‘ಗೋ ಬ್ಯಾಕ್ ಲಕ್ಷ್ಮೀ ಅಕ್ಕ’ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

KannadaprabhaNewsNetwork |  
Published : May 17, 2026, 02:30 AM IST
16ಬಿಜೆಪಿ | Kannada Prabha

ಸಾರಾಂಶ

ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಪ್ರತಿಭಟಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಪ್ರತಿಭಟಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಉಡುಪಿ ಜಿಲ್ಲಾ ಪ್ರವಾಸದ ಅಂಗವಾಗಿ ಕೆಡಿಪಿ ಸಭೆಗೆ ಭಾಗವಹಿಸಲು ಬೆಳಗ್ಗೆ ಉಡುಪಿಯಿಂದ ಮಣಿಪಾಲಕ್ಕೆ ಆಗಮಿಸುತ್ತಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಸದಸ್ಯರು ಗೋ ಬ್ಯಾಕ್ ಲಕ್ಷ್ಮೀ ಅಕ್ಕ ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

ಜಿಲ್ಲೆಯ ಅಭಿವೃದ್ಧಿ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಸರ್ಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವೆ ನಿರ್ಲಕ್ಷ್ಯ ತೋರಿದ್ದಾರೆ, ಸಚಿವೆ ಅಪರೂಪವಾಗಿ ಜಿಲ್ಲೆಗೆ ಭೇಟಿ ನೀಡುತ್ತಿರುವುದರಿಂದ ಇಲ್ಲಿನ ಜನರ ಸಮಸ್ಯೆಗಳು ಪರಿಹಾರವಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಇದಕ್ಕೂ ಮೊದಲು ಯುವ ಮೋರ್ಚಾ ಕಾರ್ಯಕರ್ತರು ಸಚಿವೆಗೆ ಕಪ್ಪು ಬಾವುಟ ಪ್ರದರ್ಶನ ಮಾಡುವ ಯೋಜನೆ ರೂಪಿಸಿಕೊಂಡಿದ್ದರು. ಈ ಹಿನ್ನೆಲೆ ಮಣಿಪಾಲದ ರಜತಾದ್ರಿ ಕಚೇರಿ ಮುಂಭಾಗದಲ್ಲಿ ಭಾರೀ ಪೊಲೀಸ್ ಭದ್ರತೆ ನಿಯೋಜಿಸಲಾಗಿತ್ತು.

ಕೊನೆಯ ಕ್ಷಣದಲ್ಲಿ ಕಪ್ಪು ಬಾವುಟ ಪ್ರದರ್ಶನ ಕೈಬಿಟ್ಟು, ಗೋ ಬ್ಯಾಕ್ ಲಕ್ಷ್ಮೀ ಅಕ್ಕ ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸಲಾಯಿತು. ಈ ನಡುವೆ ಸಚಿವೆ ಕಾರಿನಲ್ಲೇ ನೇರವಾಗಿ ಕೆಡಿಪಿ ಸಭೆಗೆ ತೆರಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಿರಿಜನ ಹಾಡಿಯಲ್ಲಿ ಅನಧಿಕೃತ ಚರ್ಚ್: ತಮಿಳುನಾಡು ಮೂಲದ ಮಂದಿ ವಶಕ್ಕೆ
ಕಾರಿಂಜ ಸಹಿತ ಎರಡು ದೇವಸ್ಥಾನಕ್ಕೆ ಸಿಡಿಲಾಘಾತ