿಂದುಗಳ ರಕ್ಷಣೆಗೆ ಹಾಗೂ ಭಾರತದಲ್ಲಿರುವ ಬಾಂಗ್ಲಾದೇಶದ ವಲಸಿಗರನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.ಕಳೆದ ಎರಡು ವರ್ಷದಿಂದ ಬಾಂಗ್ಲಾದೇಶದಲ್ಲಿ ಹಿಂದೂಗಳ ನರಮೇದ ನಡೆಯುತ್ತಿದ್ದು, ಹಿಂದೂಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ, ಇತ್ತೀಚೆಗೆ ಏನು ತಪ್ಪು ಮಾಡದ ಹಿಂದೂ ಯುವಕರಾದ ದೀಪು ಚಂದ್ರಹಾಸ್ ಮತ್ತು ಅಮೃತ್ ಮಂಡಲ್ ಅವರನ್ನು ಇಸ್ಲಾಮಿಕ್ ಜಿಹಾದಿಗಳು ಅತ್ಯಂತ ಕ್ರೂರವಾಗಿ ಸಾಯಿಸಿ ಬೆಂಕಿ ಹಚ್ಚುವ ಮೂಲಕ ವಿಕೃತಿ ಮೆರೆದಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಬಾಂಗ್ಲಾ ವಲಸಿಗರ ಗಡಿಪಾರು ಮಾಡಿರಾಜ್ಯ ಸರ್ಕಾರ, ರಾಜ್ಯ ಗೃಹ ಇಲಾಖೆ ರಾಜ್ಯದಲ್ಲಿ ಅಡಗಿರುವ ಅಕ್ರಮ ಅಲ್ಪಸಂಖ್ಯಾತ ಬಾಂಗ್ಲಾದೇಶದ ವಸಿಗರನ್ನು ಗಡಿಪಾರು ಮಾಡಿ ಹಿಂದುಗಳ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.ನಗರದ ಪುರಾಣ ಪ್ರಸಿದ್ಧ ಶ್ರೀ ಅರ್ಜುನ ಪ್ರತಿಷ್ಠಾಪಿತ ಆಂಜನೇಯ ಸ್ವಾಮಿ ದೇವಸ್ಥಾನದ ಅಧೀನ ಸ್ವತ್ತುಗಳ ಹಾಗೂ ರಥಬೀದಿಯ ಹೆಸರುಗಳನ್ನು ಬದಲಾಯಿಸುವುದನ್ನು ಕೂಡಲೇ ಸರಿಪಡಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.
ತಹಸೀಲ್ದಾರ್ ವಿ.ಗೀತಾ ರವರು ಪ್ರತಿಭಟನಾಕಾರರಿಂದ ಮನವಿ ಪತ್ರ ಸ್ವೀಕರಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಬೇಡಿಕೆಗಳ ಮನವಿಪತ್ರ ಸಲ್ಲಿಸಿ ನ್ಯಾಯ ದೊರಕಿಸಿ ಕೊಡುವುದಾಗಿ ಭರವಸೆ ನೀಡಿದರು.ಪ್ರತಿಭಟನೆಯಲ್ಲಿ ಹಿಂದೂಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಂಕರ್ ಕೇಸರಿ, ಬಿಜೆಪಿ ಮುಖಂಡ ಪಳ್ಳಿಗರಪಾಳ್ಯ ಎಂ.ವೆಂಕಟೇಶ್, ನಂದ ಕಿಶೋರ್, ಭಜರಂಗದಳ ಜಿಲ್ಲಾ ಸಂಯೋಜಕ ಆರ್.ವಿಶ್ವನಾಥ್, ನಗರ ಸಂಯೋಜಕ ಎಸ್.ಮಂಜುನಾಥ್, ಮುಖಂಡರಾದ ಮೈಕ್ ಶಂಕರ್, ಬಿಜೆಪಿ ತಾಲೂಕಾಧ್ಯಕ್ಷ ಮೈಸೂರು ಸುರೇಶ್ ರಾಜು, ಮಾಜಿ ಅಧ್ಯಕ್ಷ ಕಲ್ಲುಪಲ್ಲಿ ಕೆ.ಜಿ.ಮೋಹನ್ಇ ಮತ್ತಿತರರು ಇದ್ದರು.