ವಿಶ್ವೇಶ್ವರಯ್ಯ ಕ್ರೀಡಾಂಗಣ ಅಭಿವೃದ್ಧಿಗೆ ಅನುದಾನ

KannadaprabhaNewsNetwork |  
Published : May 06, 2025, 12:16 AM IST

ಸಾರಾಂಶ

ಇದು ಜಿಲ್ಲಾ ಕ್ರೀಡಾಂಗಣವಾಗಿದ್ದು, ಇಲ್ಲಿ ರಾಷ್ಟ್ರೀಯ ಹಬ್ಬಗಳ ಜತೆಗೆ ಜಿಲ್ಲಾ ಮತ್ತು ರಾಜ್ಯಮಟ್ಟದ ಕ್ರೀಡೆಗಳು ನಡೆಸಲು ಅವಕಾಶವಿದೆ, ಅದಕ್ಕೆ ತಕ್ಕಂತೆ ಕ್ರೀಡಾಂಗಣಕ್ಕೆ ಅಗತ್ಯವಿರುವ ಎಲ್ಲಾ ಮೂಲಭೂತ ಅಗತ್ಯತೆಗಳನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಕೇಂದ್ರದ ಘನತೆಗೆ ತಕ್ಕಂತೆ ಕ್ರೀಡಾಂಗಣವನ್ನು ಮತ್ತಷ್ಟು ಅಭಿವೃದ್ದಿಗೊಳಿಸಬೇಕು.

ಕನ್ನಡಪ್ರಭ ವಾರ್ತೆ ಕೋಲಾರವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದ ಗ್ಯಾಲರಿ ಸುತ್ತ ಮೇಲ್ಚಾವಣೆ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಅಗತ್ಯವಾದ ವಿಶೇಷ ಅನುದಾನ ಮಂಜೂರು ಮಾಡಿಸಲು ಶಾಸಕರಿಗೆ ಮನವಿ ಮಾಡೋಣ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ತಿಳಿಸಿದರು.ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿನ ಜಿಲ್ಲಾ ಯುವಜನಸೇವಾ ಮತ್ತು ಕ್ರೀಡಾ ಇಲಾಖೆ ಕಚೇರಿಯಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾ ಕೇಂದ್ರದ ಘನತೆಗೆ ತಕ್ಕಂತೆ ಕ್ರೀಡಾಂಗಣವನ್ನು ಮತ್ತಷ್ಟು ಅಭಿವೃದ್ದಿಗೊಳಿಸುವ ಅಗತ್ಯವಿದೆ ಎಂದರು.

ನೀರಿಗಾಗಿ ಕೊಳವೆ ಬಾವಿ

ಈ ನಿಟ್ಟಿನಲ್ಲಿ ಶಾಸಕರಿಂದ ವಿಶೇಷ ಅನುದಾನ ಪಡೆಯುವುದು, ವಿವಿಧ ಕಂಪನಿಗಳ ಸಿಎಸ್‌ಆರ್ ನಿಧಿ ಪಡೆಯಲು ಸಹಾ ಯತ್ನಿಸಲಾಗುವುದು. ಕ್ರೀಡಾಂಗಣ ಮತ್ತು ಇಲ್ಲಿಗೆ ಬರುವ ಕ್ರೀಡಾಪಟುಗಳಿಗೆ ಅಗತ್ಯವಾದ ನೀರಿನ ಸಮಸ್ಯೆ ಪರಿಹಾರಕ್ಕೆ ಶಾಶ್ವತ ಕ್ರಮ ಅಗತ್ಯವಿದ್ದು, ಕೊಳವೆ ಬಾವಿ ಕೊರೆಸುವ ಕುರಿತು ಗಮನಹರಿಸುವುದಾಗಿ ಭರವಸೆ ನೀಡಿದರು.ಇದು ಜಿಲ್ಲಾ ಕ್ರೀಡಾಂಗಣವಾಗಿದ್ದು, ಇಲ್ಲಿ ರಾಷ್ಟ್ರೀಯ ಹಬ್ಬಗಳ ಜತೆಗೆ ಜಿಲ್ಲಾ ಮತ್ತು ರಾಜ್ಯಮಟ್ಟದ ಕ್ರೀಡೆಗಳು ನಡೆಸಲು ಅವಕಾಶವಿದೆ, ಅದಕ್ಕೆ ತಕ್ಕಂತೆ ಕ್ರೀಡಾಂಗಣಕ್ಕೆ ಅಗತ್ಯವಿರುವ ಎಲ್ಲಾ ಮೂಲಭೂತ ಅಗತ್ಯತೆಗಳನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಕ್ರೀಡಾಂಗಣ ಅಭಿವೃದ್ಧಿಪಡಿಸಬೇಕುಸಿಂಥೆಟಕ್ ಟ್ರ್ಯಾಕ್ ನಿರ್ಮಾಣ ಕಾಮಗಾರಿಯ ನಂತರ ಕ್ರೀಡಾಂಗಣವನ್ನು ಅತ್ಯಂತ ಸುಸಜ್ಜಿತವಾಗಿ ನಿರ್ವಹಿಸಲಾಗತ್ತಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಸಿಂಥೆಟಿಕ್ ಟ್ರ್ಯಾಕ್ ಹೊರತಾಗಿ ನಡೆಸುವ ವಿವಿಧ ಕ್ರೀಡೆಗಳಿಗೆ ಕ್ರೀಡಾಂಗಣದ ಸುತ್ತಮುತ್ತ ಇರುವ ಜಾಗವನ್ನು ಸದ್ಬಳಕೆ ಮಾಡಿಕೊಂಡು ಪ್ರತ್ಯೇಕವಾಗಿ ಕ್ರೀಡಾಂಗಣಗಳನ್ನು ಅಭಿವೃದ್ದಿಪಡಿಸಬೇಕು ಎಂದರು.ಇದಾದ ನಂತರ ಕ್ರೀಡಾ ವಸತಿ ನಿಲಯಕ್ಕೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿಗಳು ಅಲ್ಲಿನ ಕ್ರೀಡಾ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿ ಸುಸಜ್ಜಿತ ಸೌಲಭ್ಯಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ, ಮಕ್ಕಳು ವಸತಿ ಶಾಲೆಯಲ್ಲಿ ಕ್ರೀಡಾ ಸೌಲಭ್ಯ ಬಳಸಿಕೊಂಡು ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯ ಕ್ರೀಡಾಪಟುಗಳಾಗಿ ಹೊರಹೊಮ್ಮಲು ಅಗತ್ಯವಾದ ಪೂರಕ ವಾತಾವರಣ ಸೃಷ್ಟಿಗೆ ಸೂಚನೆ ನೀಡಿದರು.ಕ್ರೀಡಾಪಟುಗಳಿಗೆ ತರಬೇತಿ

