ಕನ್ನಡಪ್ರಭ ವಾರ್ತೆ ನಾಪೋಕ್ಲು
ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಹೇಳಿದರು.ಸಮೀಪದ ಹೊದ್ದೂರು ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಹೊದ್ದೂರು ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.
ಮೂರು ವರ್ಷದಿಂದ ಆರು ವರ್ಷದೊಳಗಿನ ಮಕ್ಕಳಿಗೆ ಉತ್ತಮ ಆರೋಗ್ಯ ಆಹಾರ ಹಾಗೂ ಸರ್ಕಾರದಿಂದ ಅನುಷ್ಠಾನಗೊಂಡ ಯೋಜನೆಗಳ ಸೌಲಭ್ಯಗಳನ್ನು ದೊರಕಿಸಿ ಕೊಡುವಂತೆ ಹಾಗೂ ಮೂಲಭೂತ ಸೌಕರ್ಯಗಳನ್ನು ಅಂಗನವಾಡಿ ಕೇಂದ್ರ ಶಾಲೆಗಳಿಗೆ ನೀಡುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಂಸ ಮಾತನಾಡಿ, ಅಂಗನವಾಡಿ ಕೇಂದ್ರಕ್ಕೆ ಮೂರು ವರ್ಷದಿಂದ ಆರು ವರ್ಷದೊಳಗಿನ ಮಕ್ಕಳನ್ನು ದಾಖಲು ಮಾಡಿಸಿ ಇಲಾಖೆ ನೀಡುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಬ್ದುಲ್ಲ ಮಾತನಾಡಿ, ಅರ್ಹ ಫಲಾನುಭವಿಗಳು ಯೋಜನೆಗಳಿಂದ ವಂಚಿತರಾಗಬಾರದು . ವಿದ್ಯೆ ವಿನಯ ಎಂಬುದು ಮೊದಲು ಅಂಗನವಾಡಿ ಕೇಂದ್ರದಲ್ಲಿ ಪಡೆಯುವುದಾಗಿದೆ ಎಂದರು.ಗ್ರಾಮ ಪಂಚಾಯಿತಿ ಸದಸ್ಯೆ ಕುಸುಮ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿ ಸರ್ಕಾರಿ ಶಾಲೆ ಅಂಗನವಾಡಿ ಕೇಂದ್ರಗಳಿಗೆ ಮಕ್ಕಳನ್ನು ದಾಖಲಿಸುವಂತೆ ಸಲಹೆ ನೀಡಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೀತಾ ಲಕ್ಷ್ಮಿ ಮಾತನಾಡಿ ಇಲಾಖೆಗಳು ತಿಳಿಸಿದಂತೆ ಸಾರ್ವಜನಿಕರಿಗೆ ಅಂಗನವಾಡಿ ಆಶಾ ಕಾರ್ಯಕರ್ತೆಯರು ಮಾಹಿತಿ ನೀಡಿ ಸೌಲಭ್ಯವನ್ನು ಸಾರ್ವಜನಿಕರಿಗೆ ಸಿಗುವಂತೆ ಮಾಡಬೇಕು ಎಂದು ಮಾರ್ಗದರ್ಶನ ನೀಡಿದರು.
ನಿವೃತ್ತಿ ಹೊಂದಿದ ಅಂಗನವಾಡಿ ಕಾರ್ಯಕರ್ತೆ ಸರಸ್ವತಿ, ಇಂಜಿನಿಯರ್ ನವಾನಿ ಹಾಗೂ ಸಾಮಗ್ರಿ ಸರಬರಾಜುಗಾರ ಕರುಣಾಕರ್ ರೈ ಅವರಿಗೆ ವೇದಿಕೆಯಲ್ಲಿದ್ದ ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭ ಪಂಚಾಯಿತಿ ಉಪಾಧ್ಯಕ್ಷೇ ಅನುರಾವತಿ, ಸದಸ್ಯರಾದ ಹಮೀದ್, ಮೊಣ್ಣಪ್ಪ , ಸರಸು, ಲಕ್ಷ್ಮಿ, ಮಡಿಕೇರಿ ಅಂಗನವಾಡಿ ಕಾರ್ಯಕರ್ತೆ ಸಹಾಯಕಿ ಸಂಘದ ಅಧ್ಯಕ್ಷ ಪವಿತ್ರ , ಕಾರ್ಯದರ್ಶಿ ಆಶಾ ಲತಾ , ಬಾಲವಿಕಾಸ ಸಮಿತಿಯ ಅಧ್ಯಕ್ಷ ಮಮತಾ , ಅಂಗನವಾಡಿ ಕೇಂದ್ರದ ಕಾರ್ಯಕರ್ತ ಶೋಭಾ ಸಹಾಯಕಿ ಸುಜಾತ ಹಾಗೂ ಅಂಗನವಾಡಿ ಆಶಾ ಕಾರ್ಯಕರ್ತೆಯರು ಸಹಾಯಕಿಯರು ಪೋಷಕರು ಸಾರ್ವಜನಿಕರು ಪಾಲ್ಗೊಂಡಿದ್ದರು. ಮಹಿಳಾ ಮೇಲ್ವಿಚಾರಕ್ಕೆ ಶೀಲಾ
ಅಶೋಕ್ ನಿರೂಪಿಸಿದರು. ಆಶಾಲತಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.