ಜೆಡಿಎಸ್ ಸಮಾವೇಶ ಪಕ್ಷದ ಕಾರ್ಯಕರ್ತರ ಸಭೆ ಮಾತ್ರ

KannadaprabhaNewsNetwork |  
Published : Jan 24, 2026, 02:45 AM IST
23ಎಚ್ಎಸ್ಎನ್18 :  | Kannada Prabha

ಸಾರಾಂಶ

ಜೆಡಿಎಸ್ ಬೃಹತ್ ಸಮಾವೇಶದ ಪೂರ್ವಸಿದ್ಧತೆಗಳನ್ನು ವೀಕ್ಷಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡರು ಹಾಗೂ ಸಂಸದರು ಈ ಸಮಾವೇಶಕ್ಕೆ ಭಯಗೊಂಡು, ಹತಾಶರಾಗಿ ಜೆಡಿಎಸ್ ವಿರುದ್ಧ ಅನಾವಶ್ಯಕ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ನಾವು ಎನ್‌ಡಿಎ ಸರ್ಕಾರದ ಭಾಗವಾಗಿದ್ದು, ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಶಾಸಕ ಎಚ್.ಡಿ. ರೇವಣ್ಣ ಹಾಗೂ ಪಕ್ಷದ ಎಲ್ಲಾ ನಾಯಕರು ಬಿಜೆಪಿ ಮುಖಂಡರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಜೆಡಿಎಸ್ ಎಂದಿಗೂ ಬಿಜೆಪಿ ವಿರೋಧಿ ಪಕ್ಷವಾಗಿಲ್ಲ. ಇದು ಕೇವಲ ಪಕ್ಷದ ಕಾರ್ಯಕರ್ತರ ಸಭೆಯಾಗಿದ್ದು, ಬಿಜೆಪಿ ತಿರಸ್ಕಾರ ಎಂಬ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದರು.

ಕನ್ನಡಪ್ರಭ ವಾರ್ತೆ ಹಾಸನಶನಿವಾರ ನಡೆಯಲಿರುವ ಜೆಡಿಎಸ್ ಬೃಹತ್ ಸಮಾವೇಶವು ಪಕ್ಷದ ವ್ಯಾಪ್ತಿಯಲ್ಲಿ ಕಾರ್ಯಕರ್ತರನ್ನು ಸಂಘಟಿಸುವ ಉದ್ದೇಶದಿಂದ ಮಾತ್ರ ಹಮ್ಮಿಕೊಳ್ಳಲಾಗುತ್ತಿದೆ. ಬಿಜೆಪಿ ವಿರುದ್ಧದ ಕಾರ್ಯಕ್ರಮವೆಂದು ತಪ್ಪಾಗಿ ಅರ್ಥೈಸಿಕೊಳ್ಳಬಾರದು. ನಾವು ಖಂಡಿತವಾಗಿಯೂ ಬಿಜೆಪಿ ಜೊತೆಗಿದ್ದೇವೆ ಎಂದು ಹಾಸನ ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಸ್ಪಷ್ಟಪಡಿಸಿದರು.

ಶನಿವಾರ ನಡೆಯಲಿರುವ ಜೆಡಿಎಸ್ ಬೃಹತ್ ಸಮಾವೇಶದ ಪೂರ್ವಸಿದ್ಧತೆಗಳನ್ನು ವೀಕ್ಷಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡರು ಹಾಗೂ ಸಂಸದರು ಈ ಸಮಾವೇಶಕ್ಕೆ ಭಯಗೊಂಡು, ಹತಾಶರಾಗಿ ಜೆಡಿಎಸ್ ವಿರುದ್ಧ ಅನಾವಶ್ಯಕ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ನಾವು ಎನ್‌ಡಿಎ ಸರ್ಕಾರದ ಭಾಗವಾಗಿದ್ದು, ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಶಾಸಕ ಎಚ್.ಡಿ. ರೇವಣ್ಣ ಹಾಗೂ ಪಕ್ಷದ ಎಲ್ಲಾ ನಾಯಕರು ಬಿಜೆಪಿ ಮುಖಂಡರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಜೆಡಿಎಸ್ ಎಂದಿಗೂ ಬಿಜೆಪಿ ವಿರೋಧಿ ಪಕ್ಷವಾಗಿಲ್ಲ. ಇದು ಕೇವಲ ಪಕ್ಷದ ಕಾರ್ಯಕರ್ತರ ಸಭೆಯಾಗಿದ್ದು, ಬಿಜೆಪಿ ತಿರಸ್ಕಾರ ಎಂಬ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದರು.

