ಪ್ರೌಢಶಾಲಾ ಸಹ ಶಿಕ್ಷಕರ ವೇತನ ಹೆಚ್ಚಳಕ್ಕೆ ಒತ್ತಾಯ

KannadaprabhaNewsNetwork |  
Published : Mar 14, 2026, 01:30 AM IST
13ಎಚ್ಎಸ್ಎನ್4 :  | Kannada Prabha

ಸಾರಾಂಶ

ಶಿಕ್ಷಕರ ಮತ್ತು ಪದವೀಧರ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರು ಹಾಗೂ ಸಂಘದ ಮನವಿಯನ್ನು ಪರಿಗಣಿಸಿ, ಎಸ್‌ಎಸ್‌ಎಲ್‌ಸಿ ಫಲಿತಾಂಶ ನಿರ್ಣಯ ಮಾನದಂಡವನ್ನು ದೇಶದ ಇತರ ರಾಜ್ಯಗಳಲ್ಲಿರುವಂತೆಯೇ ನಮ್ಮ ರಾಜ್ಯದಲ್ಲೂ ಶೇ.೩೩ ಅಂಕಗಳಿಗೆ ಇಳಿಸುವ ಮೂಲಕ ಮಕ್ಕಳ ಉತ್ತಮ ಭವಿಷ್ಯಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇದೇ ಕಾರಣದಿಂದ ಈ ವರ್ಷ ರಾಜ್ಯದಲ್ಲಿ ಫಲಿತಾಂಶ ಶೇ.೯೦ರಷ್ಟು ಮೀರಲಿದೆ. ಇದರಿಂದ ಮಕ್ಕಳ ಶೈಕ್ಷಣಿಕ ಮಟ್ಟ ಕಡಿಮೆಯಾಗುತ್ತದೆ ಎನ್ನುವುದಾದರೆ ದೇಶಾದ್ಯಂತ ಎಲ್ಲ ರಾಜ್ಯಗಳಲ್ಲೂ ಶೇ. ೩೫ರ ಮಾದರಿಯನ್ನೇ ಮಾಡುವಂತೆಯೂ ನಾವು ಒತ್ತಾಯಿಸಿದ್ದೇವೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ತಾಂತ್ರಿಕ ಶಾಲಾ ಶಿಕ್ಷಕರಿಗೆ ಇರುವ ಮೂಲವೇತನ ಶ್ರೇಣಿಯನ್ನು ಪ್ರೌಢಶಾಲಾ ಸಹ ಶಿಕ್ಷಕರಿಗೆ ಮತ್ತು ತತ್ಸಮಾನ ವೃಂದದ ಶಿಕ್ಷರಿಗೆ ನೀಡಬೇಕು ಎಂದು ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ನೂತನ ಪ್ರಧಾನ ಕಾರ್‍ಯದರ್ಶಿ ದೇವರಾಜೇಗೌಡ ಒತ್ತಾಯಿಸಿದರು.

