ಕನ್ನಡದಲ್ಲಿ ನಾಮಫಲಕ ಹಾಕಲು ಕರವೇ ಆಗ್ರಹ

KannadaprabhaNewsNetwork |  
Published : Sep 17, 2025, 01:05 AM IST
16ಬಿಜಿಪಿ-1ಎ | Kannada Prabha

ಸಾರಾಂಶ

ರಾಜ್ಯ ಸರ್ಕಾರ ಶೇ.60 ರಷ್ಟು ಕನ್ನಡ ಶೇ.40ರಷ್ಟು ಅಂಗ್ಲಭಾಷೆಯಲ್ಲಿ ನಾಮಫಲಕ ಕಡ್ಡಾಯವಾಗಿ ಹಾಕಬೇಕೆಂದು ಆದೇಶ ಹೊರಡಿಸಿದ್ದು, ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮುಂಗಟ್ಟುಗಳ ಪರವಾನಗಿ ರದ್ದುಪಡಿಸಿ ಜೈಲು ಸೇರಿದಂತೆ 10 ಸಾವಿರ ರೂ.ಗಳ ದಂಡ ವಿಧಿಸಬಹುದು ಎಂಬುದಾಗಿ ಆದೇಶಿಸಿ 2 ವರ್ಷಗಳು ಕಳೆದರೂ ಸಹ ತಾಲೂಕಿನಲ್ಲಿ ಬಹುತೇಕ ಅಂಗಡಿ ಮುಂಗಟ್ಟುಗಳ ಮೇಲೆ ಇಂಗ್ಲೀಷ್ ನಾಮಫಲಕಗಳೇ ಎದ್ದು ಕಾಣುತ್ತಿವೆ

ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ

ತಾಲೂಕಿನಾದ್ಯಾಂತ ಕಡ್ಡಾಯವಾಗಿ ಅಂಗಡಿ ಮುಗ್ಗಟ್ಟುಗಳ ಮೇಲೆ ಕನ್ನಡ ಭಾಷೆಯಲ್ಲಿಯೇ ನಾಮಫಲಕಗಳನ್ನು ಅಳವಡಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾವೇದಿಕೆ(ನಾರಯಣಗೌಡ) ಬಣದ ಕಾರ್ಯಕರ್ತರು ತಹಸೀಲ್ದಾರ್ ಮತ್ತು ಪುರಸಭೆ ಮುಖ್ಯಾಧಿಕಾರಿಗಳಿಗೆ ಪ್ರತೇಕವಾಗಿ ಮನವಿ ಪತ್ರವನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಕರವೇ ತಾಲೂಕು ಅಧ್ಯಕ್ಷ ಕೆ.ಎನ್.ಹರೀಶ್ ಮಾತನಾಡಿ, ಬಾಗೇಪಲ್ಲಿ ಆಂದ್ರಪ್ರದೇಶದ ಗಡಿಭಾಗವಾಗಿರುವ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಕನ್ನಡಮಯವನ್ನಾಗಿಸುವ ನಿಟ್ಟಿನಲ್ಲಿ ಕಳೆದ 25 ವರ್ಷಗಳಿಂದ ಇಲ್ಲಿನ ಕರವೇ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರುತ್ತಿದೆ ಎಂದರು.