ಸಂಸದರು ಹಾಗೂ ಕಾಂಗ್ರೆಸ್ ನಾಯಕರು ಮೊದಲು ಲೋಕಸಭಾ ಚುನಾವಣೆಯಲ್ಲಿ ಯಾರು ಯಾರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದರು ಎಂಬುದನ್ನು ಆತ್ಮವಲೋಕನ ಮಾಡಿಕೊಳ್ಳಬೇಕು. ಹಾಸನ ಜಿಲ್ಲೆಯ ಬಿಜೆಪಿಯೊಂದಿಗೆ ಅವರು ಹೇಗೆ ರಾಜಕೀಯ ಹೊಂದಾಣಿಕೆ ಮಾಡಿಕೊಂಡಿದ್ದರು ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಇಂದಿಗೂ ಜೆಡಿಎಸ್ ಪ್ರಾಮಾಣಿಕವಾಗಿ ಬಿಜೆಪಿ ಜೊತೆ ಇದ್ದು, ಈ ಬೃಹತ್ ಸಮಾವೇಶ ಯಶಸ್ವಿಯಾಗುತ್ತಿರುವುದನ್ನು ಕಂಡು ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ ಎಂದು ಹೇಳಿದರು. ಈ ಸಮಾವೇಶದಲ್ಲಿ ಸುಮಾರು ಎರಡು ಲಕ್ಷಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆ ಇದ್ದು, ಇದು ಹಾಸನ ಜಿಲ್ಲೆಯ ರಾಜಕೀಯ ಇತಿಹಾಸದಲ್ಲೇ ದೊಡ್ಡ ಸಾಧನ ಸಮಾವೇಶವಾಗಲಿದೆ. ಹಿಂದೆ ಎರಡು ಬಾರಿ ಸಾಧನ ಸಮಾವೇಶಗಳನ್ನು ನಡೆಸಲಾಗಿದೆ. ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮವನ್ನು ನಾನು ತಿರಸ್ಕರಿಸಿ ಹೋಗಿರಲಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಇದುವರೆಗೆ ಹಾಸನ ಜಿಲ್ಲೆಗೆ ಒಂದು ರುಪಾಯಿ ಅನುದಾನವನ್ನೂ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು. ನಗರ ಪಾಲಿಕೆಗೆ ಹಾಸನ ಸೇರ್ಪಡೆಯಾದರೂ ಸಹ ಕಾಂಗ್ರೆಸ್ ಸರ್ಕಾರದಿಂದ ಇದುವರೆಗೆ ಒಂದು ಬಿಡಿಗಾಸು ಸಹ ದೊರಕಿಲ್ಲ. ಮುಂದಿನ ಮೂರು ವರ್ಷಗಳ ಕಾಲವೂ ಯಾವುದೇ ಅನುದಾನ ಅಥವಾ ಉದ್ಯೋಗ ನೀಡುವುದಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿರುವುದು ಜಿಲ್ಲೆಯ ಅಭಿವೃದ್ಧಿಗೆ ಹೊಡೆತವಾಗಿದೆ ಎಂದು ಕಿಡಿಕಾರಿದರು.

ಕುಮಾರಸ್ವಾಮಿ ಹಾಗೂ ರೇವಣ್ಣ ಅವರ ಆಡಳಿತಾವಧಿಯಲ್ಲಿ ಹಾಸನ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಆದರೆ ಕಾಂಗ್ರೆಸ್ ಸರ್ಕಾರದಿಂದ ಇದುವರೆಗೆ ಯಾವುದೇ ಗಮನಾರ್ಹ ಅಭಿವೃದ್ಧಿ ಕೆಲಸಗಳು ನಡೆದಿಲ್ಲ. ಇದರಿಂದಲೇ ಕಾಂಗ್ರೆಸ್ ಮುಖಂಡರು ಹತಾಶರಾಗಿ ಜೆಡಿಎಸ್ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ ಎಂದು ಶಾಸಕ ಹೆಚ್.ಪಿ. ಸ್ವರೂಪ್ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೊನ್ನವಳ್ಳಿಯಲ್ಲಿ ದಾನಶೂರ ಕರ್ಣ ನಾಟಕ ಪ್ರದರ್ಶನ
ರಾಮನಾಥಪುರದಲ್ಲಿ ಮಠದ ಅಭಿವೃದ್ಧಿ ಕಾಮಗಾರಿ ವೀಕ್ಷಿಸಿದ ಅಶೋಕ್‌ ಹಾರನಹಳ್ಳಿ