ಕನ್ನಡಪ್ರಭ ವಾರ್ತೆ ಬೆಳಗಾವಿ
ಶಿವಾಜಿ ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕಚೇರಿಯ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಅಂಗನವಾಡಿ ಕಟ್ಟಡಗಳ ದುರಸ್ಥಿ, ಪುನರ್ ನಿರ್ಮಾಣ ಹಾಗೂ ಸುಸ್ಥಿತಿಯಲ್ಲಿರುವ ಕೇಂದ್ರಗಳ ಬಗ್ಗೆ ಮಾಹಿತಿ ಪಡೆದ ಅವರು, ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿರುವ ಅಂಗನವಾಡಿ ಕೇಂದ್ರಗಳನ್ನು ಸರ್ಕಾರಿ ಶಾಲೆಗಳಿಗೆ ಸ್ಥಳಾಂತರಿಸಬೇಕು ಎಂದು ಸೂಚಿಸಿದರು.
ಅಂಗನವಾಡಿ ಮಕ್ಕಳು ಶಾಲೆಗಳಲ್ಲಿ ಇರುವುದರಿಂದ ಶಾಲೆಯ ವಾತಾವರಣದಲ್ಲಿ ಬೇಗ ಬೆರೆಯುತ್ತವೆ. ಅಂಗನವಾಡಿ ಕಟ್ಟಡಗಳು ಮೂಲಭೂತ ಸೌಕರ್ಯಗಳಿಂದ ವಂಚಿತ ಆಗಬಾರದು. ಕಡ್ಡಾಯವಾಗಿ ಸೌಕರ್ಯಗಳನ್ನು ಒದಗಿಸಬೇಕು. ಉತ್ತಮ ಗಾಳಿ, ಬೆಳಕು, ಶುದ್ಧ ನೀರು ಒದಗಿಸುವಂತೆ ಸೂಚಿಸಿದರು.ಪ್ರತಿ 3 ತಿಂಗಳಿಗೊಮ್ಮೆ ಅಂಗನವಾಡಿ ಕೇಂದ್ರಗಳಿಗೆ ವೈದ್ಯಾಧಿಕಾರಿಗಳು ಭೇಟಿ ನೀಡಿ ಮಕ್ಕಳ ಆರೋಗ್ಯದ ಬಗ್ಗೆ ತಪಾಸಣೆ ನಡೆಸಬೇಕು. ತೂಕ ಕಡಿಮೆ ಸೇರಿದಂತೆ ಯಾವುದೇ ಆರೋಗ್ಯದ ಸಮಸ್ಯೆ ಕಂಡು ಬಂದರೆ ಚಿಕಿತ್ಸೆ ನೀಡಬೇಕು ಹಾಗೂ ಅಪೌಷ್ಠಿಕತೆ ಇರುವ ಮಕ್ಕಳನ್ನು ಎನ್‌ಆರ್‌ಸಿ, ಎಂಎನ್‌ಆರ್‌ಸಿಗೆ ಕಳುಹಿಸಿ ಚಿಕಿತ್ಸೆ ಕೊಡಿಸಲು ನಿರ್ದೇಶನ ನೀಡಿದರು.
ಅದೇ ರೀತಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಾತಿ ಪರಿಶೀಲಿಸಿದ ಜಿಪಂ ಸಿಇಒ ರಾಹುಲ್ ಶಿಂಧೆ ಅವರು ಸಿಬ್ಬಂದಿ ಕಾರ್ಯವೈಖರಿ ಕುರಿತು ಮಾಹಿತಿ ಪಡೆದುಕೊಂಡರು.
ಕೋಟ್: ಅಂಗನವಾಡಿ ಮಕ್ಕಳು ಶಾಲೆಗಳಲ್ಲಿ ಇರುವುದರಿಂದ ಶಾಲೆಯ ವಾತಾವರಣದಲ್ಲಿ ಬೇಗ ಬೆರೆಯುತ್ತವೆ. ಅಂಗನವಾಡಿ ಕಟ್ಟಡಗಳು ಮೂಲಭೂತ ಸೌಕರ್ಯಗಳಿಂದ ವಂಚಿತ ಆಗಬಾರದು. ಕಡ್ಡಾಯವಾಗಿ ಸೌಕರ್ಯಗಳನ್ನು ಒದಗಿಸಬೇಕು. ಉತ್ತಮ ಗಾಳಿ, ಬೆಳಕು, ಶುದ್ಧ ನೀರು ಒದಗಿಸಬೇಕು. ರಾಹುಲ ಶಿಂಧೆ. ಜಿಪಂ ಸಿಇಒ