ಗ್ಯಾರಂಟಿ ಯೋಜನೆಗಳು ಬಡವರಿಗೆ ಅನುಕೂಲ

KannadaprabhaNewsNetwork |  
Published : Feb 23, 2024, 01:47 AM IST
ಫೋಟೊ ಶೀರ್ಷಿಕೆ : 22ಎಚ್‌ಯುಕೆ-1 ಹುಕ್ಕೇರಿಯಲ್ಲಿ ಗುರುವಾರ ಏರ್ಪಡಿಸಿದ ಗ್ಯಾರಂಟಿ ಯೋಜನೆಗಳ ಹೋಬಳಿ ಮಟ್ಟದ ಸಮಾವೇಶವನ್ನು ತಹಸೀಲದಾರ ಬಲರಾಮ ಕಟ್ಟಿಮನಿ ಉದ್ಘಾಟಿಸಿದರು.  | Kannada Prabha

ಸಾರಾಂಶ

ಅನ್ನಭಾಗ್ಯ, ಗೃಹಲಕ್ಷ್ಮೀ, ಶಕ್ತಿ, ಗೃಹಜ್ಯೋತಿ ಹಾಗೂ ವಿದ್ಯಾನಿಧಿ ಯೋಜನೆಗಳು ರಾಜ್ಯದಲ್ಲಿ ಕ್ರಾಂತಿಕಾರಿ ಬದಲಾವಣೆಗೆ ಕಾರಣವಾಗಿ ಕಾಂಗ್ರೆಸ್ ಸರ್ಕಾರ ಜನಪರ ಎನ್ನುವುದನ್ನು ನಿರೂಪಿಸಿವೆ.

ಕನ್ನಡಪ್ರಭ ವಾರ್ತೆ ಹುಕ್ಕೇರಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಆರ್ಥಿಕ ಹೊರೆ ತಗ್ಗಿದಂತಾಗಿದೆ ಎಂದು ಮಾಜಿ ಸಚಿವ ಶಶಿಕಾಂತ ನಾಯಿಕ ಹೇಳಿದರು.

ರವದಿ ಫಾರ್ಮಹೌಸ್‌ನಲ್ಲಿ ಗುರುವಾರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ಪುರಸಭೆ ಸಹಯೋಗದಲ್ಲಿ ಏರ್ಪಡಿಸಿದ ಗ್ಯಾರಂಟಿ ಯೋಜನೆಗಳ ಹುಕ್ಕೇರಿ ಹೋಬಳಿ ಮಟ್ಟದ ಸಮಾವೇಶದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ಬಡ, ಮಧ್ಯಮ ವರ್ಗ ಹಾಗೂ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬುವಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿವೆ ಎಂದರು.

ಅನ್ನಭಾಗ್ಯ, ಗೃಹಲಕ್ಷ್ಮೀ, ಶಕ್ತಿ, ಗೃಹಜ್ಯೋತಿ ಹಾಗೂ ವಿದ್ಯಾನಿಧಿ ಯೋಜನೆಗಳು ರಾಜ್ಯದಲ್ಲಿ ಕ್ರಾಂತಿಕಾರಿ ಬದಲಾವಣೆಗೆ ಕಾರಣವಾಗಿ ಕಾಂಗ್ರೆಸ್ ಸರ್ಕಾರ ಜನಪರ ಎನ್ನುವುದನ್ನು ನಿರೂಪಿಸಿವೆ. ಈ ಯೋಜನೆಗಳು ಬಡವರ ಕಲ್ಯಾಣಕ್ಕೆ ಪೂರಕವಾಗಿವೆ. ಇಡೀ ರಾಜ್ಯದ ಜನತೆ ಸುಖಿ ಜೀವನ ಸಾಗಿಸುವಂತಾಗಿದೆ. ಈ ಎಲ್ಲ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಸುಖಿ ಜೀವನ ಸಾಗಿಸಬೇಕು ಎಂದು ಹೇಳಿದರು.

ತಹಸೀಲ್ದಾರ ಬಲರಾಮ ಕಟ್ಟಿಮನಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಶಿರಸ್ತೆದಾರ ಲೋಕೋಶ ಢಂಗೆ, ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಸ್ಥಾನಿಕ ಎಂಜನಿಯರ್ ನೇಮಿನಾಥ ಖೆಮಲಾಪುರೆ, ಕೆಎಸ್‌ಆರ್‌ಟಿಸಿ ಘಟಕ ವ್ಯವಸ್ಥಾಪಕ ಬಿ.ಎಸ್.ಪಾಟೀಲ, ವಿ.ಎಸ್.ಕಾಗವಾಡೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಎಚ್.ಹೊಳೆಪ್ಪ, ಕಂದಾಯ ನಿರೀಕ್ಷಕ ಮಲ್ಲಿಕಾರ್ಜುನ ಸಾರಾಪುರಿ, ಪುರಸಭೆ ಸದಸ್ಯೆ ರೇಖಾ ಚಿಕ್ಕೋಡಿ, ಕಾಂಗ್ರೆಸ್ ಪ್ರಚಾರ ಸಮಿತಿ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ರಾಶಿಂಗೆ, ಮುಖಂಡ ಕೆಂಪಣ್ಣಾ ಶಿರಹಟ್ಟಿ, ಪ್ರಕಾಶ ಮೈಲಾಖೆ, ಕೆ.ವೆಂಕಟೇಶ, ಲಕ್ಷ್ಮಣ ಹೂಲಿ, ಕಿರಣ ಕರೋಶಿ, ಅನಂದ ಜಿರಲಿ, ಪ್ರಕಾಶ ಪಟ್ಟಣಶೆಟ್ಟಿ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಧಿಕಾರಿಗಳು ಜನರ ಸಮಸ್ಯೆಗಳನ್ನು ಅರಿತು ನಿವಾರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಪಂಚಮಸಾಲಿ ಪೀಠದಲ್ಲಿ ಭಾರೀ ‘ಲೆಕ್ಕಪತ್ರ ಹೈಡ್ರಾಮಾ’!