ಕನ್ನಡಪ್ರಭ ವಾರ್ತೆ ಬೆಳಗಾವಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಶುಕ್ರವಾರ ನಡೆದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸವಿತಾ ಮಹರ್ಷಿಯು ರಥಸಮ್ತಿಯ ದಿನ ಮಾಘ ಮಾಸದ ಶುಕ್ಲ ಪಕ್ಷದಲ್ಲಿ ಜನಿಸಿದರು. ಶಿವನ ಎಡಗಣ್ಣನ್ನು ಚಂದ್ರನಿಗೆ ಬಲಗಣ್ಣನ್ನು ಸೂರ್ಯನಿಗೆ ಹೋಲಿಸಲಾಗುತ್ತದೆ. ಶಿವನ ಬಲಗಣ್ಣಿನಿಂದ ಜನಿಸಿದವನೇ ಸವಿತಾ ಮಹರ್ಷಿ ಎಂದು ಸಮಾಜದ ನಂಬಿಕೆಯಾಗಿದೆ. ಪುರಾಣದ ಪ್ರಕಾರ ಶಿವನು ಅತಿಯಾಗಿ ಬೆಳೆದ ಕೂದಲುಗಳಿಂದ ತೊಂದರೆ ಅನುಭವಿಸುತ್ತಿದ್ದಾಗ ಪಾರ್ವತಿ ದೇವಿಯ ಸಲಹೆಯಂತೆ ತನ್ನ ಎಡಗಣ್ಣಿನಿಂದ ಕ್ಷೌರಿಕರ ಮೂಲಪುರುಷ ಸವಿತಾ ಮಹರ್ಷಿಯನ್ನು ಸೃಷ್ಠಿ ಮಾಡಲಾಯಿತು ಎಂದು ಹೇಳಲಾಗುತ್ತದೆ.ಶಿವ ನಯನದಿಂದ ಜನಿಸಿದ್ದರಿಂದ ಈ ಜನಾಂಗವನ್ನು ಹಲವಾರು ಹೆಸರುಗಳಿಂದ ಕರೆಯುತ್ತಾರೆ. ಮಹರ್ಷಿಯ ಸೇವೆಯಿಂದ ತೃಪ್ತನಾದ ಶಿವನು ಸಂಗೀತ ಸಾಧನಗಳನ್ನು ನೀಡಿದನು. ಸವಿತಾ ಮಹರ್ಷಿಯು ನಾಲ್ಕು ವೇದಗಳಲ್ಲಿ ಒಂದಾದ ಸಾಮವೇದವನ್ನು (ಸಾಮ ಎಂದರೆ ಸಂಗೀತಾ ಹಾಗೂ ವೇದ ಎಂದರೆ ಜ್ಞಾನ) ರಚಿಸಿದರು.
ಬೆಳಗಾವಿ ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಶೇಖರ ರೆಡ್ಡಿ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ದಲಿತ ಸಮಾಜದ ಮುಖಂಡ ಮಲ್ಲೇಶ ಚೌಗಲಾ, ಸಮಾಜದ ಮುಖಂಡರಾದ ಗೋಪಿ ಕಡಪಾ, ಗೀತಾ ರೆಡ್ಡಿ, ಆರತಿ ರೆಡ್ಡಿ ಹಾಗೂ ಮತ್ತಿತರು ಕಾರ್ಯಕ್ರಮದಲ್ಲಿ ಇದ್ದರು.