ಮಹಿಳಾ ಶಿಕ್ಷಣಕ್ಕೆ ಹೋರಾಡಿದ ಸಾವಿತ್ರಿಬಾಯಿ ಫುಲೆ

KannadaprabhaNewsNetwork |  
Published : Jan 07, 2025, 12:32 AM IST
06ಬಿಜಿಪಿ-1 | Kannada Prabha

ಸಾರಾಂಶ

ಹಿಂದುಳಿದ ಸಮುದಾಯಗಳನ್ನು ಸಬಲೀಕರಣಗೊಳಿಸಲು ಅನೇಕ ಅಡೆತಡೆಗಳನ್ನು ಮುರಿದ ಸಾವಿತ್ರಿಬಾಯಿ ಫುಲೆ ಅವರು ತಮ್ಮ ಪತಿ ಜ್ಯೋತಿರಾವ್ ಫುಲೆಯೊಂದಿಗೆ ಪುಣೆಯಲ್ಲಿ ಮೊದಲ ಬಾಲಕಿಯರ ಶಾಲೆಯನ್ನು ಸ್ಥಾಪಿಸಿದರು, ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಕ್ರಾಂತಿಕಾರಿ ಚಳುವಳಿಯನ್ನು ಪ್ರಾರಂಭಿಸಿ ಸಾಂಪ್ರದಾಯಿಕ ಯುಗದಲ್ಲಿ ಮಹಿಳೆಯರ ಹಕ್ಕು ಮತ್ತು ನ್ಯಾಯಕ್ಕಾಗಿ ನಿರ್ಭಯವಾಗಿ ಬೋಧಿಸಿದರು.

ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ

ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ಅಕ್ಷರ ಕ್ರಾಂತಿಯ ಫಲವಾಗಿ ಇಂದು ಭಾರತ ದೇಶದ ಎಲ್ಲಾ ಸಮುದಾಯದ ಮಹಿಳೆಯರಿಗೆ ಅಕ್ಷರ ಕಲಿಯುವ ಹಕ್ಕು ದೊರೆತಿದೆ. ಮಹಿಳೆಯರಿಗೆ ಅಕ್ಷರ ಕಲಿಕೆ ಹಕ್ಕು ಕಲ್ಪಿಸಿದ ಸಾವಿತ್ರಿಬಾಯಿ ಪುಲೆ ರವರನ್ನು ಸದಾ ನೆನಪಿಸಿಕೊಳ್ಳುವುದು ದೇಶದ ಪ್ರತಿಯೊಬ್ಬ ಮಹಿಳೆಯರ ಕರ್ತವ್ಯ ಎಂದು ಶ್ರೀ ಯೋಗಿ ನಾರಾಯಣ ಬಲಿಜ ಟ್ರಸ್ಟ್ ಅಧ್ಯಕ್ಷ ಹಾಗೂ ಹಿರಿಯ ವಕೀಲರಾದ ಎ. ಜಿ. ಸುಧಾಕರ್ ತಿಳಿಸಿದರು.

ಪಟ್ಟಣದ ಹೊರವಲಯದ ಗಡಿದಂ ಶ್ರೀ ರಾಜರಾಜೇಶ್ವರಿ ಫಂಕ್ಷನ್ ಹಾಲ್‍ನಲ್ಲಿ ಶ್ರೀ ಯೋಗಿ ನಾರಾಯಣ ಬಲಿಜ ಟ್ರಸ್ಟ್ ವತಿಯಿಂದ ಏರ್ಪಡಿಸಲಾಗಿದ್ದ ಶ್ರೀಮತಿ ಸಾವಿತ್ರಿ ಬಾಯಿ ಫುಲೆ ರವರ 194ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಸಾವಿತ್ರಿ ಬಾಯಿ ಫುಲೆ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಹಿಂದುಳಿದ ಸಮುದಾಯಗಳನ್ನು ಸಬಲೀಕರಣಗೊಳಿಸಲು ಅನೇಕ ಅಡೆತಡೆಗಳನ್ನು ಮುರಿದ ಸಾವಿತ್ರಿಬಾಯಿ ಫುಲೆ ಅವರು ತಮ್ಮ ಪತಿ ಜ್ಯೋತಿರಾವ್ ಫುಲೆಯೊಂದಿಗೆ ಪುಣೆಯಲ್ಲಿ ಮೊದಲ ಬಾಲಕಿಯರ ಶಾಲೆಯನ್ನು ಸ್ಥಾಪಿಸಿದರು, ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಕ್ರಾಂತಿಕಾರಿ ಚಳುವಳಿಯನ್ನು ಪ್ರಾರಂಭಿಸಿ ಸಾಂಪ್ರದಾಯಿಕ ಯುಗದಲ್ಲಿ ಮಹಿಳೆಯರ ಹಕ್ಕು ಮತ್ತು ನ್ಯಾಯಕ್ಕಾಗಿ ನಿರ್ಭಯವಾಗಿ ಬೋಧಿಸಿದರು ಮತ್ತು ಪ್ರತಿಪಾದಿಸಿದ್ದರು ಎಂದರು.

ಈ ಸಂಧರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ವೆಂಕಟೇಶಪ್ಪ, ಸುಕನ್ಯಾ, ರಾಜರಾಜೇಶ್ವರಿ, ಎನ್.ನಾರಾಯಣ ಸ್ವಾಮಿ, ಆರ್. ವೆಂಕಟರಾವiಪ್ಪ, ನಾರಾಯಣ, ಎಲ್. ಭಾಸ್ಕರ್, ವೆಂಕಿ, ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು