ನ.3ಕ್ಕೆ ಸುಗಮ ಸಂಭ್ರಮ, ಹಿರಿಯ ಸಾಧಕರಿಗೆ ಸನ್ಮಾನ

KannadaprabhaNewsNetwork |  
Published : Oct 29, 2024, 01:09 AM ISTUpdated : Oct 29, 2024, 01:10 AM IST
ಪೋಟೋ: 28ಎಸ್‌ಎಂಜಿಕೆಪಿ10ಶಿವಮೊಗ್ಗದ ಪತ್ರಿಕಾಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಶ್ರೀಗಂಧ ಸಂಸ್ಥೆಯ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಮಾತನಾಡಿದರು. | Kannada Prabha

ಸಾರಾಂಶ

ಸುದ್ದಿಗೋಷ್ಠಿಯಲ್ಲಿ ಶ್ರೀಗಂಧ ಸಂಸ್ಥೆಯ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಮಾತನಾಡಿದರು. ವಿನಯ್, ಉಮೇಶ್ ಆರಾಧ್ಯ, ಬಾಲು, ಹರೀಶ್ ಕಾರ್ಣಿಕ್, ಕುಪೇಂದ್ರ, ಮೋಹನ್‍ರಾವ್ ಜಾಧವ್ ಉಪಸ್ಥಿತರಿದ್ದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಶಿವಮೊಗ್ಗದ ಸಾಂಸ್ಕೃತಿಕ ಸಂಸ್ಥೆಯಾದ ‘ಶ್ರೀಗಂಧ’ ವತಿಯಿಂದ ನ.3ರಂದು ಸಂಜೆ 6 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಸುಗಮ ಸಂಭ್ರಮ, ಸುಗಮ ಸಂಗೀತ ಕ್ಷೇತ್ರದ ಹಿರಿಯ ಸಾಧಕರಿಗೆ ಸನ್ಮಾನ ಹಾಗೂ ಗೀತ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಗುರುಗುಹ ಸಂಗೀತ ಮಹಾವಿದ್ಯಾಲಯದ ಪ್ರಾಂಶುಪಾಲ ಶೃಂಗೇರಿ ನಾಗರಾಜ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕವಿಯ ಭಾವನೆಯನ್ನು ಎತ್ತಿಹಿಡಿದು ಸಾಹಿತ್ಯಕ್ಕೆ ಹೆಚ್ಚು ಒತ್ತುಕೊಟ್ಟು ಸೂಕ್ತವಾದ ಸಂಗೀತವನ್ನು ಸಂಯೋಜಿಸಿ ಹಾಡುವ ಭಾವಗೀತೆಗಳು, ಕರ್ನಾಟಕದಲ್ಲಿ ಮಾನ್ಯತೆ ಪಡೆದ ಕಲೆ, ಇಂತಹ ಭವ್ಯ ಪರಂಪರೆಯ ಮೂವರು ಮಹಾನ್ ಸಾಧಕ ಕಲಾವಿದರನ್ನು ಈ ಸಮಾರಂಭದಲ್ಲಿ ಸನ್ಮಾನಿಸಲಾಗುತ್ತಿದೆ ಎಂದು ಹೇಳಿದರು.

ಈ ಮಹಾನ್ ಕಲಾವಿದರು ಹಾಡಿ ಜನಪ್ರಿಯಗೊಳಿಸಿದ ಕನ್ನಡ ಗೀತೆಗಳ ಗಾಯನವನ್ನು ಶಿವಮೊಗ್ಗದ ಹೆಸರಾಂತ ಸಂಗೀತ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಕಲಾವಿದರು ಹಾಡಿ ಗೀತನಮನ ಸಲ್ಲಿಸಲಿದ್ದಾರೆ ಎಂದರು.

ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಈ ವಿಶೇಷ ಕಾರ್ಯಕ್ರಮದಲ್ಲಿ ಸುಗಮ ಸಂಗೀತದ ಖ್ಯಾತ ಹಿರಿಯ ಕಲಾವಿದರಾದ ಹೊ.ನಾ.ರಾಘವೇಂದ್ರ (ಗರ್ತಿಕೆರೆ ರಾಘಣ್ಣ), ಎಂ.ಕೆ.ಜಯಶ್ರೀ, ಪುತ್ತೂರು ನರಸಿಂಹ ನಾಯಕ್ ಹಾಗೂ ಕನ್ನಡ ನಾಡು- ನುಡಿಗೆ ವಿಶೇಷವಾಗಿ ಸೇವೆ ಸಲ್ಲಿಸಿದ ಶಿವಮೊಗ್ಗದ ಅಭಿರುಚಿ ಸಂಸ್ಥೆಯ ಅಧ್ಯಕ್ಷ ಡಾ.ಶಿವರಾಮಕೃಷ್ಣ, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಶಂಕರನಾರಾಯಣ ಶಾಸ್ತ್ರಿ ಹಾಗೂ ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಪ್ರತಿಷ್ಠಾನದ ಅಧ್ಯಕ್ಷೆ ಪ್ರೊ. ಕಿರಣ್ ದೇಸಾಯಿ ಅವರನ್ನು ಸನ್ಮಾನಿಸಲಾಗುವುದು ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಶ್ರೀಗಂಧ ಸಂಸ್ಥೆ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ವಹಿಸಲಿದ್ದು, ಜಿಪಂ ಮಾಜಿ ಸದಸ್ಯ ಕೆ.ಈ.ಕಾಂತೇಶ್ ಉಪಸ್ಥಿತರಿರುವರು ಎಂದು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ
ರಾಗಾ-ವೈಷ್ಣವ್‌ ಉದ್ಯೋಗ ಸೃಷ್ಟಿ ‘ಕ್ರೆಡಿಟ್‌ ವಾರ್’