ವಿವಿಧ ಕ್ರೀಡೆಗಳಿಗೆ ಅಗತ್ಯವಿರುವ ಕೋಚ್‌ಗಳ ಕುರಿತು ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ರಾಜ್ಯ, ರಾಷ್ಟ್ರೀಯ ಕ್ರೀಡೆಗಳಲ್ಲಿ ನಮ್ಮ ವಸತಿ ನಿಲಯದ ಕ್ರೀಡಾಳುಗಳ ಸಾಧಕರಾಗಿ ಹೊರಹೊಮ್ಮುವಂತೆ ಅವರನ್ನು ಸಜ್ಜುಗಲಿಸಬೇಕು. ಕ್ರೀಡಾಂಗಣದಲ್ಲಿ ಅಗತ್ಯವಿರುವ ಸಣ್ಣಪುಟ್ಟ ಕಾಮಗಾರಿಗಳನ್ನು ಶೀಘ್ರ ಮುಗಿಸಿಕೊಡಿ, ಕುಡಿಯುವ ನೀರು, ಶೌಚಾಲಯ ಸ್ವಚ್ಚತೆ ಮತ್ತಿತರ ಅಂಶಗಳ ಕುರಿತು ಗಮನಹರಿಸಿ ಎಂದು ಲೋಕೋಪಯೋಗಿ ಕಾರ್ಯಪಾಲಕ ಅಭಿಯಂತರರಿಗೆ ಡಿಸಿಯವರು ಸಲಹೆ ನೀಡಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಮಾತನಾಡಿ, ಈ ಹಿಂದೆ ಕ್ರೀಡಾಂಗಣದಲ್ಲಿ ರಾತ್ರಿ ವೇಳೆ ಅನೈತಿಕ ಚಟುವಟಿಕೆಗಳು ನಡೆಯುತ್ತಿತ್ತು ಎಂಬ ಆರೋಪವಿತ್ತು, ಆದರೆ ಇದೀಗ ಅಂತಹ ದೂರುಗಳಿಂದಮುಕ್ತವಾಗಿದೆ, ಇಲ್ಲಿ ಕೇವಲ ಕ್ರೀಡಾ ಚಟುವಟಿಕೆಗಳಿಗೆ ಪೂರಕ ವಾತಾವರಣ ಸೃಷ್ಟಿಗೆ ಅಗತ್ಯವಾದ ಬಂದೋಬಸ್ತ್ ಸೌಲಭ್ಯವನ್ನು ಪೊಲೀಸ್ ಇಲಾಖೆ ಒದಗಿಸಿಕೊಡಲಿದೆ ಎಂದು ಭರವಸೆ ನೀಡಿದರು.ಈ ಸಂದರ್ಭದಲ್ಲಿ ಕ್ರೀಡಾಂಗಣ ನಿರ್ವಹಣಾ ಸಮಿತಿಯ ಸದಸ್ಯರೂ ಆದ ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಪಿ.ಬಾಗೇವಾಡಿ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ರಾಮಮೂರ್ತಿ, ಡಿಡಿಪಿಐ ಕೃಷ್ಣಮೂರ್ತಿ, ನೆಹರು ಯುವಕೇಂದ್ರದ ಸಮನ್ವಯಾಧಿಕಾರಿ ಅಶ್ವಿನ್, ನಗರಸಭೆ ಆಯುಕ್ತ ಪ್ರಸಾದ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!