ಬೇಡಿಕೆಗಳ ಈಡೇರಿಕೆಗೆ ಶಿಕ್ಷಕರ ಒತ್ತಾಯ

KannadaprabhaNewsNetwork |  
Published : Aug 06, 2024, 12:33 AM IST
೫ಕೆಜಿಎಫ್೪ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರು ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು. | Kannada Prabha

ಸಾರಾಂಶ

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ೨೦೧೬ರ ಪೂರ್ವದಂತೆ ಅರ್ಹತೆಯ ಆಧಾರದ ಮೇಲೆ ಪ್ರೌಢಶಾಲೆಗೆ ಬಡ್ತಿ ನೀಡಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ೨೦೧೬ರ ಪೂರ್ವದಂತೆ ಮುಖ್ಯ ಗುರುಗಳ ಹಾಗೂ ಹಿರಿಯ ಮುಖ್ಯ ಗುರುಗಳ ಹುದ್ದೆಗೆ ಸೇವಾ ಜೇಷ್ಟತೆಯ ಆಧಾರದ ಮೇಲೆ ಬಡ್ತಿ ನೀಡಬೇಡಬೇಕು

ಕನ್ನಡಪ್ರಭ ವಾರ್ತೆ ಕೆಜಿಎಫ್೨೦೧೭ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು ೨೦೧೬ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ ಇದರಿಂದ ಪ್ರಾಥಮಿಕ ಶಾಲಾ ಸೇವಾ ನಿರತ ಶಿಕ್ಷಕರಿಗಾಗಿರುವ ಅನ್ಯಾಯ ಸರಿಪಡಿಸುವುದು ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು.ನಗರದ ತಾಲೂಕು ಆಡಳಿತ ಸೌಧದ ಎದುರು ಜಮಾಯಿಸಿದ ಸದಸ್ಯರು ಅರ್ಹ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ೨೦೧೬ರ ಪೂರ್ವದಂತೆ ಅರ್ಹತೆಯ ಆಧಾರದ ಮೇಲೆ ಪ್ರೌಢಶಾಲೆಗೆ ಬಡ್ತಿ ನೀಡಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ೨೦೧೬ರ ಪೂರ್ವದಂತೆ ಮುಖ್ಯ ಗುರುಗಳ ಹಾಗೂ ಹಿರಿಯ ಮುಖ್ಯ ಗುರುಗಳ ಹುದ್ದೆಗೆ ಸೇವಾ ಜೇಷ್ಟತೆಯ ಆಧಾರದ ಮೇಲೆ ಬಡ್ತಿ ನೀಡಬೇಕೆಂದು ಆಗ್ರಹಿಸಿದರು.ಪೂರ್ವಾನ್ವಯಗೊಳಿಸಬೇಡಿ

೨೦೧೭ರ ವರೆಗೆ ನೇಮಕವಾದ ಶಿಕ್ಷಕರನ್ನು ೧ ರಿಂದ ೭ನೇ ತರಗತಿಗೆ ನೇಮಕವಾದ ಶಿಕ್ಷಕರೆಂದು ಪರಿಗಣಿಸಿ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳು, ೨೦೧೭ರ ನಂತರ ನೇಮಕವಾದ ಶಿಕ್ಷಕರಿಗೆ ಅನ್ವಯಿಸಬೇಕು ಹಾಗೂ ಯಾವುದೇ ಕಾರಣಕ್ಕೂ ೨೦೧೬ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು.೨೦೧೭ರ ವೃಂದ ಮತ್ತು ನೇಮಕಾತಿ ನಿಯಮಗಳು ೨೦೧೬ಕ್ಕಿಂತ ಮುಂಚೆ ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ, ಮೂಲತಃ ೧ ರಿಂದ ೭ನೇ ತರಗತಿ ಮತ್ತು ೮ನೇ ತರಗತಿಗೆ ನೇಮಕ ಹೊಂದಿದವರನ್ನು ಪಿಎಸ್‌ಟಿ ಎಂದು ಪದನಾಮ ಮಾಡಿ ೧ ರಿಂದ ೫ಕ್ಕೆ ಸೀಮಿತಗೊಳಿಸಿರುವುದನ್ನು ಹಿಂಪಡೆಯಬೇಕು.ಜ್ಯೇಷ್ಠತೆ ಆಧಾರದಲ್ಲಿ ಬಡ್ತಿ

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಮೊದಲಿನಂತೆ ಮುಖ್ಯ ಗುರುಗಳ ಹಾಗೂ ಹಿರಿಯ ಮುಖ್ಯ ಗುರುಗಳ ಹುದ್ದೆಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡಬೇಕು, ಅರ್ಹ ವಿದ್ಯಾರ್ಹತೆ ಹೊಂದಿದ ೨೦೧೬ ಕ್ಕಿಂತ ಮೊದಲು ನೇಮಕಾತಿ ಆಗಿರುವ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಸೇವಾ ಜೇಷ್ಟತೆಯ ರಕ್ಷಣೆಯೊಂದಿಗೆ ಬಡ್ತಿ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ನರಸಿಂಹಮೂರ್ತಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ನಾಗಭೂಷಣ, ಖಜಾಂಚಿ ರವಿಚಂದ್ರ ನಾಯ್ಡು, ಪ್ರಧಾನ ಕಾರ್ಯದರ್ಶಿ ಪಿ.ವಿ.ಶ್ರೀನಿವಾಸ್, ಉಮಾದೇವಿ, ಭರತ್, ಚಂದ್ರಮೌಳಿ ಇದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