ತಾಲೂಕಿನ ಕಡಬಾ ಹೋಬಳಿ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಗಂಗಮ್ಮ ನಾಗೇಶ್ ಅವಿರೋಧವಾಗಿ ಆಯ್ಕೆಯಾದರು.
ಕನ್ನಡಪ್ರಭ ವಾರ್ತೆ ಗುಬ್ಬಿ
ತಾಲೂಕಿನ ಕಡಬಾ ಹೋಬಳಿ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಗಂಗಮ್ಮ ನಾಗೇಶ್ ಅವಿರೋಧವಾಗಿ ಆಯ್ಕೆಯಾದರು. ಈ ವೇಳೆ ಮಾತನಾಡಿದ ಅವರು, ಸರ್ವ ಸದಸ್ಯರ ಸಹಕಾರದಿಂದ ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ಎಲ್ಲ ಹಳ್ಳಿಗಳಿಗೆ ಕುಡಿಯುವ ನೀರು, ಚರಂಡಿ ಸ್ವಚ್ಛತೆ, ರಸ್ತೆ ನಿರ್ಮಾಣ, ಬೀದಿದೀಪ ಸೇರಿದಂತೆ ಗ್ರಾಮ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತೇನೆ. ಇನ್ನೂ ಬೇಸಿಗೆ ಇರುವುದರಿಂದ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುವುದು. ನರೇಗಾ ಕಾಮಗಾರಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ತಾಲೂಕಿನಲ್ಲಿ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ಮಾಡುತ್ತೇನೆ ಎಂದು ತಿಳಿಸಿದರು . ಉಪಾಧ್ಯಕ್ಷೆ ಅನುಸೂಯಾದೇವಿ ಮಾತನಾಡಿ ನಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಿಲ್ಲ ಸರ್ವ ಸದಸ್ಯರ ಸಹಕಾರದಿಂದ ಅಧಿಕಾರ ಇರುವ ಕೆಲವು ತಿಂಗಳಲ್ಲಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಚುನಾವಣಾ ಅಧಿಕಾರಿಯಾಗಿ ಇಓ ಶಿವಪ್ರಕಾಶ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ವಿಜಯ ಗಂಗಾಧರ್, ಸಿದ್ದರಾಮೇಗೌಡ, ಶಿವಸ್ವಾಮಿ ಎ,ಬಿ. ರಾಧಾ ನಟರಾಜು, ಚಂದ್ರಯ್ಯ, ನಯನ ಉಮೇಶ್, ಮಮತಾ, ತಿಮ್ಮಯ್ಯ, ಮೋಹನ್ ಕುಮಾರ್, ಬಸವರಾಜು, ವನಿತಾ, ಪಿಡಿಒ ತನುಜಾ ಬೆನಕಟ್ಟೆ, ಮುಖಂಡರಾದ ಕುಂದರನಹಳ್ಳಿ ಸಿದ್ದಲಿಂಗಯ್ಯ, ಶಶಿಧರ್, ಕುಂದರನಹಳ್ಳಿ ನಟರಾಜು , ಶಿವಶಂಕರ್ ಬಾಬು, ಪಣೀಂದ್ರ ಮುನಿ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.