ಶಿಕ್ಷಕರ ಮತ್ತು ಪದವೀಧರ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರು ಹಾಗೂ ಸಂಘದ ಮನವಿಯನ್ನು ಪರಿಗಣಿಸಿ, ಎಸ್‌ಎಸ್‌ಎಲ್‌ಸಿ ಫಲಿತಾಂಶ ನಿರ್ಣಯ ಮಾನದಂಡವನ್ನು ದೇಶದ ಇತರ ರಾಜ್ಯಗಳಲ್ಲಿರುವಂತೆಯೇ ನಮ್ಮ ರಾಜ್ಯದಲ್ಲೂ ಶೇ.೩೩ ಅಂಕಗಳಿಗೆ ಇಳಿಸುವ ಮೂಲಕ ಮಕ್ಕಳ ಉತ್ತಮ ಭವಿಷ್ಯಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇದೇ ಕಾರಣದಿಂದ ಈ ವರ್ಷ ರಾಜ್ಯದಲ್ಲಿ ಫಲಿತಾಂಶ ಶೇ.೯೦ರಷ್ಟು ಮೀರಲಿದೆ. ಇದರಿಂದ ಮಕ್ಕಳ ಶೈಕ್ಷಣಿಕ ಮಟ್ಟ ಕಡಿಮೆಯಾಗುತ್ತದೆ ಎನ್ನುವುದಾದರೆ ದೇಶಾದ್ಯಂತ ಎಲ್ಲ ರಾಜ್ಯಗಳಲ್ಲೂ ಶೇ. ೩೫ರ ಮಾದರಿಯನ್ನೇ ಮಾಡುವಂತೆಯೂ ನಾವು ಒತ್ತಾಯಿಸಿದ್ದೇವೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಸರಕಾರಿ ಮತ್ತು ಅನುದಾನಿತ ಪ್ರೌಢಶಾಲಾ ತರಗತಿಗಳ ವಿದ್ಯಾರ್ಥಿ ಮತ್ತು ಶಿಕ್ಷಕರ ಅನುಪಾತವನ್ನು ೭೦:೧ರ ಬದಲಿಗೆ ೪೦:೧ರಂತೆ ನಿಗದಿಪಡಿಸುವ ಮೂಲಕ ಶೈಕ್ಷಣಿಕ ಗುಣಮಟ್ಟ ಇನ್ನಷ್ಟು ಹೆಚ್ಚಿಸಲು ಅನುಕೂಲ ಮಾಡಿಕೊಡುವಂತೆ ಸರಕಾರವನ್ನು ಒತ್ತಾಯಿಸಲಾಗುವುದು, ಪ್ರಸ್ತುತ ೮ ಮತ್ತು ೯ನೇ ತರಗತಿ ಪರೀಕ್ಷೆ ನಡೆಸಲು ಸೂಕ್ತ ಸಮಯಾವಕಾಶ ನೀಡಬೇಕು ಎಂದರು.ಅನುದಾನಿತ ಶಾಲಾ ಶಿಕ್ಷಕರಿಗೂ ಸರಕಾರಿ ನೌಕರರಿಗೆ ಇರುವಂತೆ ೨೫ ಸಾವಿರ ರು. ಹಬ್ಬದ ಮುಂಗಡ ಸೌಲಭ್ಯ ನೀಡಬೇಕು. ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ೨೦೧೫ರಿಂದ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲು ಅನುಮತಿ ನೀಡಬೇಕು. ರಾಜ್ಯದಲ್ಲಿ ದ್ವಿಭಾಷಾ ಸೂತ್ರವನ್ನು ಅಳವಡಿಸುವ ಸಂದರ್ಭ ಬಂದರೆ ಹಿಂದಿ ಭಾಷಾ ಶಿಕ್ಷಕರ ಹುದ್ದೆಗೆ ಧಕ್ಕೆಯಾಗದಂತೆ ಕಾಳಜಿವಹಿಸಬೇಕು ಎಂದು ಒತ್ತಾಯಿಸಿದರು.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಡಿ. ಎನ್. ರವಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಪ್ರಧಾನ ಕಾವ್ಯದರ್ಶಿ ಎಲ್. ಆರ್‌.ಸತೀಶ್, ಎಚ್. ಎನ್. ಕೇಶವಮೂರ್ತಿ, ಗುರುರಾಜ್, ಉಮೇಶ್, ರಂಗಸ್ವಾಮಿ, ಪುರು?ತ್ತಮ್ ಇತರರಿದ್ದರು.ಪ್ರಧಾನ ಕಾರ್ಯದರ್ಶಿಯಾಗಿ ಅವಿರೋಧ ಆಯ್ಕೆ:ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್‍ಯದರ್ಶಿಯಾಗಿ ಚನ್ನರಾಯಪಟ್ಟಣದ ಪೇಟೆ ಸರಕಾರಿ ಪ್ರೌಢಶಾಲೆಯ ಕನ್ನಡ ಭಾಷಾಶಿಕ್ಷಕ ದೇವರಾಜೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಶಿಕ್ಷಕ ಸದನದಲ್ಲಿ ರಾಜ್ಯಾಧ್ಯಕ್ಷ ಬಿ.ಸಿದ್ದಬಸಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು. ಜತೆಯಲ್ಲಿಯೇ ಸಹ ಕಾವ್ಯದರ್ಶಿಯಾಗಿ ಟಿ. ಕೆ. ಪ್ರಕಾಶ್ ಅವರನ್ನೂ ಆಯ್ಕೆ ಮಾಡಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯ ಅಗತ್ಯ
ಪಂ.ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದ ಯೋಜನಾ ಸಭೆ