ಸಮಾಜದಲ್ಲಿ ಪ್ರತಿಯೊಬ್ಬರಿಗೂ ಸಮಾನತೆ ಸಿಗಬೇಕು

KannadaprabhaNewsNetwork |  
Published : Sep 27, 2025, 12:00 AM IST
26ಎಚ್ಎಸ್ಎನ್12 :  | Kannada Prabha

ಸಾರಾಂಶ

ಸಮಾಜ ಕಲ್ಯಾಣ ಇಲಾಖೆ ಮತ್ತು ಬುಡಕಟ್ಟು ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಏರ್ಪಡಿಸಲಾಗಿದ್ದ ಸಾಮಾಜಿಕ ನ್ಯಾಯದ ಕುರಿತು ಜಿಲ್ಲಾಮಟ್ಟದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಮಾನತೆ ಕುರಿತು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಎಲ್ಲರೂ ಇಂತಹ ಕಾರ್ಯಾಗಾರಗಳಲ್ಲಿ ಭಾಗವಹಿಸುವುದರಿಂದ ನಮ್ಮಲ್ಲಿಯೇ ಒಂದು ಅರಿವು ಮೂಡುತ್ತದೆ. ಹಾಗಾಗಿ ಈ ಕಾರ್ಯಕ್ರಮದ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಿ ಎಂದರು. ಇದೇ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಸಮಾಜದಲ್ಲಿ ಪ್ರತಿಯೊಬ್ಬರಿಗೂ ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಎಲ್ಲದರಲ್ಲಿಯೂ ಸಮಾನತೆ ಸಿಗಬೇಕು ಎಂದು ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಹೇಮಲತಾ ಅವರು ತಿಳಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಮತ್ತು ಬುಡಕಟ್ಟು ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಏರ್ಪಡಿಸಲಾಗಿದ್ದ ಸಾಮಾಜಿಕ ನ್ಯಾಯದ ಕುರಿತು ಜಿಲ್ಲಾಮಟ್ಟದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಮಾನತೆ ಕುರಿತು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಎಲ್ಲರೂ ಇಂತಹ ಕಾರ್ಯಾಗಾರಗಳಲ್ಲಿ ಭಾಗವಹಿಸುವುದರಿಂದ ನಮ್ಮಲ್ಲಿಯೇ ಒಂದು ಅರಿವು ಮೂಡುತ್ತದೆ. ಹಾಗಾಗಿ ಈ ಕಾರ್ಯಕ್ರಮದ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಿ ಎಂದರು. ಇದೇ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.

ತರಬೇತಿ ಸಂಯೋಜಕರಾದ ಡಾ. ಅಬ್ದುಲ್ ವಹಾಬ್ ಮಾತನಾಡಿ, ಪ್ರತಿ ಜಿಲ್ಲೆಯಲ್ಲಿಯೂ ಜಿಲ್ಲಾ ತರಬೇತಿ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ. ಪ್ರತಿ ವರ್ಷವೂ ೬೦೦ರಿಂದ ೭೦೦ ತರಬೇತಿಗಳನ್ನು ಏರ್ಪಡಿಸಿಕೊಂಡು ಬರುತ್ತಿದ್ದೇವೆ. ನಮ್ಮೊಟ್ಟಿಗೆ ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ತರಬೇತಿ ಸಂಸ್ಥೆಗಳು ಒಟ್ಟುಗೂಡಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದೇವೆ. ಈ ಕಾರ್ಯಕ್ರಮದ ಮುಖ್ಯ ಉದ್ದೇಶ ದುರ್ಬಲ ವರ್ಗದವರ ಕುರಿತಾಗಿ ಒಂದು ಸಂವೇದನಾಶೀಲನೆಯನ್ನು ಎಲ್ಲಾ ಅಧಿಕಾರಿ ವರ್ಗದವರಿಗೆ ಮೂಡಿಸುವಂತಹದ್ದಾಗಿದೆ. ಮತ್ತು ದುರ್ಬಲ ವರ್ಗದವರ ಕಷ್ಟಕಾರ್ಪಣ್ಯಗಳಿಗೆ ೩೫ ಇಲಾಖೆಗಳು ಒಳಗೊಂಡಂತೆ ನಾವೆಲ್ಲರೂ ಒಟ್ಟುಗೂಡಿ ಸ್ಪಂದಿಸಬೇಕು ಎಂಬುದು ನಮ್ಮ ಆಡಳಿತ ತರಬೇತಿ ಸಂಸ್ಥೆ ಉದ್ದೇಶವಾಗಿದೆ ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ಸುಸ್ಥಿರ ಸಮಾಜ, ಸಾಮಾಜಿಕ ನ್ಯಾಯದ ಮಹತ್ವ ಮತ್ತು ಪರಿಕಲ್ಪನೆಗಳು ಹಾಗೂ ದೌರ್ಜನ್ಯ ತಡೆ ಕಾಯ್ದೆಗಳು, ಕರ್ನಾಟಕ ಅನುಸೂಚಿತ ಜಾತಿಗಳ ಉಪ ಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆ (ಯೋಜನೆ ರೂಪಿಸುವುದು, ಆರ್ಥಿಕ ಸಂಪನ್ಮೂಲಗಳ ಹಂಚಿಕೆ ಮತ್ತು ಬಳಕೆ) ಅಧಿನಿಯಮ ೨೦೧೩ ಮತ್ತು ನಿಯಮಗಳು ೨೦೧೭ರ ಕುರಿತು, ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವಂತಹ ಕಾರ್ಯಕ್ರಮಗಳ ಕುರಿತಾಗಿ ತರಬೇತಿ ಕುರಿತಾಗಿ ಮಾಹಿತಿಯನ್ನು ಈ ಕಾರ್ಯಾಗಾರದಲ್ಲಿ ತಿಳಿಸಿಕೊಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಮತ್ತಿತರರು ಹಾಜರಿದ್ದರು.

PREV

Recommended Stories

ಹತ್ತು ವರ್ಷವಾದ್ರೂ ನೇಕಾರರ ಮನೆಗಳಿಗಿಲ್ಲ ಮುಕ್ತಿ
ಭೀಮಾನದಿ ನೀರಿನ ಹರಿವು ಮತ್ತೆ ಏರಿಕೆ