ಇಂಗ್ಲಿಷ್‌ನಲ್ಲಿ ನಾಮಫಲಕ

ರಾಜ್ಯ ಸರ್ಕಾರ ಶೇ.60 ರಷ್ಟು ಕನ್ನಡ ಶೇ.40ರಷ್ಟು ಅಂಗ್ಲಭಾಷೆಯಲ್ಲಿ ನಾಮಫಲಕ ಕಡ್ಡಾಯವಾಗಿ ಹಾಕಬೇಕೆಂದು ಆದೇಶ ಹೊರಡಿಸಿದ್ದು, ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮುಂಗಟ್ಟುಗಳ ಪರವಾನಗಿ ರದ್ದುಪಡಿಸಿ ಜೈಲು ಸೇರಿದಂತೆ 10 ಸಾವಿರ ರೂ.ಗಳ ದಂಡ ವಿಧಿಸಬಹುದು ಎಂಬುದಾಗಿ ಆದೇಶಿಸಿ 2 ವರ್ಷಗಳು ಕಳೆದರೂ ಸಹ ತಾಲೂಕಿನಲ್ಲಿ ಬಹುತೇಕ ಅಂಗಡಿ ಮುಂಗಟ್ಟುಗಳ ಮೇಲೆ ಇಂಗ್ಲೀಷ್ ನಾಮಫಲಕಗಳೇ ಎದ್ದು ಕಾಣುತ್ತಿವೆ ಎಂದು ಆರೋಪಿಸಿದರು.

ಕನ್ನಡ ನಾಮಫಲಕ ಹಾಕಲು ಗಡುವು

ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ತಾಲೂಕಿನಲ್ಲಿ ಕನ್ನಡ ನಾಮಫಲಕ ಅಳವಡಿಸದ ಅಂಗಡಿ ಮುಗ್ಗಟುಗಳ ಮಾಲೀಕರ ವಿರುದ್ದ ಕಾನೂನು ಕ್ರಮಕ್ಕೆ ಮುಂದಾಗಬೇಕೆಂದು ಅಧಿಕಾರಿಗಳನ್ನು ಒತ್ತಾಯಿಸಿದ ಅವರು, ಮುಂಬರುವ ಕನ್ನಡ ರಜ್ಯೋತ್ಸವದ ವೇಳೆಗೆ ಶೇ.100 ರಷ್ಟು ಕನ್ನಡ ನಾಮಫಲಕವನ್ನು ಕಡ್ಡಾಯವಾಗಿ ಅಳವಡಿಸಲು ಕ್ರಮಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಕರವೇ ವತಿಯಿಂದ ಉಗ್ರ ಹೋರಾಟಕ್ಕೆ ಮುಮದಾಗಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.

ನಂತರ ಕರವೇ ಕಾರ್ಯಕರ್ತರು ತಹಶೀಲ್ದಾರ್ ಮನೀಷಾ ಎನ್ ಪತ್ರಿ ಮತ್ತು ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್ ರವರಿಗೆ ಮನವಿಪತ್ರವನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಕರವೇ ಮಹಿಳಾ ಜಿಲ್ಲಾಧ್ಯಕ್ಷೆ ಸುಜಾತಮ್ಮ, ಜಿಲ್ಲಾ ಉಪಾಧ್ಯಕ್ಷ ರಾಮರೆಡ್ಡಿ, ತಾಲೂಕು ಉಪಾಧ್ಯಕ್ಷ ಚಿನ್ನು, ಕಾರ್ಯದರ್ಶಿ ಮಂಜುನಾಥ್, ಸಂಘಟನಾ ಕಾರ್ಯದರ್ಶಿ ಶಂಕರ್, ಕಾರ್ಮಿಕ ಘಟಕದ ಕೃಷ್ಣಪ್ಪ, ವೆಂಕಟೇಶ್, ಖಜಾಂಚಿ ನಾರಾಯಣಸ್ವಾಮಿ, ವಿದ್ಯಾರ್ಥಿ ಘಟಕದ ಗಂಗರಾಜು, ಮೂರ್ತಿ, ರಾಜು ಮತ್ತಿತರರು ಇದ್ದರು.

PREV

Recommended Stories

ಗ್ರಾಮೀಣ ಭಜನಾ ಮಂಡಳಿಗಳಲ್ಲಿ ತತ್ವಪದಗಳು ಜೀವಂತ
ರಾಮದುರ್ಗ ಧನಲಕ್ಷ್ಮೀ ಶುಗರ್ ಚುನಾವಣೆ: ಸತತ 4ನೇ ಬಾರಿಗೆ ಯಾದವಾಡರ ನೇತೃತ್ವಕ್ಕೆ ಜಯ