ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಿ

KannadaprabhaNewsNetwork |  
Published : May 26, 2026, 01:45 AM IST
25ಎಚ್ಎಸ್ಎನ್10 :  | Kannada Prabha

ಸಾರಾಂಶ

ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಗಿಡ ನೆಡುವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಯಶಸ್ವಿಯಾಗಿ ನಡೆಸಲಾಯಿತು. ಹಾಸನ ಜಿಲ್ಲಾ ವಕೀಲರ ಸಂಘದ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ನಡೆದ ಸ್ವಚ್ಛತಾ ಕಾರ್ಯದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ವಯಂಸೇವಕರು ಉತ್ಸಾಹದಿಂದ ಭಾಗವಹಿಸಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರಿದರು. ಬಳಿಕ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಹಸಿರು ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಇದೇ ವೇಳೆ ಹಾಸನಾಂಬ ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಕೆ. ಮೋಹನ್ ಕುಮಾರ್ ಮಾತನಾಡಿ, ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಕಾರ್ಯಕ್ರಮದಲ್ಲಿ ಸುಮಾರು ೨೫ಕ್ಕೂ ಹೆಚ್ಚು ಹಣ್ಣಿನ ಗಿಡಗಳನ್ನು ನೆಟ್ಟರು.

ಕನ್ನಡಪ್ರಭ ವಾರ್ತೆ ಹಾಸನವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾ ಕೋರ್ಟ್ ಆವರಣದಲ್ಲಿ ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಗಿಡ ನೆಡುವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಯಶಸ್ವಿಯಾಗಿ ನಡೆಸಲಾಯಿತು. ಹಾಸನಾಂಬಾ ಲಯನ್ಸ್ ಕ್ಲಬ್, ಹಾಸನ ಜಿಲ್ಲಾ ವಕೀಲರ ಸಂಘ, ಹಸಿರು ಭೂ ಪ್ರತಿಷ್ಠಾನ, ಭಾರತ ಜ್ಞಾನ ವಿಜ್ಞಾನ ಸಮಿತಿ ಹಾಗೂ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್‌ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮವು ಸಾರ್ವಜನಿಕರ ಗಮನ ಸೆಳೆಯಿತು. ಹಾಸನ ಜಿಲ್ಲಾ ವಕೀಲರ ಸಂಘದ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ನಡೆದ ಸ್ವಚ್ಛತಾ ಕಾರ್ಯದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ವಯಂಸೇವಕರು ಉತ್ಸಾಹದಿಂದ ಭಾಗವಹಿಸಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರಿದರು. ಬಳಿಕ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಹಸಿರು ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಇದೇ ವೇಳೆ ಹಾಸನಾಂಬ ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಕೆ. ಮೋಹನ್ ಕುಮಾರ್ ಮಾತನಾಡಿ, ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಕಾರ್ಯಕ್ರಮದಲ್ಲಿ ಸುಮಾರು ೨೫ಕ್ಕೂ ಹೆಚ್ಚು ಹಣ್ಣಿನ ಗಿಡಗಳನ್ನು ನೆಡಲಾಗಿದ್ದು, ಅವುಗಳ ಸಂರಕ್ಷಣೆಗೂ ಆದ್ಯತೆ ನೀಡಲಾಗುವುದು. ಪರಿಸರ ರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.ಕಾರ್ಯಕ್ರಮದಲ್ಲಿ ಕ್ಲಬ್ ಖಜಾಂಚಿ ಹರೀಶ್ ಕುಮಾರ್ ಎಂ., ಜಿಲ್ಲಾ ಸಹ ಕಾರ್ಯದರ್ಶಿ ತಿಮ್ಮರಾಯಶೆಟ್ಟಿ, ಲಯನ್ ಎಲ್.ಎಸ್. ಧರಣಿ, ಸ್ವಚ್ಛ ಭಾರತ್ ಚೀಫ್ ಕೋ-ಆರ್ಡಿನೇಟರ್ ರಾಜೇಗೌಡ, ಲಯನ್ ಚಿದಾನಂದ, ಲಯನ್ ರೇವಣ್ಣ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕಾರ್ಲೆ ಮೋಗಣ್ಣಗೌಡ, ಉಪಾಧ್ಯಕ್ಷ ತಿಮ್ಮೇಗೌಡ, ಖಜಾಂಜಿ ಸುಗುಣ, ಹಸಿರುಭೂಮಿ ಪ್ರತಿಷ್ಠಾನದ ಅಧ್ಯಕ್ಷ ವೆಂಕಟೇಗೌಡ, ಕಾರ್ಯದರ್ಶಿ ಗಿರಿಜಾಂಬಿಕ, ಚಿನ್ನಹಳ್ಳಿ ಸ್ವಾಮಿ, ಜಂಟಿ ಕಾರ್ಯದರ್ಶಿ ಮಮತಾ ಪಾಟೀಲ್, ಟ್ರಸ್ಟಿ ದಿನೇಶ್ ಕುಮಾರ್ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಾಲೆಗೆ ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಿ: ಮಧು
ಬಾಗೇಪಲ್ಲಿಯಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಪ್ರತಿಭಟನೆ