ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ
ತಾಲೂಕಿನ ದೇವರಗುಡಿಪಲ್ಲಿ ಕಂದಾಯ ಇಲಾಖೆ ಮತ್ತು ತಾಪಂ ವತಿಯಿಂದ ಆಯೋಜಿಸಿದ್ದ ಜನಸ್ಪಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಶಾಸಕರು ಮಾತನಾಡಿದರು.
ಗ್ರಾಪಂ ಮಟ್ಟದ ಕಾರ್ಯಕ್ರಮಜನಸ್ಪಂದನಾ ಕಾರ್ಯಕ್ರಮದಲ್ಲಿ ನಾಗರಿಕರ ಸಮಸ್ಯಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವುದಲ್ಲದೆ ಪಿಂಚಣಿ, ಮಾಶಾಸನ ಇತ್ಯಾಧಿ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ಸುಲಭವಾಗಿ ದೊರೆಯುವಂತೆ ಮಾಡುವ ಉದ್ದೇಶದಿಂದ ಜನಸ್ಪಂದನಾ ಕಾರ್ಯಕ್ರಮವನ್ನು ಗ್ರಾ.ಪಂ ಮಟ್ಟದಲ್ಲಿ ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಫಲಾನುಭವಿಗಳಿಗೆ ಆದೇಶ ಪತ್ರ
ನರೇಗಾ ಸೇರಿದಂತೆ ತಾ.ಪಂ ಗ್ರಾ.ಪಂಗಳಲ್ಲಿ 472, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ250, ಆರೋಗ್ಯ ಇಲಾಖೆಯ 300 ಮಂದಿಗೆ ಸೇರಿದಂತೆ ಪಿಂಚಿಣಿ, ಭಾಗ್ಯಲಕ್ಷ್ಮೀ ಬಾಂಡ್ ಹಕ್ಕು ಪತ್ರಗಳನ್ನು ಹಾಗೂ ಮನೆ ಮಂಜೂರಾತಿ ಪತ್ರಗಳನ್ನು ಸೇರಿದಂತೆ ವಿವಿಧ ಯೋಜನೆಗಳಲ್ಲಿ 1500 ಕ್ಕೂ ಹೆಚ್ಚು ಫಲಾನುಭವಿಗಳಿಗೆ ಆದೇಶ ಪತ್ರಗಳನ್ನು ವಿತರಿಸಿದರು.ಈ ಸಂದರ್ಭದಲ್ಲಿ ತಹಸೀಲ್ದಾರ್ ಮನೀಷಾ ಎನ್ ಪತ್ರಿ, ತಾ.ಪಂ ಇಒ ರಮೇಶ್ರೆಡ್ಡಿ, ಟಿಹೆಚ್ಓ ಡಾ.ಸತ್ಯನಾರಾಯಣರೆಡ್ಡಿ, ಸಿಡಿಪಿಓ ರಮಚಂದ್ರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.