2025-26 ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಸರಸ್ವತಿ ಪೂಜೆಯನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮವನ್ನು ವೇದಿಕೆಯ ಗಣ್ಯರು ಉದ್ಘಾಟಿಸಿದರು. ನಂತರ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹಾಸನ ಸೈಬರ್ ಕ್ರೈಂ ಠಾಣೆಯ ಉಪ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಸ್ ಪರಶಿವಮೂರ್ತಿ ಮಾತನಾಡಿ ವಿದ್ಯಾರ್ಥಿಗಳು ಈ ವಯಸ್ಸಿನಲ್ಲಿ ನಿರ್ದಿಷ್ಟ ಗುರಿಯನ್ನು ತಲುಪಲು ಪ್ರಯತ್ನಿಸಿ, ಯಶಸ್ಸಿಗೆ ಪ್ರಯತ್ನ ತುಂಬಾ ಮುಖ್ಯ ಎಂದರು.
ಕನ್ನಡಪ್ರಭ ವಾರ್ತೆ ಹಾಸನ
ವಿದ್ಯಾರ್ಥಿ ಜೀವನದಲ್ಲಿ ಪಿಯುಸಿ ಹಂತ ತುಂಬಾ ಮುಖ್ಯವಾದುದು, ಆದ್ದರಿಂದ ಕಾಲೇಜಿನಲ್ಲಿ ನೀಡಿರುವ ತರಬೇತಿಯನ್ನು ಸದ್ಬಳಕೆ ಮಾಡಿಕೊಂಡು ಪರೀಕ್ಷೆಯನ್ನು ಧೈರ್ಯವಾಗಿ ಎದುರಿಸಿ ಎಂದು ಸುಜಲಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಎಸ್ ಲೋಕೇಶ್ ತಿಳಿಸಿದರು.2025-26 ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಸರಸ್ವತಿ ಪೂಜೆಯನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮವನ್ನು ವೇದಿಕೆಯ ಗಣ್ಯರು ಉದ್ಘಾಟಿಸಿದರು. ನಂತರ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹಾಸನ ಸೈಬರ್ ಕ್ರೈಂ ಠಾಣೆಯ ಉಪ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಸ್ ಪರಶಿವಮೂರ್ತಿ ಮಾತನಾಡಿ ವಿದ್ಯಾರ್ಥಿಗಳು ಈ ವಯಸ್ಸಿನಲ್ಲಿ ನಿರ್ದಿಷ್ಟ ಗುರಿಯನ್ನು ತಲುಪಲು ಪ್ರಯತ್ನಿಸಿ, ಯಶಸ್ಸಿಗೆ ಪ್ರಯತ್ನ ತುಂಬಾ ಮುಖ್ಯ ಎಂದರು. ಮತ್ತೋರ್ವ ಅತಿಥಿಯಾಗಿ ಆಗಮಿಸಿದ್ದ ಸುಜಲ ಕಾಲೇಜಿನ ಹಳೆಯ ವಿದ್ಯಾರ್ಥಿ, ಪ್ರಸ್ತುತ ವೈದ್ಯಾಧಿಕಾರಿಯಾಗಿರುವ ಡಾ. ಚಂದನ್ ಮಹೇಶ್ ಮಾತನಾಡಿ, ಸುಜಲ ಶಿಕ್ಷಣ ಸಂಸ್ಥೆ ಎಷ್ಟೋ ಬಡ ವಿದ್ಯಾರ್ಥಿಗಳ ಜೀವನವನ್ನು ಸುಂದರವಾಗಿಸಿದೆ ಎಂದರು. ಸೈಬರ್ ಕ್ರೈಂ ವಿಶ್ಲೇಷಕರಾದ ಪ್ರತಾಪ್ ಡಿ ರಮೇಶ್ ಪ್ರಸ್ತುತ ನಡೆಯುತ್ತಿರುವ ಸೈಬರ್ ಪ್ರಕರಣಗಳ ಕುರಿತು ಜಾಗೃತಿ ಮೂಡಿಸಲು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಿದರು. ಅನಿಸಿಕೆ ಹಂಚಿಕೊಂಡ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ಬೋಧನೆ ಮಾಡಿಸುವ ನೀಟ್, ಸಿಇಟಿ, ಜೆಇಇ ಕೋಚಿಂಗ್ ತುಂಬಾ ಉಪಯುಕ್ತವಾಗಿದೆ.ಕಳೆದ ಬಾರಿ ನಮ್ಮ ಕಾಲೇಜಿನಿಂದ ಎಂಬಿಬಿಎಸ್ ಆಯ್ಕೆಯಾದ 4 ಹಿರಿಯ ವಿದ್ಯಾರ್ಥಿಗಳು ನಮಗೆ ಸ್ಫೂರ್ತಿ ಎಂದರು. ರಾಷ್ಟ್ರ ಮಟ್ಟದ ಈಜು ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ದೇಶ್ನಾ ಪಿ ಶೆಟ್ಟಿ, ರಾಜ್ಯ ಮಟ್ಟದ ಬ್ಯಾಡ್ಮಿಂಟನ್‌ನಲ್ಲಿ ಭಾಗವಹಿಸಿದ ಚೈತ್ರ, ತೇಜಸ್ವಿನಿ ಈ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ಸುಜಲ ಕಪ್ ಕ್ರಿಕೆಟ್ ವಿಜೇತರಿಗೆ ಗಣ್ಯರಿಂದ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ವೇತ ಲೋಕೇಶ್, ಪ್ರಾಂಶುಪಾಲರಾದ ಚಂದನ್ ಜೆ.ಎಮ್ ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.