ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರವಾಗುವ ಸುದ್ದಿಗಳ ನೈಜತೆಯನ್ನು ಅರಿತು ಪ್ರಸಾರ ಮಾಡಬೇಕು. ಕೆಲವೊಮ್ಮೆ ಸುದ್ದಿಗಳನ್ನು ಕೊಡುವುದರಿಂದ ಆಗುವ ಅಪಾರ್ಥಕ್ಕೆ ಇಡೀ ಸಮಾಜ ಬೆಲೆ ತೆರಬೇಕಾಗುತ್ತದೆ. ಪತ್ರಕರ್ತನಿಗೆ ವಿಷಯದ ಕುರಿತ ಸರಿಯಾದ ತಿಳಿವಳಿಕೆ ಹಾಗೂ ಪದಗಳ ಬಳಕೆಯ ಪರಿಜ್ಞಾನ ಅಗತ್ಯ. ಪತ್ರಕರ್ತರು ತಮ್ಮ ಕೆಲಸದ ಒತ್ತಡದ ನಡುವೆಯೂ ಕುಟುಂಬದವರ ಜೊತೆ ಕಾಲ ಕಳೆಯಲು ಸಮಯ ಮೀಸಲಿಡಬೇಕು. ಪತ್ರಕರ್ತರಲ್ಲಿ ಒಗ್ಗಟ್ಟಿದ್ದಾಗ ಮಾತ್ರ ಸಂಘಟನೆ ಬೆಳೆಯಲು ಸಾಧ್ಯ ಎಂದು ಕಿವಿಮಾತು ಹೇಳಿದರು.
ಕನ್ನಡಪ್ರಭ ವಾರ್ತೆ ಬೇಲೂರು
ಪತ್ರಕರ್ತರು ಕಾನೂನು ಮತ್ತು ಕಾಯ್ದೆಗಳ ಬಗ್ಗೆ ತಿಳಿದುಕೊಳ್ಳುವುದರ ಜೊತೆಗೆ ನೈಜ ಸುದ್ದಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಎಸ್ ಶಶಿಕಲಾ ಹೇಳಿದರು.ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ವಕೀಲರ ಸಂಘದ ಸಹಯೋಗದಲ್ಲಿ ಪತ್ರಕರ್ತರಿಗೆ ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪತ್ರಕರ್ತರಿಗೆ ಕಾನೂನಿನ ಬಗ್ಗೆ ಎಷ್ಟೇ ತಿಳಿವಳಿಕೆ ಇದ್ದರೂ ಹೊಸ ಕಾನೂನುಗಳು ಬರುತ್ತಿರುತ್ತವೆ. ನ್ಯಾಯಾಧೀಶರಾಗಿದ್ದರೂ ನಿವೃತ್ತರಾಗುವವರೆಗೂ ನಾವು ಕಾನೂನುಗಳ ಬಗ್ಗೆ ಅಧ್ಯಯನ ಮಾಡುತ್ತಲೇ ಇರುತ್ತೇವೆ. ಹೀಗಿರುವಾಗ ಪತ್ರಕರ್ತರೂ ಕಾನೂನುಗಳ ಬಗ್ಗೆ ತಿಳಿದುಕೊಳ್ಳುವುದು ಅಗತ್ಯ. ಅವುಗಳ ಬಗ್ಗೆ ಅರಿವಿದ್ದರೆ ಸುದ್ದಿಗಳನ್ನು ಮಾಡುವಾಗ ಎಚ್ಚರಿಕೆಯಿಂದ ನಿರ್ವಹಿಸಲು ಸಾಧ್ಯವಾಗುತ್ತದೆ. ಪತ್ರಿಕೋದ್ಯಮ ಸವಾಲಿನ ವೃತ್ತಿಯಾಗಿದ್ದು ಕಷ್ಟ, ಬೆದರಿಕೆ, ಮಾನಸಿಕ ಒತ್ತಡಗಳ ನಡುವೆ ಕಾರ್ಯ ನಿರ್ವಹಿಸಬೇಕಾಗಿದೆ. ಕಾನೂನಿನ ಚೌಕಟ್ಟಿನೊಳಗೆ ಸುದ್ದಿಗಳನ್ನು ಬಿತ್ತರಿಸಬೇಕು. ಪತ್ರಕರ್ತರು ಇಂತಹ ಕಾರ್ಯಾಗಾರಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರವಾಗುವ ಸುದ್ದಿಗಳ ನೈಜತೆಯನ್ನು ಅರಿತು ಪ್ರಸಾರ ಮಾಡಬೇಕು. ಕೆಲವೊಮ್ಮೆ ಸುದ್ದಿಗಳನ್ನು ಕೊಡುವುದರಿಂದ ಆಗುವ ಅಪಾರ್ಥಕ್ಕೆ ಇಡೀ ಸಮಾಜ ಬೆಲೆ ತೆರಬೇಕಾಗುತ್ತದೆ. ಪತ್ರಕರ್ತನಿಗೆ ವಿಷಯದ ಕುರಿತ ಸರಿಯಾದ ತಿಳಿವಳಿಕೆ ಹಾಗೂ ಪದಗಳ ಬಳಕೆಯ ಪರಿಜ್ಞಾನ ಅಗತ್ಯ. ಪತ್ರಕರ್ತರು ತಮ್ಮ ಕೆಲಸದ ಒತ್ತಡದ ನಡುವೆಯೂ ಕುಟುಂಬದವರ ಜೊತೆ ಕಾಲ ಕಳೆಯಲು ಸಮಯ ಮೀಸಲಿಡಬೇಕು. ಪತ್ರಕರ್ತರಲ್ಲಿ ಒಗ್ಗಟ್ಟಿದ್ದಾಗ ಮಾತ್ರ ಸಂಘಟನೆ ಬೆಳೆಯಲು ಸಾಧ್ಯ ಎಂದು ಕಿವಿಮಾತು ಹೇಳಿದರು.