ಕನ್ನಡಪ್ರಭ ವಾರ್ತೆ ಅರಸೀಕೆರೆ
ನಗರದ ತಾಲೂಕು ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಆಚರಣಾ ಸಮಿತಿ ಹಾಗೂ ತಾಲೂಕು ಆಡಳಿತ ವತಿಯಿಂದ ಭಾನುವಾರ ಆಯೋಜಿಸಲಾಗಿದ್ದ ೭೬ನೇ ಗಣರಾಜ್ಯೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನವರಿ ೨೬ ಸಂವಿಧಾನ ಸಮರ್ಪಣಾ ದಿನ ಆಗಿದ್ದು, ಈ ಸಂವಿಧಾನದಲ್ಲಿ ದೇಶವನ್ನು ಆಳುವ ನಾಯಕನನ್ನು ಪ್ರಜೆಗಳೇ ಆಯ್ಕೆ ಮಾಡಿ ಪ್ರಜೆಗಳೇ ಸಾರ್ವಭೌಮನಾಗಿದ್ದಾನೆ. ನಾವೆಲ್ಲರೂ ಒಂದು ಎಂಬ ಭಾವನೆ ಸಂವಿಧಾನದ ನೀತಿಯಾಗಿದೆ. ಇಂತಹ ಸಂವಿಧಾನವನ್ನು ಉಳಿಸುವ ಕರ್ತವ್ಯ ನಮ್ಮದಾಗಿದೆ ಎಂದರು.
ದೇಶಕ್ಕಾಗಿ ನಿಸ್ವಾರ್ಥತೆಯಿಂದ ಶ್ರಮಿಸಿದ ಗಾಂಧೀಜಿ ಅಂಬೇಡ್ಕರ್‌ನಂತಹ ಮಹಾಪುರುಷರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಹಾಗೂ ರೈತದೇಶದ ಬೆನ್ನಲುಬು ಆಗಿದ್ದು, ರೈತ ಸಮುದಾಯದ ಸರ್ವತೋಮುಖ ಬೆಳವಣಿಗೆಗೆ ಆಡಳಿತ ವರ್ಗ ಶ್ರಮಿಸಬೇಕು ಎಂದರು.ಅಂಬೇಡ್ಕರ್ ತತ್ವ ಆಧರಿಸಿದ ಭಾರತ ದೇಶದ ಸಂವಿಧಾನ ಪ್ರಪಂಚದಲ್ಲೇ ಶ್ರೇಷ್ಠವಾಗಿದ್ದು ಮಾದರಿಯಾಗಿದೆ. ನಮ್ಮ ರಾಷ್ಟ್ರ ಜಾತ್ಯತೀತ ರಾಷ್ಟ್ರವಾಗಿದೆ. ದೇಶದಲ್ಲಿ ಕೆಲವರು ಜಾತೀಯತೆ ಭಾವನೆಗಳನ್ನು ಮೂಡಿಸುತ್ತಿರುವುದು ಬೇಸರವಾಗಿದೆ. ಜನ ಪ್ರೀತಿಯ ಸಂವಿಧಾನದಲ್ಲಿ ಭವ್ಯ ಭಾರತ ದೇಶದ ಪರಂಪರೆ ಉಳಿಯಬೇಕೆಂಬುದೇ ನನ್ನ ಆಶಯವಾಗಿದೆ ಎಂದು ಹೇಳಿದರು.
ತಹಸೀಲ್ದಾರ್ ಸಂತೋಷ್ ಕುಮಾರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಹಲವಾರು ಮಹನೀಯರು ತ್ಯಾಗ ಬಲಿದಾನವನ್ನು ಮಾಡಿದ್ದಾರೆ. ಅವರನ್ನು ಸ್ಮರಿಸಿ ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ನಮ್ಮ ದೇಶದ ಸಂವಿಧಾನ ಅರ್ಥಪೂರ್ಣವಾಗಿದ್ದು ಪ್ರತಿಯೊಬ್ಬರೂ ಸಂವಿಧಾನದ ಆಶಯವನ್ನು ಅರ್ಥೈಸಿಕೊಂಡು ವಿದ್ಯಾರ್ಥಿಗಳು ಹಾಗೂ ಯುವ ಸಮೂಹ ಸಾಧನೆಯ ಹಾದಿ ಹಿಡಿಯಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಗಣರಾಜ್ಯ ದಿನಾಚರಣೆಯ ಅಂಗವಾಗಿ ಭಾರತ ಸೇವಾ ದಳ, ಸ್ಕೌಟ್ಸ್ ಮತ್ತು ಗೈಡ್ಸ್, ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಪೊಲೀಸ್ ಇಲಾಖೆ, ಕೈಗೊಂಡಿದ್ದ ಪಥಸಂಚಲನ ಪ್ರೇಕ್ಷಕರ ಗಮನ ಸೆಳೆಯಿತು. ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಕ್ರೀಡಾಂಗಣದಲ್ಲಿ ನೆರೆದಿದ್ದ ಪ್ರೇಕ್ಷಕರ ಮೆಚ್ಚುಗೆಗೆ ನಿಬ್ಬೆರಗಾಗುವಂತೆ ಮಾಡಿತು. ಅತ್ಯುತ್ತಮ ಪ್ರದರ್ಶನ ನೀಡಿ ಪ್ರೇಕ್ಷಕರ ಮೆಚ್ಚುಗೆ ಪಡೆದ ಶಾಂತಿನಿಕೇತನ ಶಾಲೆಯ ಮಕ್ಕಳಿಗೆ ಪ್ರಶಸ್ತಿ ಪಾಲಕ ನೀಡುವ ಮೂಲಕ ಗೌರವಿಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಶಿವಲಿಂಗೇಗೌಡ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಗಣರಾಜ್ಯ ದಿನಾಚರಣೆಯ ಅಂಗವಾಗಿ ಭಾರತ ಸೇವ ದಳ, ಸ್ಕೌಟ್ಸ್ ಮತ್ತು ಗೈಡ್ಸ್, ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಪೊಲೀಸ್ ಇಲಾಖೆ, ಕೈಗೊಂಡಿದ್ದ ಪಥಸಂಚಲನ ಪ್ರೇಕ್ಷಕರ ಗಮನ ಸೆಳೆಯಿತು. ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಕ್ರೀಡಾಂಗಣದಲ್ಲಿ ನೆರೆದಿದ್ದ ಪ್ರೇಕ್ಷಕರ ಮೆಚ್ಚುಗೆಗೆ ನಿಬ್ಬೆರಗಾಗುವಂತೆ ಮಾಡಿತು.