ಕನ್ನಡಪ್ರಭ ವಾರ್ತೆ ಗೌರಿಬಿದನೂರು
ಭ್ರಷ್ಟಾಚಾರ ವಿರುದ್ಧ ಮತ
ಅಣ್ಣಾ ಹಜಾರೆ ನೇತೃತ್ವದ ಭ್ರಷ್ಟಾಚಾರ ವಿರೋಧಿ ಆಂದೋಲನಕ್ಕೆ ಬೆಂಬಲಿಸಿ ದೆಹಲಿ ಜನರು ಆಪ್ ಗೆ ಬೆಂಬಲಿಸಿದ್ದರು. ಆದರೆ ಅವರ ಆಡಳಿತ ವೈಖರಿ ಭ್ರಷ್ಟಾಚಾರ ನೋಡಿ ಜನ ರೋಸಿ ಹೋಗಿದ್ದರು. ಹಾಗಾಗಿ ಮತದಾರ ಬದಲಾವಣೆ ಬಯಸಿ ಬಿಜೆಪಿಯನ್ನು ಬೆಂಬಲಿಸಿದ್ದಾನೆ ಎಂದರು.ಬಿಜೆಪಿ ನಗರ ಮಂಡಲದ ಅಧ್ಯಕ್ಷ ಮಾರ್ಕೆಟ್ ಮೋಹನ್ ರವರು ಮಾತನಾಡಿ, ಭ್ರಷ್ಟಾಚಾರದ ನಿರ್ಮೂಲನೆ ಮಾಡುತ್ತೇನೆ ಎಂದು ಅರವಿಂದ್ ಕೇಜ್ರಿವಾಲ್ ಬಹುಕೋಟಿ ಅಬಕಾರಿ ಹಗರಣದಲ್ಲಿ ಸಿಲುಕಿಕೊಂಡರು. ಈ ಎಲ್ಲಾ ಅಕ್ರಮಗಳನ್ನು ನೋಡಿ ಜನ ಅಭಿವೃದ್ಧಿಗಾಗಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ನಮ್ಮ ರಾಜ್ಯದಲ್ಲಿ ಕೂಡ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ ಎಂದರು ಇದೇ ಸಂದರ್ಭದಲ್ಲಿ ಎಬಿವಿಪಿ ಚಂದ್ರಣ್ಣ, ಪ್ರಧಾನ ಕಾರ್ಯದರ್ಶಿಗಳಾದ ಮೃತ್ಯುಂಜಯ ಜಯಣ್ಣ ,ಕೋಡಿರ್ಲಪ್ಪ, ನಕ್ಕಲಹಳ್ಳಿ ರಾಜು, ವೆಂಕಟಾದ್ರಿ, ಮಂಜುನಾಥ್ ರಾವ್, ಪ್ರವೀಣ್ ಕುಮಾರ್, ಪಾರ್ವತಮ್ಮ ,ಫ್ಯಾಕ್ಟರಿ ರಾಮು, ಶಾಂತಕುಮಾರ್ ಮತ್ತಿತರರು ಭಾಗವಹಿಸಿದ್ದರು.