ಆರಕ್ಷಕ ವೃತ್ತ ನಿರೀಕ್ಷಕ ರೇವಣ್ಣ ಮಾತನಾಡಿ ಇತ್ತೀಚಿನ ದಿನಗಳಲ್ಲಿ ನಕಲಿ ಪತ್ರಕರ್ತರ ಸಂಖ್ಯೆ ಹೆಚ್ಚಾಗುತ್ತಿದ್ದು ನಕಲಿ ಯಾರು, ಅಸಲಿ ಯಾರು ಎಂಬುದು ಗೊತ್ತಾಗದೆ ಗೊಂದಲವಾಗಿದೆ. ತಾತ್ವಿಕ ವಿಚಾರವನ್ನು ವಿಚಾರ ತಿಳಿಯದೆ ಇಲ್ಲಸಲ್ಲದ ಪ್ರಶ್ನೆಗಳನ್ನು ಕೇಳುತ್ತಾ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಪತ್ರಕರ್ತರು ಹೆಚ್ಚಾಗುತ್ತಿದ್ದಾರೆ. ಟಿಆರ್‌ಪಿ ಹೆಚ್ಚು ಮಾಡಿಕೊಳ್ಳಲು ಇತ್ತೀಚಿನ ದಿನಗಳಲ್ಲಿ ವಾಹಿನಿಗಳು ಇಲ್ಲಸಲ್ಲದ ಸುದ್ದಿಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿವೆ. ಯೂಟ್ಯೂಬರ್‌ಗಳ ಸಂಖ್ಯೆಯು ಹೆಚ್ಚಾಗುತ್ತಿದ್ದು ಜನರಲ್ಲಿ ಗೊಂದಲ ಮೂಡಿಸುವ ಸುದ್ದಿಗಳನ್ನು ಬಿತ್ತರಿಸುತ್ತಿದ್ದಾರೆ ಎಂದರು. ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಬಿ ಬಿ ಶಿವರಾಜ್ ಪ್ರಸ್ತಾವಿಕ ನುಡಿಗಳನ್ನಾಡಿ ಪತ್ರಕರ್ತರು ದಿನನಿತ್ಯ ಮಾನಸಿಕ ಒತ್ತಡದ ನಡುವೆ ಕೆಲಸ ಮಾಡುತ್ತಿದ್ದಾರೆ. ಅನಾರೋಗ್ಯಕ್ಕೆ ತುತ್ತಾದಾಗ ಅವರಿಗೆ ಸಹಾಯ ನೀಡಲು ಸಂಘದಲ್ಲಿ ಆರೋಗ್ಯ ನಿಧಿ ಪ್ರಾರಂಭಿಸಿದ್ದು ಮಾಜಿ ಶಾಸಕ ಕೆ ಎಸ್ ಲಿಂಗೇಶ್ ಎರಡು ಲಕ್ಷ ಹಾಗೂ ಎಚ್‌ಡಿಸಿ ಬ್ಯಾಂಕಿನ ನಿರ್ದೇಶಕ ಎಂಎ ನಾಗರಾಜ್ 1 ಲಕ್ಷ ಮತ್ತು ಪತ್ರಿಕಾಗೋಷ್ಠಿಗಳಿಂದ ಬಂದ ಒಂದು ಲಕ್ಷ ಸೇರಿ 5 ಲಕ್ಷ ಹಣ ಶೇಖರಿಸಿದ್ದು 20 ಲಕ್ಷದವರೆಗೆ ಹಣವನ್ನು ಕ್ರೋಢೀಕರಿಸಲು ಮುಂದಾಗುವುದಲ್ಲದೇ ಈ ಹಣವನ್ನು ಬೇರೆ ಕಾರ್ಯಕ್ರಮಗಳಿಗೆ ಬಳಸದೆ ಪತ್ರಕರ್ತರ ಆರೋಗ್ಯಕ್ಕಾಗಿ ಮೀಸಲಿಟ್ಟಿದೆ ಎಂದು ತಿಳಿಸಿದರು.ಪತ್ರಕರ್ತರ ಸಂಘದ ಅಧ್ಯಕ್ಷ ರಘುನಾಥ್, ತಾಲೂಕು ವಕೀಲರ ಸಂಘದ ಅಧ್ಯಕ್ಷ ಸಿ.ಎಂ ಪೃಥ್ವಿ, ಕಾರ್ಯದರ್ಶಿ ಬಿಸಿ ಪುಟ್ಟಸ್ವಾಮಿಗೌಡ ಮಾತನಾಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.